ಬೆಂಗ್ರೆಯಿಂದ ಕಾರಂಗಲ್ಪಾಡಿವರೆಗೆ ಆಯುಕ್ತರಿಂದ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

KannadaprabhaNewsNetwork |  
Published : Oct 07, 2026, 03:00 AM IST
ಮನಪಾ ಆಯುಕ್ತ ರಾಹುಲ್‌ ರತ್ನಂ ಪಾಂಡೆ ನಗರದ ವಿವಿಧೆಡೆ ಭೇಟಿ ನೀಡಿದರು | Kannada Prabha

ಸಾರಾಂಶ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಸೋಮವಾರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ ಸ್ಥಳೀಯರ ಅಹವಾಲುಗಳನ್ನು ಆಲಿಸಿ, ವಿವಿಧ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ವಿವಿಧ ಪ್ರದೇಶಗಳಿಗೆ ಸೋಮವಾರ ಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ ಭೇಟಿ ನೀಡಿ ಸ್ಥಳೀಯರ ಅಹವಾಲುಗಳನ್ನು ಆಲಿಸಿ, ವಿವಿಧ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಬೆಂಗ್ರೆ ಮಹಾಜನ ಸಭಾದ ಮನವಿಯ ಮೇರೆಗೆ ಆಯುಕ್ತರು ಸುಲ್ತಾನ್ ಬತ್ತೇರಿಯಿಂದ ಕಸ್ಬಾ ಬೆಂಗ್ರೆಗೆ ದೋಣಿ ಮೂಲಕ ಪ್ರಯಾಣಿಸಿ, ಅಲ್ಲಿನ ಮುಖಂಡರು ಹಾಗೂ ಸ್ಥಳೀಯರನ್ನು ಭೇಟಿಯಾಗಿ ಅವರ ಅಹವಾಳು ಆಲಿಸಿದರು.ಸ್ಥಳೀಯರು ಪ್ರಸ್ತಾಪಿಸಿದ ಸಮಸ್ಯೆಗಳ ಕುರಿತು ಸಭೆ ನಡೆಸಿದ ಆಯುಕ್ತರು, ಸ್ವಯಂಸೇವಾ ಸಂಸ್ಥೆಗಳು ಹಾಗೂ 600ರಿಂದ 1,000 ವಿದ್ಯಾರ್ಥಿಗಳಿರುವ ಶಾಲೆಗಳ ಸಹಕಾರದೊಂದಿಗೆ ಬೀಚ್‌ಗಳು ಮತ್ತು ಜಲಮೂಲಗಳ ಸ್ವಚ್ಛತೆಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಜಲಮೂಲಗಳಿಂದ ಪ್ಲಾಸ್ಟಿಕ್ ಹಾಗೂ ಇತರ ತ್ಯಾಜ್ಯವನ್ನು ತೆರವುಗೊಳಿಸಲು ವೇಸ್ಟ್ ಟ್ರ್ಯಾಪ್‌ಗಳನ್ನು ಬಳಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಈ ಸಂಬಂಧ ಮೂರು ದಿನಗಳೊಳಗೆ ಕಾರ್ಯಯೋಜನೆ ಸಿದ್ಧಪಡಿಸುವಂತೆ ಸೂಚಿಸಿದರು.

ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಸಾಗರಮಾಲಾ ಯೋಜನೆ ಅನುಷ್ಠಾನದ ಸಾಧ್ಯತೆಗಳ ಪರಿಶೀಲಿಸುವ ನಿಟ್ಟಿನಲ್ಲಿ ಪ್ರವಾಸೋದ್ಯಮ, ಕರಾವಳಿ ನಿಯಂತ್ರಣ ವಲಯ ಹಾಗೂ ಮೀನುಗಾರಿಕೆ ಇಲಾಖೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಸಭೆ ಆಯೋಜಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆಯುಕ್ತರು ಸೂಚಿಸಿದರು.ಬೆಂಗ್ರೆ ಪ್ರದೇಶದಲ್ಲಿನ ವಿದ್ಯುತ್ ಕಂಬಗಳು, ಎಲ್‌ಇಡಿ ದೀಪಗಳ ನಿರ್ವಹಣೆ ಹಾಗೂ ರಸ್ತೆ ಸಮಸ್ಯೆಗಳ ಕುರಿತು ಪರಿಶೀಲಿಸಿ, ಅಗತ್ಯ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಂಡು ಸಮಯಬದ್ಧವಾಗಿ ಪರಿಹರಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಸ್ಥಳೀಯರ ಮನವಿಯ ಮೇರೆಗೆ 10 ಘಟಕಗಳ ಸಾಮರ್ಥ್ಯದ ಸಾರ್ವಜನಿಕ ಶೌಚಾಲಯ ನಿರ್ಮಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.ಕರಂಗಲಪಾಡಿಯಲ್ಲಿ ಸಾರ್ವಜನಿಕರ ಅಹವಾಲು ಹಾಗೂ ಒಳಚರಂಡಿ ಸಮಸ್ಯೆಗಳನ್ನು ಆಲಿಸಿದ ಆಯುಕ್ತರು, 10 ದಿನಗಳೊಳಗೆ ಕಾಮಗಾರಿಯ ಅಂದಾಜು ಸಿದ್ಧಪಡಿಸಿ, ಸ್ಥಳೀಯರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಅಂತಿಮಗೊಳಿಸುವುದಾಗಿ ತಿಳಿಸಿದರು. ಸಮಸ್ಯೆಯ ತಾಂತ್ರಿಕ ಅಂಶಗಳನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.ಉಜ್ಜೋಡಿ ಮಹಾಕಾಳಿ ದೇವಸ್ಥಾನದ ಸಮೀಪ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗೆ ಭೇಟಿ ನೀಡಿದ ಆಯುಕ್ತರು ಕಾಮಗಾರಿಯನ್ನು ಪರಿಶೀಲಿಸಿದರು. ನಿರ್ಮಾಣಕ್ಕೆ ಸಂಬಂಧಿಸಿದ ಬ್ಲೂಪ್ರಿಂಟ್‌ನ್ನು ಸಮಗ್ರವಾಗಿ ಪರಿಶೀಲಿಸಿ, ಸಾರ್ವಜನಿಕರ ಅನುಕೂಲಕ್ಕೆ ಯಾವ ರೀತಿಯ ಕಾಮಗಾರಿ ಸೂಕ್ತವಾಗಿರುತ್ತದೆ ಎಂಬುದನ್ನು ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.ನಡುಪಾಲಿ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಮಾಹಿತಿ ಪಡೆದರು. ಜೆಪ್ಪು-ಕುಡುಪಾಡಿ ಪ್ರದೇಶಕ್ಕೂ ಭೇಟಿ ನೀಡಿದ ಅವರು, ಅಲ್ಲಿ ನಡೆಯುತ್ತಿರುವ ತಡೆಗೋಡೆ ಹಾಗೂ ಕಾಂಪೌಂಡ್ ಗೋಡೆ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿದರು.

ಪಾಲಿಕೆಯ ಆರೋಗ್ಯ ಹಾಗೂ ಎಂಜಿನಿಯರಿಂಗ್ ವಿಭಾಗದ ಅಧಿಕಾರಿಗಳು, ಕೆಪಿಟಿಸಿಎಲ್ ಅಧಿಕಾರಿಗಳು, ಸಮುದಾಯ ಸಂಘಟಕರು ಹಾಗೂ ಸ್ಥಳೀಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ಮುದ್ದೇಬಿಹಾಳ, ತಾಳಿಕೋಟೆ ಕೆರೆಗಳಿಗೆ ನೀರು
ಸಿಎಂ ಪರಿಹಾರ ನಿಧಿಗೆ ₹ 2,600 ನೀಡಿದ ರೈತ