ಮೂಡುಬಿದಿರೆ : ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಉಳಿಯಬೇಕಾದರೆ ಪತ್ರಕರ್ತರು ಸತ್ಯ, ನಿಷ್ಠೆ ಮತ್ತು ಸಾಮಾಜಿಕ ಬದ್ಧತೆಯನ್ನು ವೃತ್ತಿಯ ಮೂಲ ಮೌಲ್ಯಗಳನ್ನಾಗಿಸಿಕೊಂಡು, ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಒಳಗಾಗದೆ ವಾಸ್ತವಾಂಶಗಳನ್ನು ವರದಿ ಮಾಡಬೇಕು ಎಂದು ಟಿವಿ 5 ಸುದ್ದಿ ವಾಹಿನಿ ಮುಖ್ಯ ಸಂಪಾದಕ ರಮಾಕಾಂತ್ ಅಭಿಪ್ರಾಯಪಟ್ಟರು.
ಅಧ್ಯಕ್ಷತೆ ವಹಿಸಿದ್ದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಮಾತನಾಡಿ, ಪತ್ರಕರ್ತರು ಸತ್ಯ, ಪ್ರಾಮಾಣಿಕತೆ ಹಾಗೂ ಸಾಮಾಜಿಕ ಜವಾಬ್ದಾರಿಯನ್ನು ತಮ್ಮ ವೃತ್ತಿಯ ಮೂಲ ಆಶಯವನ್ನಾಗಿಸಿಕೊಳ್ಳಬೇಕು. ಯಾವುದೇ ಒತ್ತಡ ಅಥವಾ ಪ್ರಭಾವಕ್ಕೆ ಮಣಿಯದೆ ವಾಸ್ತವಾಂಶಗಳನ್ನು ಅರಿತು ನಿಷ್ಪಕ್ಷಪಾತವಾಗಿ ವರದಿ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಆಳ್ವಾಸ್‌ನಲ್ಲಿ ಕಲಿತ ವಿದ್ಯಾರ್ಥಿಗಳು ಹೊರಜಗತ್ತಿನಲ್ಲಿ ತಾವು ಆಳ್ವಾಸ್‌ನ ಹಿರಿಯ ವಿದ್ಯಾರ್ಥಿಗಳೆಂದು ಹೆಮ್ಮೆಯಿಂದ ಗುರುತಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಪ್ರಕಾಶ್ ಡಿ. ರಾಂಪುರ ಮಾತನಾಡಿ, ಪ್ರಸ್ತುತ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳ ವೃತ್ತಿಪರ ಅನುಭವ ಮತ್ತು ಮಾರ್ಗದರ್ಶನವನ್ನು ಒದಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶ ಎಂದರು. ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು. ದುರ್ಗಾಪ್ರಸನ್ನ ಸ್ವಾಗತಿಸಿ, ಚಿದಾನಂದ್ ಡಿ. ರುದ್ರಾಪುರ್‌ಮಠ್ ನಿರೂಪಿಸಿದರು.