ಕನ್ನಡಪ್ರಭ ವಾರ್ತೆ ಮಂಗಳೂರು
ಬಂಟ್ವಾಳ ವಿಧಾನಸಭಾ ಕ್ಷೇತ್ರದ ವತಿಯಿಂದ ಬಿ.ಸಿ. ರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಪ್ರಬುದ್ಧರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಬಂಟ್ವಾಳ ಕ್ಷೇತ್ರದಲ್ಲಿ ಮತದಾರರನ್ನು ಬಿಜೆಪಿಯವರನ್ನಾಗಿ ಮಾರ್ಪಾಡು ಮಾಡುವ ಶಕ್ತಿ ಪ್ರಬುದ್ಧರಿಗೆ ಇದೆ ಎಂಬ ವಿಶ್ವಾಸವಿದ್ದು, ಚುನಾವಣೆಯಲ್ಲಿ ಬದಲಾವಣೆಗೆ ಪ್ರಬುದ್ಧರ ಪಾತ್ರ ಮಹತ್ತರವಾಗಿದೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನು ಬದ್ಧನಿದ್ದು, ಇದು ನನ್ನ ಅಜೆಂಡಾವಾಗಿದೆ ಎಂದು ತಿಳಿಸಿದರು.ರಾಷ್ಟ್ರ ವಿರೋಧಿ ಚಟುವಟಿಕೆಗಳನ್ನು ನಡೆಸುವ ಸಂಘಟನೆ ಮತ್ತು ವ್ಯಕ್ತಿಗಳನ್ನು ಮಟ್ಟ ಹಾಕಲು ಕಾನೂನಡಿ ವ್ಯವಸ್ಥೆ ಮಾಡುತ್ತೇನೆ. ಪ್ರವೀಣ್ ನೆಟ್ಟಾರು ಹತ್ಯೆಗೆ ಕಾರಣೀಕರ್ತರಾದ ವ್ಯಕ್ತಿಗಳನ್ನು ಹಾಗೂ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ ಎಂದು ಕ್ಯಾ.ಬ್ರಿಜೇಶ್ ಚೌಟ ಹೇಳಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಮುಂದಿನ ಅವಧಿಯಲ್ಲಿ ಬಹಳಷ್ಟು ದೊಡ್ಡ ಯೋಜನೆಗಳನ್ನು ಜಾರಿಮಾಡಲು 400ಕ್ಕೂ ಅಧಿಕ ಸ್ಥಾನಗಳ ಅಗತ್ಯವಿದ್ದು, ಮೋದಿ ಕಂಡಿರುವ ಕನಸನ್ನು ಕೈಗೂಡಿಸಲು ಪ್ರತಿಯೊಬ್ಬರು ಬಿಜೆಪಿಗೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.
ಕುಲಾಲ, ವಿಶ್ವಕರ್ಮ ಸಮುದಾಯದವರೊಂದಿಗೆ ಕ್ಯಾ. ಚೌಟ ಸಮಾಲೋಚನೆ
ಬಳಿಕ ಮಾತನಾಡಿದ ಅವರು, ರಾಷ್ಟ್ರೀಯತೆ ಮತ್ತು ಹಿಂದೂ ವಿಚಾರ ಧಾರೆಗಳಿಗೆ ಗೌರವ ತರುವ ಜತೆಗೆ ಪ್ರಮಾಣಿಕವಾಗಿ ಅಭಿವೃದ್ದಿಗೆ ಹೆಚ್ಚು ಒತ್ತು ನೀಡುತ್ತೇನೆ ಎಂದು ಭರವಸೆ ನೀಡಿದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಮಂಡಲದ ಅಧ್ಯಕ್ಷ ಚೆನ್ನಪ್ಪ ಆರ್. ಕೋಟ್ಯಾನ್, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಭಾರಿ ಜಗದೀಶ್ ಶೇಣವ ಇದ್ದರು..................ಕಾರ್ಯಕರ್ತನ ಮನೆಗೆ ಭೇಟಿಕ್ಯಾ.ಬ್ರಿಜೇಶ್ ಚೌಟ ಅವರು ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಇತ್ತೀಚೆಗೆ ಅನಾರೋಗ್ಯದ ಕಾರಣದಿಂದಾಗಿ ಸಾವನ್ನಪ್ಪಿದ ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು ಅವರ ಮನೆಗೆ ಬೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು..............................
ಮಂಗಳೂರು: 1971ರಲ್ಲಿ ಭಾರತ- ಬಾಂಗ್ಲಾ ಯುದ್ಧದಲ್ಲಿ ಪಾಲ್ಗೊಂಡಿದ್ದ ವಾಯುಪಡೆಯ ಯೋಧ ದಿವಾಕರ್ ಅವರು ಕ್ಯಾ. ಬ್ರಿಜೇಶ್ ಚೌಟ ಅವರಿಗೆ ತನ್ನ ಒಂದು ತಿಂಗಳ ಪಿಂಚಣಿ ದುಡ್ಡನ್ನು ದಾನ ನೀಡಿ ಚುನಾವಣೆ ವೆಚ್ಚಕ್ಕೆ ನೆರವಾಗಿದ್ದಾರೆ.
ಸೇನೆಯಲ್ಲಿದ್ದವರು ದೇಶದ ಬಗ್ಗೆ ಕಾಳಜಿ ಇದ್ದವರು. ಇಂಥವರು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ಕಡಿಮೆಯಾಗಬಹುದೆಂಬ ವಿಶ್ವಾಸ ಇದೆ. ಜನಸಾಮಾನ್ಯರ ಪರವಾಗಿ ಸಂಸತ್ತಿನಲ್ಲಿ ಧ್ವನಿ ಎತ್ತುವರೆಂಬ ವಿಶ್ವಾಸ ಇದೆ ಎಂದು ಹೇಳಿದರು.