ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಿ: ಸುಮತಿ

KannadaprabhaNewsNetwork |  
Published : Oct 26, 2026, 03:45 AM IST
ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಿಶೇಷ ಶಿಬಿರ | Kannada Prabha

ಸಾರಾಂಶ

ಯುವಜನಾಂಗವು ಡ್ರಗ್ಸ್ ಅಥವಾ ಮಾದಕ ದ್ರವ್ಯಗಳ ಬಳಕೆಯನ್ನು ತ್ಯಜಿಸುವುದರೊಂದಿಗೆ ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಬಾಲಾಪರಾಧಿ ಪೊಲೀಸ್ ಘಟಕದ ಮಕ್ಕಳ ಕಲ್ಯಾಣ ವಿಭಾಗದ ಸಹಾಯಕ ಉಪನಿರೀಕ್ಷಕ ಸುಮತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಸೋಮವಾರಪೇಟೆ: ಯುವಜನಾಂಗವು ಡ್ರಗ್ಸ್ ಅಥವಾ ಮಾದಕ ದ್ರವ್ಯಗಳ ಬಳಕೆಯನ್ನು ತ್ಯಜಿಸುವುದರೊಂದಿಗೆ ವ್ಯಸನಮುಕ್ತ ಭಾರತ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯ ಬಾಲಾಪರಾಧಿ ಪೊಲೀಸ್ ಘಟಕದ ಮಕ್ಕಳ ಕಲ್ಯಾಣ ವಿಭಾಗದ ಸಹಾಯಕ ಉಪನಿರೀಕ್ಷಕ ಸುಮತಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.ತಾಲೂಕಿನ ಮಾದಾಪುರ ಡಿ.ಚೆನ್ನಮ್ಮ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಅಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿರುವ ವಾರ್ಷಿಕ ವಿಶೇಷ ಶಿಬಿರದಲ್ಲಿ ಭಾನುವಾರದಂದು ಮಾದಕ ದ್ರವ್ಯದ ದುಷ್ಪರಿಣಾಮಗಳು ಮತ್ತು ರಸ್ತೆ ಸುರಕ್ಷತೆ ಕುರಿತು ಅವರು ಉಪನ್ಯಾಸ ನೀಡಿದರು.

ಯುವ ಜನಾಂಗವು ದುಶ್ಟಟಗಳಿಂದ ದೂರವಿದ್ದು ಉತ್ತಮ ಆರೋಗ್ಯ ಮತ್ತು ಉತ್ತಮ ಭವಿಷ್ಯ ಆಯ್ಕೆ ಮಾಡಿಕೊಳ್ಳಬೇಕು ಎಂದರು. ಹದಿಹರೆಯದವರು ಮತ್ತು ಯುವಕರಲ್ಲಿ ಮಾದಕ ವಸ್ತುಗಳ ಬಳಕೆಯು ಅವರ ಶಿಕ್ಷಣ ಹಾಗೂ ವೃತ್ತಿಜೀವನವನ್ನು ಹಾಳು ಮಾಡುತ್ತದೆ. ಮಾದಕ ವ್ಯಸನವು ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಹಾನಿಗೊಳಿಸುವ ಒಂದು ಗಂಭೀರ ಕಾಯಿಲೆಯಾಗಿದೆ ಎಂದರು. ಯಾವುದೇ ಕಾರಣಕ್ಕೂ ಮದ್ಯ ಅಥವಾ ಮಾದಕ ದ್ರವ್ಯ ಸೇವಿಸಿ ವಾಹನ ಚಾಲನೆ ಮಾಡಬಾರದು ಎಂದು ಎಚ್ಚರಿಕೆಯ ಮಾತುಗಳನ್ನಾಡಿದರು.ಕಾಲೇಜಿನ ದೈಹಿಕ ಶಿಕ್ಷಣ ಉಪನ್ಯಾಸಕ ಎಂ.ಎ. ನಾಚಪ್ಪ ಅಧ್ಯಕ್ಷತೆ ವಹಿಸಿದ್ದರು. ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾದ ಎ.ಎಂ. ಭರತ್ ಕುಮಾರ್, ಶಿಭಿರಾಧಿಕಾರಿ ಎನ್.ಎನ್. ಮನೋಹರ್, ಉಪನ್ಯಾಸಕರಾದ ಪ್ರಫುಲ್ಲ, ಪ್ರೌಢಶಾಲಾ ಸಹ ಶಿಕ್ಷಕರಾದ ಪಿ.ಜಿ. ಗ್ರೇಸಿ, ಬಿ.ಎಸ್. ಅನಿತ, ಭವಾನಿ, ಅನ್ವರ್ ಪಾಷ, ಸಬೀನ, ನೇತ್ರಾವತಿ, ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಶ್ಮಿ ಸಾಮಂತ್‌ಗೆ ಉಡುಪಿ ಬಿಜೆಪಿ ಅಭಿನಂದನೆ
ಮುದರಂಗಡಿ ಪ್ರಜಾಸೇವಾ ಸಭೆ: 44 ಅರ್ಜಿ ವಿಲೇ