ಕನ್ನಡಪ್ರಭ ವಾರ್ತೆ ಬಂಟ್ವಾಳ
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸ್ಥಳಕ್ಕೆ ಭೇಟಿ ನೀಡಿದರು. ಬೆಳಗ್ಗೆ 6 ಗಂಟೆಯಿಂದಲೇ ಕರ್ತವ್ಯ ನಿರತರಾಗಿದ್ದ ಅಧಿಕಾರಿ ಮತ್ತು ಸಿಬ್ಬಂದಿಗೆ ತಾವೇ ಸ್ವತಃ ಮಧ್ಯಾಹ್ನದ ಊಟವನ್ನು ಬಡಿಸಿದ ಜಿಲ್ಲಾಧಿಕಾರಿ ಸಿಬ್ಬಂದಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
205-ಬಂಟ್ವಾಳದ ಸಹಾಯಕ ಚುನಾವಣಾಧಿಕಾರಿ ಡಾ. ಉದಯ ಶೆಟ್ಟಿ, ಚುನಾವಣಾ ನೋಡಲ್ ಅಧಿಕಾರಿ ರಾಜು ಮೋಗವೀರ, ತಹಸೀಲ್ದಾರ್ ಅರ್ಚನಾ ಭಟ್, ಸೆಕ್ಟರ್ ಅಧಿಕಾರಿಗಳು, ಚುನಾವಣಾ ಉಪತಹಸೀಲ್ದಾರ್ ನವೀನ್ ಕುಮಾರ್ ಬೆಂಜನಪದವು, ಉಪತಹಸೀಲ್ದಾರ್ ದಿವಾಕರ ಮುಗಳಿಯ, ವಿಷಯ ನಿರ್ವಾಹಕ ಮಂಜುನಾಥ ಕೆ.ಎಚ್., ಕಂದಾಯ ನಿರೀಕ್ಷಕರು, ತಾಲೂಕು ಕಚೇರಿ ಸಿಬ್ಬಂದಿ ವರ್ಗ,ಗ್ರಾಮ ಆಡಳಿತ ಅಧಿಕಾರಿಗಳು ಮತ್ತು ಗ್ರಾಮಸಹಾಯಕರು, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.