ಕನ್ನಡಪ್ರಭ ವಾರ್ತೆ ಭದ್ರಾವತಿ
ಬುಧವಾರ ಸುಮಾರು 1.95 ಲಕ್ಷ ರು. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸ ಕಟ್ಟಡದಲ್ಲಿ ಅಗತ್ಯವಿರುವ ಮೂಲ ಸೌಕರ್ಯಗಳು, ವೈದ್ಯರು ಹಾಗೂ ಸಿಬ್ಬಂದಿಗಳು ನೇಮಕಗೊಳಿಸುವಂತೆ ಮನವಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಆಸ್ಪತ್ರೆಯನ್ನು ತಾಯಿ-ಮಕ್ಕಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಹಾಗೂ ಇಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು ಮತ್ತು ಸಿಬ್ಬಂದಿಗಳಿಗೆ ವಸತಿ ಗೃಹಗಳನ್ನು ನಿರ್ಮಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು.ವಿಧಾನ ಪರಿಷತ್ ಸದಸ್ಯೆ ಬಲ್ಕೀಶ್ ಬಾನು ಮಾತನಾಡಿ, ಅಸ್ಪತ್ರೆ ನೂತನ ಕಟ್ಟಡ ಉದ್ಘಾಟನೆಗೊಳ್ಳಲು ಶಾಸಕರ ಪರಿಶ್ರಮ ಹೆಚ್ಚಿನದ್ದಾಗಿದೆ. ಅಲ್ಲದೆ ಕ್ಷೇತ್ರದಲ್ಲಿ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳಿಗೂ ಹೆಚ್ಚಿನ ಗಮನ ಹರಿಸುತ್ತಿದ್ದಾರೆ. ವೈದ್ಯರು ಹಾಗೂ ಸಿಬ್ಬಂದಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ ಸದ್ಬಳಕೆ ಮಾಡಿಕೊಳ್ಳಕೊಂಡು ಉತ್ತಮ ಸೇವೆ ನೀಡಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಎಂ.ಮಣಿ ಎಎನ್‌ಎಸ್, ಹಿರಿಯ ಸದಸ್ಯ ಬಿ.ಟಿ ನಾಗರಾಜ್, ಶಶಿಕಲಾ ನಾರಾಯಣಪ್ಪ, ಬಗರ್ ಹುಕುಂ ಸಮಿತಿ ತಾಲೂಕು ಅಧ್ಯಕ್ಷ ಎಸ್.ಮಣಿಶೇಖರ್, ಜಿಪಂ ಮಾಜಿ ಸದಸ್ಯ ಎಸ್.ಕುಮಾರ್, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಬಿ.ಸಿದ್ದಬಸಪ್ಪ, ಎರೆಹಳ್ಳಿ ಗ್ರಾಪಂ ಸದಸ್ಯ ಶಿವರಾಂ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಕೃಷ್ಣಪ್ಪ ಸೇರಿ ಇತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಪಿ.ಜಿ. ವಿಶ್ವನಾಥ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಲೂಕು ಆರೋಗ್ಯಾಧಿಕಾರಿ ಡಾ. ಎಂ.ವಿ ಅಶೋಕ್ ಸ್ವಾಗತಿಸಿದರು.