ಭರವಸೆ ಈಡೇರಿಸಲು ಬದ್ದ: ಶಾಸಕ ಪೊನ್ನಣ್ಣ

KannadaprabhaNewsNetwork |  
Published : Jan 18, 2026, 03:00 AM IST
 | Kannada Prabha

ಸಾರಾಂಶ

ಚುನಾವಣೆ ಸಂಧರ್ಭ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ನೀಡಿದ್ದ ಭರವಸೆಯನ್ನು ಈಡೇರಿಸಲು ಬದ್ದನಿದ್ದೇನೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಚುನಾವಣೆ ಸಂಧರ್ಭ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು ನೀಡಿದ್ದ ಭರವಸೆಯನ್ನು ಈಡೇರಿಸಲು ಬದ್ದನಿದ್ದೇನೆ ಎಂದು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.ಮಡಿಕೇರಿ ತಾಲೂಕಿನ ಬೆಟ್ಟಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆರವನಾಡು ಹಾಗೂ ಮದೆ ಪಂಚಾಯಿತಿ ವ್ಯಾಪ್ತಿಯ ಅವಂದೂರು ಗ್ರಾಮದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕ್ಷೇತ್ರದ್ಯಾದಂತ ರಸ್ತೆಗಳ ಅಭಿವೃದ್ಧಿ ಗೆ ಮನವಿಗಳ ಮಹಾಪೂರವೇ ಹರಿದು ಬರುತ್ತಿದ್ದು, ಆದ್ಯತೆ ಮೇರೆಗೆ ಎಲ್ಲವನ್ನೂ ಗಣನೆಗೆ ತೆಗೆದುಕೊಂಡು ಹಂತ ಹಂತವಾಗಿ ಅನುದಾನ ಒದಗಿಸಲಾಗುವುದು. ಕಾಮಗಾರಿಯ ಗುಣಮಟ್ಟಕ್ಕೆ ಆದ್ಯತೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.ಬೆಟ್ಟಗೇರಿ ಕೇಟೋಳಿ ಕಾರುಗುಂದ ರಸ್ತೆ, ಕಾಳೇರಮ್ಮನ ಕುಟುಂಬಸ್ಥರ ರಸ್ತೆ,

ಕಡ್ಯದ ಕುಟುಂಬಸ್ಥರ ರಸ್ತೆ, ನಿಂಗಪ್ಪನ ಕುಟುಂಬದವರ ಮನೆಗೆ ಹೋಗುವ ರಸ್ತೆ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ ಅವರು ಹೆರವನಾಡು ಮೇದರ ಸಮುದಾಯ ಭವನದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.ತಮ್ಮ ನೆಚ್ಚಿನ ಶಾಸಕರು ತಮ್ಮ ಮನೆಗೆ ಬಂದು ಆತಿಥ್ಯ ಸ್ವೀಕರಿಸಿದನ್ನು ಕಂಡು ಹರ್ಷಗೊಂಡ ಗ್ರಾಮಸ್ಥರು ಅವರನ್ನು ಸನ್ಮಾನಿಸಿದರು. ತಮ್ಮ ಕುಟುಂಬದ ಐತಿಹಾಸಿಕ ಹಿನ್ನೆಲೆಗಳನ್ನು ಶಾಸಕರಿಗೆ ವಿವರಿಸಿದರು.ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ, ಬೆಟ್ಟಗೇರಿ ವಲಯ ಕಾಂಗ್ರೆಸ್ ಅಧ್ಯಕ್ಷ ಕೊಡಗನ ತೀರ್ಥ ಪ್ರಸಾದ್, ಬೆಟ್ಟಗೇರಿ ಗ್ರಾಪಂ ಅಧ್ಯಕ್ಷೆ ಚಳಿಯಂಡ ಕಮಲಾ ಉತ್ತಯ್ಯ, ಸಾಮಾಜಿಕ ಜಾಲತಾಣದ ಅಧ್ಯಕ್ಷ ಹೊಸೂರು ಸೂರಜ್, ಡಿಸಿಸಿ ಸದಸ್ಯರಾದ ಕೇಟೋಳಿರ ಮೋಹನ್ ರಾಜ್, ಪಿ.ಎಲ್. ಸುರೇಶ್ ಸಂಪಾಜೆ, ಕೊಡವ ಸಾಹಿತ್ಯ ಅಕಾಡೆಮಿ ಸದಸ್ಯ ನಾಪಂಡ ಗಣೇಶ್, ಪ್ರಮುಖರಾದ ಕಾಳೇರಮ್ಮನ ಕುಮಾರ್, ಬಾಳಾಡಿ ಪ್ರತಾಪ್ ಕುಮಾರ್, ಪೂಜಾರಿರ ಪ್ರದೀಪ್ ಕುಮಾರ್,

ಪಟ್ಟಡ ದೀಪಕ್, ಮಜೀದ್ ಬೆಟ್ಟಗೇರಿ, ಶಾಹಿದ್ ಬೆಟ್ಟಗೇರಿ, ಕೋಡಿ ಮೋಟಯ್ಯ, ಅರಂಬೂರು ನಾಗೇಶ್, ಹನೀಫ್ ಸಂಪಾಜೆ ಸೇರಿದಂತೆ ಕೇಟೋಳಿ ಕುಟುಂಬಸ್ಥರು, ಕಾಳೇರಮ್ಮನ ಕುಟುಂಬಸ್ಥರು, ಕಡ್ಯದ ಕುಟುಂಬಸ್ಥರು, ನಿಂಗಪ್ಪನ ಕುಟುಂಬಸ್ಥರು, ಮೇದರ ಕಾಲೋನಿ ನಿವಾಸಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಕ್ತಿ ಕಡಲಿನಲ್ಲಿ ಮಿಂದೆದ್ದ ಉಡುಪಿ ಕೃಷ್ಣನಗರಿ...
ದ್ವಿಭಾಷಾ ನೀತಿ ತುಳು ಕಲಿಕೆಗೆ ಅಡ್ಡಿಯಾಗದು: ತಾರಾನಾಥ ಗಟ್ಟಿ ಕಾಪಿಕಾಡ್‌