ಬಾಲ ಕಾರ್ಮಿಕ ಪದ್ಧತಿ ತೊಲಗಿಸಲು ಪಣ ತೊಡಿ

KannadaprabhaNewsNetwork |  
Published : Jun 13, 2025, 02:03 AM IST
12ಕೆಜಿಎಫ್‌2 | Kannada Prabha

ಸಾರಾಂಶ

ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯ ಪೂರ್ವದಿಂದಲೇ ರಚಿಸಲಾಗಿದ್ದು, ನಂತರ ಅನೇಕ ಬಾಲ ಕಾರ್ಮಿಕರ ಕಾಯ್ದೆಗಳನ್ನು ಜಾರಿಗೊಳಿಸಿ ಬಾಲಕಾರ್ಮಿಕರ ನಿರ್ಮೂಲನೆಗೆ ಸರ್ಕಾರಗಳು ಶ್ರಮಿಸುತ್ತಿವೆ. ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು

ಕನ್ನಡಪ್ರಭ ವಾರ್ತೆ ಕೆಜಿಎಫ್ ಬಾಲ ಕಾರ್ಮಿಕ ಪದ್ಧತಿ ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಮಾರಕವಾಗಿದೆ. ಬಾಲಕಾರ್ಮಿಕ ಪದ್ದತಿ ನಿರ್ಮೂಲನೆಗೆ ಸಂವಿಧಾನ, ಸರ್ಕಾಕಾರಗಳು ಅನೇಕ ಕಾಯ್ದೆ-ಕಾನೂನುಗಳನ್ನು ಜಾರಿಗೊಳಿಸಿದ್ದು, ಇವುಗಳನ್ನು ಕಟ್ಟುನಿಟ್ಟಾಗಿ ಕಾರ್ಮಿಕ ಇಲಾಖೆ ಅನುಷ್ಠಾನಗೊಳಿಸಬೇಕಿದೆ ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ವಿನೋದ್‌ಕುಮಾರ್.ಎಂ. ಅಭಿಪ್ರಾಯಪಟ್ಟರು.ನಗರದ ಉರಿಗಾಂಪೇಟೆಯ ಸರಕಾರಿ ಪ್ರೌಢಶಾಲೆಯಲ್ಲಿ ಕಾರ್ಮಿಕರ ಇಲಾಖೆ, ಕೆಜಿಎಫ್ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ, ಸಹೋಯದಲ್ಲಿ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು,

ಮಕ್ಕಳನ್ನು ಕೆಲಸಕ್ಕೆ ಬಳಸಬೇಡಿ

ಕಾರ್ಮಿಕ ಇಲಾಖೆಯ ಅಧಿಕಾರಿಗಳ ಇಚ್ಚಾಶಕ್ತಿ ಹಾಗೂ ಪಾಲಕ-ಪೋಷಕ, ಉದ್ಯೋಗದಾತರು ಸೇರಿದಂತೆ ಎಲ್ಲರ ಸಹಕಾರದಿಂದ ಬಾಲಕಾರ್ಮಿರನ್ನು ಕೆಲಸದಿಂದ ಹೊರಗಿಡಬಹುದು, ಮಕ್ಕಳು ದೇಶದ ಅಸ್ತಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು, ಮಕ್ಕಳೇ ಭವಿಷ್ಯದ ಆಧಾರ ಸ್ತಂಬಗಳು ಎಂದರು.ನ್ಯಾಯಮೂರ್ತಿ ಶಮಿದ.ಕೆ. ಮಾತನಾಡಿ, ಕಾರ್ಮಿಕ ಕಾನೂನುಗಳು ಸ್ವಾತಂತ್ರ್ಯ ಪೂರ್ವದಿಂದಲೇ ರಚಿಸಲಾಗಿದ್ದು, ನಂತರ ಅನೇಕ ಬಾಲ ಕಾರ್ಮಿಕರ ಕಾಯ್ದೆಗಳನ್ನು ಜಾರಿಗೊಳಿಸಿ ಬಾಲಕಾರ್ಮಿಕರ ನಿರ್ಮೂಲನೆಗೆ ಸರ್ಕಾರಗಳು ಶ್ರಮಿಸುತ್ತಿವೆ. ಮಕ್ಕಳು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಮುಖವಾಗಿ ಗುಣಮಟ್ಟದ ಶಿಕ್ಷಣವನ್ನು ನೀಡಬೇಕು ಎಂದರು.

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ

ದೇಶದಲ್ಲಿ ಬಡತನ ನಿರ್ಮೂಲನೆಯಾದರೆ ಬಾಲ ಕಾರ್ಮಿಕತೆ ನಿರ್ಮೂಲನೆಯಾತ್ತದೆಂಬ ಸಂಗತಿಯನ್ನು ಸರ್ಕಾರಗಳು ಮಕ್ಕಳಿಗೆ ಅನೇಕ ಮೂಲಸೌಕರ್ಯಗಳನ್ನು ನೀಡುತ್ತಿವೆ, ಸರ್ಕಾರ ನೀಡುವ ಸೌಕರ್ಯಗಳಾದ ಮಕ್ಕಳು ವಿದ್ಯಾಭ್ಯಾಸಕ್ಕೆ ಎಲ್ಲ ತಾಲೂಕು ಕೇಂದ್ರಗಳನ್ನು ವಸತಿ ಶಾಲೆಗಳನ್ನು ಪ್ರಾರಂಬಿಸಿದ್ದು ಪಾಲಕ-ಪೋಷಕ ವರ್ಗದವರು ತಮ್ಮ ಮಕ್ಕಳನ್ನು ಬಾಲ ಕಾರ್ಮಿಕರನ್ನಾಗಿ ಮಾಡದೆ, ಸಮಾಜದಲ್ಲಿ ಉತ್ತಮ ಶಿಕ್ಷಣ ನೀಡಿ ಸದೃಢ ಮಾನವ ಸಂಪನ್ಮೂಲವನ್ನಾಗಿಸಿ ಎಂದು ಸಲಹೆ ನೀಡಿದರು.ವಕೀಲರ ಸಂಘದ ಅಧ್ಯಕ್ಷ ರಾಜಗೋಪಲಗೌಡ ಮಾತನಾಡಿ, ಕಾರ್ಮಿಕ ಇಲಾಖೆ ಅಧಿಕಾರಿಗಳು ಹೋಟೆಲ್, ಕಿರಾಣಿ ಅಂಗಡಿ, ಸಣ್ಣ ಪುಟ್ಟ ಕಾರ್ಖಾನೆಗಳಲ್ಲಿ ದುಡಿಮೆಗೆ ಪೋಷಕರು ಮಕ್ಕಳನ್ನು ಕಳುಹಿಸಿಕೊಡುತ್ತಾರೆ. ಅಂತಹ ಮಕ್ಕಳನ್ನು ತಪಾಸಣೆ ಮಾಡಿ ಸರಕಾರದ ವಸತಿ ಶಾಲೆಗಳಿಗೆ ದಾಖಲಿಸಿ ಶಿಕ್ಷಣವನ್ನು ನೀಡುವಂತಹ ಕೆಲಸವನ್ನು ಮಾಡಬೇಕಿದೆ ಎಂದರು.ಬಾಲಕಾರ್ಮಿಕ ಪಿಡುಗು ತೊಲಗಿಸಿ

ಕ್ಷೇತ್ರ ಶಿಕ್ಷಣಾಧಿಕಾರಿ ಅನಿತಾ ಮಾತನಾಡಿ, ಬಾಲ ಕಾರ್ಮಿಕ ಪಿಡುಗುನ್ನು ತೊಲಗಿಸಲು ೨೦೨೫ ರ ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನದ ಧ್ಯೇಯವಾಕ್ಯ, ಪ್ರಗತಿ ಸ್ವಷ್ಟವಾಗಿದೆ, ಆದರೆ ಇನ್ನೂ ಹೆಚ್ಚಿನದನ್ನು ಮಾಡಬೇಕಾಗಿದೆ, ಪ್ರಯತ್ನಗಳು ವೇಗಗೊಳಿಸೋಣ. ಈ ವರ್ಷದ ಧ್ಯೇಯವಾಕ್ಯವು ಸಾಧಿಸಿದ ಪ್ರಗತಿ ಮತ್ತು ಜಾಗತಿಕ ಗುರಿಗಳನ್ನು ತಲುಪಲು ಕ್ರಮವನ್ನು ತೀವ್ರಗೊಳಿಸುವ ತುರ್ತು ಎರಡನ್ನು ಪ್ರತಿಬಿಂಬಿಸುವುದಾಗಿ ತಿಳಿಸಿದರು. ಈ ಸಂರ್ದರ್ಭದಲ್ಲಿ ವಕೀಲರ ಸಂಘದ ಪದಾಧಿಕಾರಿಗಳು ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ