ಕನ್ನಡಪ್ರಭ ವಾರ್ತೆ ಬೆಳಗಾವಿ
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮಂಗಳವಾರ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಅಭಿವೃದ್ಧಿ ಕೆಲಸಗಳು ಕುಂಠಿತವಾಗಬಾರದು ಎನ್ನುವುದು ನನ್ನ ಉದ್ದೇಶ ಎಂದರು.ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಭೂಮಿಪೂಜೆ:
ಸಾವಗಾಂವ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಭೂಮಿಪೂಜೆ ನೆರವೇರಿಸಿದರು. ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮಸ್ಥರು, ಸೇರಿದಂತೆ ಹಲವರು ಉಪಸ್ಥಿತರಿದ್ದರು.ಬಸ್ತವಾಡದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಚಾಲನೆ: ಸಂತಿ ಬಸ್ತವಾಡ ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣದ ಕಾಮಗಾರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. ಇದೇ ಸಮಯದಲ್ಲಿ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಸಭೆ ನಡೆಸಿ, ಗ್ರಾಮದ ಕುಂದುಕೊರತೆ, ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಅಭಿವೃದ್ಧಿ ಕೆಲಸಗಳ ಕುರಿತು ಚರ್ಚೆ ನಡೆಸಿದರು. ಬಳಿಕ ಸಂತಿ ಬಸ್ತವಾಡ ಗ್ರಾಮದಲ್ಲಿ ಅಭಿವೃದ್ಧಿ ಹಂತದಲ್ಲಿರುವ ಶ್ರೀ ಸಾತೇರಿ ಮಂದಿರದ ಕಟ್ಟಡ ಕಾಮಗಾರಿಯ ಪರಿಶೀಲನೆ ನಡೆಸಿದ ಸಚಿವರು, ಕಟ್ಟಡದ ಕಾಮಗಾರಿ ಕುರಿತು ಮಾಹಿತಿ ಪಡೆದರು. ಈ ವೇಳೆ ಮುಖಂಡರಾದ ಯುವರಾಜ್ ಕದಂ, ದೇಮಣ್ಣ ನಾಯ್ಕ್, ಬಸು ಭೀರಮುಟ್ಟಿ, ಆಸೀಫ್ ತಹಸೀಲ್ದಾರ್, ಅಜಯ್ ಚನ್ನಿಕುಪ್ಪಿ, ಸಾತುಲೆ ಗುರವ್, ಅನಿಲ್ ಕರ್ಲೇಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.