ಅರ್ಹ ಮತದಾರರ ಹಕ್ಕು ಉಳಿಸಲು ಬದ್ಧ: ಡಿಕೆಶಿ

KannadaprabhaNewsNetwork |  
Published : Aug 27, 2026, 02:15 AM IST
ಡಿಕೆಶಿ | Kannada Prabha

ಸಾರಾಂಶ

ರಾಜ್ಯದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ನಡೆಸುತ್ತಿದೆ. ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹ ಮತದಾರರ ಹಕ್ಕು ಉಳಿಸಲು ಬದ್ಧವಾಗಿದ್ದು, ಇದಕ್ಕಾಗಿ ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಂಗಳೂರು ರಾಜ್ಯದಲ್ಲಿ ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌ಐಆರ್‌) ನಡೆಸುತ್ತಿದೆ. ರಾಜ್ಯ ಸರ್ಕಾರ ರಾಜ್ಯದ ಎಲ್ಲ ಅರ್ಹ ಮತದಾರರ ಹಕ್ಕು ಉಳಿಸಲು ಬದ್ಧವಾಗಿದ್ದು, ಇದಕ್ಕಾಗಿ ಅಗತ್ಯ ಕ್ರಮಗಳನ್ನು ವಹಿಸಲಾಗಿದೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಜಿಲ್ಲೆಗಳ ಸಮಗ್ರ ಅಭಿವೃದ್ಧಿ ಬಗ್ಗೆ ಪಕ್ಷದ ಶಾಸಕರು ಹಾಗೂ ಹಿಂದಿನ ಚುನಾವಣೆಯಲ್ಲಿ ಪರಾಜಿತ ಅಭ್ಯರ್ಥಿಗಳೊಂದಿಗೆ ಬುಧವಾರ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಸುಮಾರು 1 ಕೋಟಿಗೂ ಹೆಚ್ಚು ಜನರನ್ನು ಮತಪಟ್ಟಿಯಿಂದ ಬೇರೆ ಬೇರೆ ಕಾರಣಗಳಿಂದ ಕೈಬಿಡಲಾಗಿದೆ. ಅಂಥವರೆಲ್ಲರಿಗೂ ಈಗ ಆಕ್ಷೇಪಣೆ ಸಲ್ಲಿಸಿ ಸೂಕ್ತ ದಾಖಲೆಗಳೊಂದಿಗೆ ತಮ್ಮ ಮತದಾನದ ಹಕ್ಕು ಮರು ಪಡೆಯಲು ಅವಕಾಶವಿದೆ. ಹಾಗಾಗಿ ಸರ್ಕಾರ ಕಾಯಂ ನಿವಾಸ ಪತ್ರ, ಜಾತಿ ಪ್ರಮಾಣ ಪತ್ರವನ್ನು ವಿಳಂಬವಿಲ್ಲದೆ ಜನರಿಗೆ ದೊರಕಿಸಿಕೊಡುವ ಕೆಲಸವನ್ನು ಈಗಾಗಲೇ ಸರ್ಕಾರ ಮಾಡಿದೆ. ಇದನ್ನು ಎಲ್ಲ ಅರ್ಹ ಮತದಾರರು ಬಳಸಿಕೊಂಡು ತಮ್ಮ ಮತದಾದನ ಹಕ್ಕು ಮರುಸ್ಥಾಪಿಸಿಕೊಳ್ಳಬೇಕು. ಬೂತ್ ಮಟ್ಟದಲ್ಲಿ ಸಭೆ ನಡೆಸಿ ಮತಪಟ್ಟಿ ಪ್ರಕಟಿಸಲು ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯುಕ್ತರನ್ನು ಕೋರಲಾಗಿದೆ. ಜನರಿಗೆ ಮತದ ಶಕ್ತಿ ಹಾಗೂ ಮತದ ಹಕ್ಕಿನ ಬಗ್ಗೆ ಶಾಸಕರು ಅರಿವು ಮೂಡಿಸಬೇಕು. ಅರ್ಹ ಮತದಾರರಿಗೆ ಅನ್ಯಾಯವಾಗಬಾರದು. ಜನರಿಗೆ ಮತದಾನದ ಹಕ್ಕು ಕೊಡಿಸಲು ಶ್ರಮಿಸಬೇಕೆಂದು ಶಾಸಕರಿಗೆ ಮಾರ್ಗದರ್ಶನ ನೀಡಲಾಗಿದೆ ಎಂದು ವಿವರಿಸಿದರು.ಭಾರತ್ ಜೋಡೋ ಸಂಘಕ್ಕೆ 7 ಲಕ್ಷ ನೋಂದಣಿ:

ಯುವಕರಿಗೆ ಪ್ರತಿ ಗ್ರಾಪಂ ಮಟ್ಟದಲ್ಲಿ ಭಾರತ್‌ ಜೋಡೋ ಯುವಸಂಘ ಸ್ಥಾಪಿಸುವ ಹೊಸ ಪೀಳಿಗೆಯ ಹೊಸ ಕಾರ್ಯಕ್ರಮ ರೂಪಿಸಲಾಗಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಇದಕ್ಕೆ 7 ಲಕ್ಷ ಜನ ಸದಸ್ಯತ್ವ ನೋಂದಣಿ ಮಾಡಿದ್ದಾರೆ ಎಂದು ಇದೇ ವೇಳೆ ಮುಖ್ಯಮಂತ್ರಿ ತಿಳಿಸಿದರು.

ಪಂಚಾಯತಿ ಮಟ್ಟದಲ್ಲಿ ಕ್ರೀಡೆ, ಯೋಗ , ಪರಿಸರ ಗಿಡ ಬೋಧನೆ, ಸಮುದಾಯ ಸೇವೆ, ನಾಯಕತ್ವ, ವಿಪತ್ತು ನಿರ್ವಹಣೆ, ಡ್ರಗ್ಸ್ ಮುಕ್ತ ರಾಗಲು, ದೇಶದ ಸಮಗ್ರತೆ, ಸಂವಿಧಾನದ ಬಗ್ಗೆ ಅರಿವು ಮೂಡಿಸುಲು ಜಾತಿ, ಧರ್ಮಗಳನ್ನು ಬದಿಗೊತ್ತಿ ಭಾಗವಹಿಸಲು ಈ ಸಂಘಗಳ ಮೂಲಕ ಮಾರ್ಗದರ್ಶನ ನೀಡಬೇಕು. ಪ್ರತಿ ಸಂಘಕ್ಕೆ 10 ಲಕ್ಷ ರು. ಗಳನ್ನು ನಿಡಲಾಗುವುದು. ಪ್ರತಿ ಸಂಘಕ್ಕೆ ವಾರ್ಡ್‌ನ ಸರ್ಕಾರಿ ನೌಕರರನ್ನು ಮಾರ್ಗದರ್ಶಕರಾಗಿ ನೇಮಿಸಲಾಗುವುದು. ಪಂಚಾಯತಿಗಳಲ್ಲಿ 200 ಜನ ಸದಸ್ಯರಾಗಬೇಕು. ಸರ್ಕಾರದ ಶಾಲೆ, ಸಮುದಾಯಭವನ ದಲ್ಲಿ ನಿಯಮಿತವಾಗಿ ಸಭೆ ನಡೆಸಲು ಅವಕಾಶ ನೀಡಲಾಗಿದೆ ಎಂದು ಮಾಹಿತಿ ನೀಡಿದರು.ಎಸ್‌ಐಆರ್ ನಂತರ ಸ್ಥಳೀಯ ಸಂಸ್ಥೆಗಳ ಚುನಾವಣೆ:ಬರುವ ನವೆಂಬರ್ ಒಳಗೆ ಪಂಚಾಯತಿ ಹಾಗೂ ಪಾಲಿಕೆ ಚುನಾವಣೆ ನಡೆಸಲಾಗುವುದು. ಎಸ್‌ಐಆರ್‌ ಮುಗಿದ ತಕ್ಷಣ ಚುನಾವಣೆ ನಡೆಸಲು ಚುನಾವಣಾ ಆಯೋಗಕ್ಕೆ ಪತ್ರ ಬರೆಯಲಾಗುವುದು ಎಂದು ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಚುನಾವಣಾ ಆಯೋಗ ಏನಾದರೂ ಮಾಡಿಕೊಳ್ಳಲಿ. ನಾವು ನಮ್ಮ ರಾಜ್ಯದ ಅರ್ಹ ಮತದಾರರ ಹಕ್ಕು ಉಳಿಸಲು ಏನೆಲ್ಲಾ ಮಾಡಬೇಕೋ ಮಾಡುತ್ತಿದ್ದೇವೆ. ಎಸ್‌ಐಆರ್‌ ಮುಗಿದ ಬಳಕ ಚುನಾವಣೆ ನಡೆಸಲು ಆಯೋಗಕ್ಕೆ ಪತ್ರವನ್ನೂ ಬರೆಯುತ್ತೇವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೂ ಮಳೆ ಸುರಿಸಿ ಕ್ಯಾಪ್ಟನ್‌ ‘ಅಭಿಮನ್ಯು’ಗೆ ಬೀಳ್ಕೊಡುಗೆ
ಯುವ ಜನತೆ ಕಲೆ ಸಂಸ್ಕೃತಿಗೆ ಜೀವ ತುಂಬಬೇಕು: ನಟರಾಜ್‌