ಶಾಲಾ ಕಾಲೇಜುಗಳ ಮೂಲ ಸೌಲಭ್ಯ ಕಲ್ಪಿಸಲು ಬದ್ಧ

KannadaprabhaNewsNetwork |  
Published : Feb 28, 2026, 01:30 AM IST
ಸೂಲಿಬೆಲೆ ಗ್ರಾಮದ ಮೊರಾರ್ಜಿದೇಸಾಯಿ ವಸತಿ ಶಾಲೆಯ ನವೀಕರಣಗೊಂಡ ಕಟ್ಟಡದ ಲೋಕಾರ್ಪಣೆ ಕಾರ್ಯಕ್ರಮವನ್ನು ಶಾಸಕ ಶರತ್ ಬಚ್ಚೇಗೌಡ ನಾಮಫಲಕ ಶಿಲಾನ್ಯಾಸ ಮಾಡುವ ಮೂಲಕ ಉದ್ಘಾಟಿಸಿದರು,ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆAಕಟೇಶ್, ಗೋಪಾಲಗೌಡ, ನಾರಾಯಣಗೌಡ, ಜನಾರ್ಧನರೆಡ್ಡಿ, ಸೈಯದ್ ಮಹಬೂಬ್, ಇತರರು ಇದ್ದರು. | Kannada Prabha

ಸಾರಾಂಶ

ಸೂಲಿಬೆಲೆ: ಯಾವುದೇ ಸರ್ಕಾರಿ ಶಾಲಾ ಕಾಲೇಜುಗಳು ಹಾಗೂ ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಮತ್ತು ಸವಲತ್ತುಗಳನ್ನು ಕಲ್ಪಿಸಲು ನಾವು ಸದಾ ಬದ್ಧ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು

ಸೂಲಿಬೆಲೆ: ಯಾವುದೇ ಸರ್ಕಾರಿ ಶಾಲಾ ಕಾಲೇಜುಗಳು ಹಾಗೂ ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಮತ್ತು ಸವಲತ್ತುಗಳನ್ನು ಕಲ್ಪಿಸಲು ನಾವು ಸದಾ ಬದ್ಧ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.

ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನವೀಕರಣ ಕಾಮಗಾರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು,

ಮೊರಾರ್ಜಿ ದೇಸಾಯಿ ವಸತಿ ಶಾಲೆಯನ್ನು ೨೫ ವರ್ಷಗಳ ಹಿಂದೆ ಸ್ಥಾಪಿಸಿರುವ ಶಾಲೆಯನ್ನು ಮಕ್ಕಳ ಅನುಕೂಲಕ್ಕಾಗಿ ಸುಸಜ್ಜಿತ ಕಟ್ಟಡಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ವಿದ್ಯಾರ್ಥಿಗಳು ಚೆನ್ನಾಗಿ ಓದಿ ಉತ್ತಮ ಫಲಿತಾಂಶ ನೀಡಬೇಕು ಎಂದು ಹೇಳಿದರು.

ಕಾಲೇಜು ಪ್ರಾಚಾರ್ಯ ವೆಂಕಟೇಶ್ ಮಾತನಾಡಿ, ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡರ ಶೈಕ್ಷಣಿಕ ಕಾಳಜಿಯಿಂದ ಸೂಲಿಬೆಲೆ ಗ್ರಾಮದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾರಂಭವಾಯಿತು. ಅದಕ್ಕೆ ಮಾಜಿ ಸಚಿವರಾದ ಬಿ.ಎನ್.ಬಚ್ಚೇಗೌಡರ ಸಹಕಾರ ಅನನ್ಯವಾಗಿದ್ದು, ಪ್ರಸ್ತುತ ಶಾಸಕ ಶರತ್ ಬಚ್ಚೇಗೌಡರು ಮತ್ತು ಬೆಂಡಿಗಾನಹಳ್ಳಿ ಕುಟುಂಬ ಶಾಲೆಗಳ ಅಭಿವೃದ್ಧಿಗೆ ಅಪಾರ ಕಾಳಜಿ ಹೊಂದಿದ್ದು ಶಾಲೆಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಟ್ಟಿದೆ ಎಂದರು.

ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗ ಸಂಘದ ಮಾಜಿ ನಿರ್ದೇಶಕ ಬಿ.ಎನ್.ಗೋಪಾಲಗೌಡ, ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ಯುವ ಮುಖಂಡ ನಾರಾಯಣಗೌಡ, ಗ್ರಾಪಂ ಅಧ್ಯಕ್ಷ ಜನಾರ್ದನರೆಡ್ಡಿ, ಉಪಾಧ್ಯಕ್ಷ ಷಾಜಿಯಾ ಜಿಯಾವುಲ್ಲಾ, ಆಡಳಿತಾಧಿಕಾರಿ ಸುಬ್ರಹ್ಮಣಿ, ಪಿಡಒ ವಿಜಯಕುಮಾರಿ, ಜೇನುಗೂಡು ಟ್ರಸ್ಟ್ ಉಪಾಧ್ಯಕ್ಷ ಕೆ.ಎಂ.ಚೌಡೇಗೌಡ, ಸಿರ‍್ಪಿ ಮಂಜುನಾಥ್, ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸಪ್ಪ, ಗ್ಯಾರಂಟಿ ಯೋಜನೆ ಜಿಲ್ಲಾ ನಿರ್ದೇಶಕ ಸೈಯದ್ ಮಹಬೂಬ್, ಹಿಂದುಳಿದ ವರ್ಗಗಳ ಇಲಾಖೆ ತಾಲೂಕು ಅಧಿಕಾರಿ ವಿನೋದ ಇತರರಿದ್ದರು.

(ಫೋಟೋ ಕ್ಯಾಫ್ಷನ್‌)

ಸೂಲಿಬೆಲೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ನವೀಕರಣ ಕಟ್ಟಡಕ್ಕೆ ಶಾಸಕ ಶರತ್ ಬಚ್ಚೇಗೌಡ ನಾಮಫಲಕ ಶಿಲಾನ್ಯಾಸ ಉದ್ಘಾಟಿಸಿದರು. ಬಮೂಲ್ ನಿರ್ದೇಶಕ ಬಿ.ವಿ.ಸತೀಶಗೌಡ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಬಿ.ವೆಂಕಟೇಶ್, ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ
56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ