ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗೆ ಬದ್ಧ: ಶಾಸಕ ಕೆ.ಎಸ್.ಆನಂದ್

KannadaprabhaNewsNetwork |  
Published : Jun 16, 2025, 02:40 AM IST
15 ಬೀರೂರು 1ಹುಲ್ಲೇಹಳ್ಳಿ ಗ್ರಾಮದ ಶ್ರೀಲಕ್ಷಿö್ಮನರಸಿಂಹಸ್ವಾಮಿಯ ಮಹದ್ವಾರದ ಕಾಮಗಾರಿಯನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು. ಗ್ರಾ.ಪಂ.ಅಧ್ಯಕ್ಷ ರುದ್ರಪ್ಪ ಸೇರಿದಂತೆ ಮತ್ತಿತ್ತರು ಇದ್ದರು. | Kannada Prabha

ಸಾರಾಂಶ

ಬೀರೂರು.ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

ರೂ.65ಲಕ್ಷ ವೆಚ್ಚದ ಗ್ರಾ.ಪಂ.ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ

ಕನ್ನಡಪ್ರಭ ವಾರ್ತೆ, ಬೀರೂರು.ಕ್ಷೇತ್ರದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.ಬೀರೂರು ಹೋಬಳಿಯ ಹುಲ್ಲೇಹಳ್ಳಿಯ ಭಾನುವಾರ ಎನ್.ಆರ್,ಇ.ಜಿ , ರಾಷ್ಟ್ರೀಯ ಗ್ರಾಮ ಸ್ವರಾಜ್ ಅಡಿಯ ಅನುದಾನ , ವರ್ಗ 1 , ಹಾಗೂ 15 ನೇ ಹಣಕಾಸು ನಿಧಿಯೂ ಸೇರಿದಂತೆ ಒಟ್ಟು ₹65ಲಕ್ಷ ವೆಚ್ಚದಲ್ಲಿ ಗ್ರಾಮ ಪಂಚಾಯ್ತಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.ಪ್ರತಿಯೊಬ್ಬರು ಆರೋಗ್ಯಕರ ಬದುಕು ನಡೆಸಬೇಕೆಂದರೆ ಶುದ್ಧ ಕುಡಿಯುವ ನೀರು ದೊರೆಯಬೇಕು. ಸುಗಮ ಸಂಚಾರಕ್ಕೆ ಉತ್ತಮ ರಸ್ತೆ ಅಗತ್ಯವಿದೆ. ಪರಿಸರ ಅಚ್ಚುಕಟ್ಟಾಗಿರಬೇಕೆಂದರೆ ಚರಂಡಿ ವ್ಯವಸ್ಥೆ, ಕಸನಿರ್ವಹಣೆ ಹಾಗೂ ಬೀದಿದೀಪ ಅಗತ್ಯವಾಗಿದೆ. ಹಂತಹಂತವಾಗಿ ಈ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.ಗ್ರಾಮ ಪಂಚಾಯ್ತಿ ಅಧ್ಯಕ್ಷ ರುದ್ರಪ್ಪ ಮಾತನಾಡಿ, ಮಧ್ಯಮ ವರ್ಗದ ಜನರು ವಿವಾಹವೂ ಸೇರಿದಂತೆ ಬೇರೆ ಕಾರ್ಯಕ್ರಮ ನಡೆಸಲು ಅಗತ್ಯವಿರುವ ಸಮುದಾಯ ಭವನವನ್ನು ಶಾಸಕರು ನಮ್ಮ ಗ್ರಾಮದಲ್ಲಿ ನಿರ್ಮಿಸಲು ಮುಂದಾಗಿರುವುದು ಶ್ಲಾಘನೀಯ ಎಂದರು.ಗ್ರಾ.ಪಂ.ಉಪಾಧ್ಯಕ್ಷ ಲಕ್ಷ್ಮಣಪ್ಪ ಮಾತನಾಡಿ, ಗ್ರಾಮಕ್ಕೆ ಅಗತ್ಯವಿರುವ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿ ರುವುದಕ್ಕೆ ಶಾಸಕರಿಗೆ ಆಭಾರಿಯಾಗಿದ್ದೇವೆ. ಗ್ರಾಮದ ಒಳಭಾಗದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಿಸಿಕೊಡುವಂತೆ ಮನವಿ ಮಾಡಿದರು.ಇದೇ ಸಂದರ್ಭದಲ್ಲಿ ಹುಲ್ಲೇಹಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಯರೇಹಳ್ಳಿ ಗ್ರಾಮದಲ್ಲಿ ₹16ಲಕ್ಷ ವೆಚ್ಚದಲ್ಲಿ ಶುದ್ಧಗಂಗಾ ಘಟಕಕ್ಕೆ ಶಾಸಕರು ಭೂಮಿ ಪೂಜೆ ನೆರವೇರಿಸಿದರು. ಹುಲ್ಲೇಹಳ್ಳಿ ಗ್ರಾಮದ ಪ್ರವೇಶ ದ್ವಾರದಲ್ಲಿ ನಿರ್ಮಿಸಲಾಗಿದ್ದ ₹2.50ಲಕ್ಷ ವೆಚ್ಚದ ಸ್ವಾಗತ ಕಮಾನು ಉದ್ಘಾಟಿಸಿ. ₹15ಲಕ್ಷ ವೆಚ್ಚದಲ್ಲಿ ಗ್ರಾಮದಲ್ಲಿ ಶ್ರೀಲಕ್ಷ್ಮಿ ನರಸಿಂಹಸ್ವಾಮಿ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನಡೆಸಿದರು.ಗ್ರಾ.ಪಂ.ಸದಸ್ಯರಾದ ಮೂರ್ತಿ, ಲೋಕೇಶ್, ನರಸಿಂಹಮೂರ್ತಿ, ಸ್ನೇಹಾ ಸುರೇಶ್, ಶಾಂತಮ್ಮ ಕುಮಾರ್, ಧನಲಕ್ಷಿö್ಮ ಗೋಪಾಲ್, ಹಾಗೂ ಮುಖಂಡರಾದ ಮುದಿಯಪ್ಪ, ಮಲ್ಲಾಬೋವಿ, ಜೋಡಿತಿಮ್ಮಾಪುರ ಗ್ರಾಮ ಪಂಚಾಯ್ತಿ ಅಧ್ಯಕ್ಷ ಆನಂದ್, ತಾ.ಪಂ.ಮಾಜಿ ಸದಸ್ಯ ಗೋವಿಂದಸ್ವಾಮಿ, ಬೀರೂರು ಪುರಸಭೆ ಸದಸ್ಯ ಬಿ.ಕೆ.ಶಶಿಧರ್ , ಸುರೇಶ್ ಸೇರಿದಂತೆ ಮತ್ತಿತರಿದ್ದರು.15 ಬೀರೂರು 1ಹುಲ್ಲೇಹಳ್ಳಿ ಗ್ರಾಮದ ಶ್ರೀಲಕ್ಷ್ಮೀನರಸಿಂಹಸ್ವಾಮಿ ಸಮುದಾಯ ಭವನ ಮಹಾದ್ವಾರದ ಕಾಮಗಾರಿಯನ್ನು ಶಾಸಕ ಕೆ.ಎಸ್.ಆನಂದ್ ಉದ್ಘಾಟಿಸಿದರು. ಗ್ರಾ.ಪಂ.ಅಧ್ಯಕ್ಷ ರುದ್ರಪ್ಪ ಸೇರಿದಂತೆ ಮತ್ತಿತ್ತರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ