ಮೊದಲಿಯಾರ್‌ ಸಮುದಾಯವರ ಏಳಿಗೆಗೆ ಬದ್ಧ, ಎಲ್ಲಾ ರೀತಿಯ ಸಹಕಾರ : ಸಂಸದ ಬಿ.ವೈ.ರಾಘವೇಂದ್ರ

KannadaprabhaNewsNetwork |  
Published : Feb 24, 2025, 12:36 AM ISTUpdated : Feb 24, 2025, 12:22 PM IST
ಭದ್ರಾವತಿ ಗಾಂಧಿ ನಗರದ ಆಗಮುಡಿ ಮೊದಲಿಯರ್ ಸಮುದಾಯ ಭವನದಲ್ಲಿ ಭಾನುವಾರ ಜರುಗಿದ ಅಖಿಲ ಭಾರತ ತುಳುವ ವೆಲ್ಲಲ(ಮೊದಲಿಯಾರ್) ಸಂಘಮ್ ೩೬ನೇ ರಾಷ್ಟ್ರೀಯ ಸಮಾವೇಶದಲ್ಲಿ ಸಂಸದ ಬಿ.ವೈ ರಾಘವೇಂದ್ರ ಸೇರಿದಂತೆ ಗಣ್ಯರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಮೊದಲಿಯಾರ್ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಸಮುದಾಯದವರ ಏಳಿಗೆಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

 ಭದ್ರಾವತಿ : ಮೊದಲಿಯಾರ್ ಸಮುದಾಯದವರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದೇನೆ. ಈ ಸಮುದಾಯದವರ ಏಳಿಗೆಗೆ ಬದ್ಧನಾಗಿದ್ದು, ಎಲ್ಲಾ ರೀತಿಯ ಸಹಕಾರ ನೀಡಲು ಸಿದ್ದವಿದ್ದೇನೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.

ಗಾಂಧಿ ನಗರದ ಆಗಮುಡಿ ಮೊದಲಿಯರ್ ಸಮುದಾಯ ಭವನದಲ್ಲಿ ಭಾನುವಾರ ಜರುಗಿದ ಅಖಿಲ ಭಾರತ ತುಳುವ ವೆಲ್ಲಲ(ಮೊದಲಿಯಾರ್) ಸಂಘಂ ೩೬ನೇ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಸಮಾವೇಶದಲ್ಲಿ ಮೊದಲಿಯಾರ್ ಸಮುದಾಯದವರು ಇನ್ನೂ ಹೆಚ್ಚು ಕ್ರಿಯಾಶೀಲರಾಗುವ ಮೂಲಕ ಸಂಘಟನೆಗೆ ಒತ್ತು ನೀಡಬೇಕು. ಸಮುದಾಯದವರ ಹಿತರಕ್ಷಣೆಗೆ ಬದ್ಧರಾಗಿ ಪರಿಣಾಮಕಾರಿ ಕಾರ್ಯ ಚಟುವಟಿಕೆಗಳನ್ನು ರೂಪಿಸಿಕೊಳ್ಳುವಂತೆ ಹೇಳಿದರು.

ಸಮಾವೇಶದಲ್ಲಿ ಬಿ.ವೈ.ರಾಘವೇಂದ್ರ ಅವರು ತಾಲೂಕು ಸಂಘದ ನೂತನ ಕಛೇರಿ ಉದ್ಘಾಟಿಸುವ ಜೊತೆಗೆ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿದರು.

ಸಮಾವೇಶಕ್ಕೂ ಮೊದಲು ಅಖಿಲ ಭಾರತ ತುಳುವ ವೆಲ್ಲಲ (ಮೊದಲಿಯಾರ್) ಸಂಘಂ ಅಧ್ಯಕ್ಷ, ಹಿರಿಯ ಪತ್ರಕರ್ತ ಕಣ್ಣಪ್ಪ ದ್ವಜಾರೋಹಣ ನೆರವೇರಿಸಿದರು. ಸಮಾವೇಶದಲ್ಲಿ ಪಾಂಡಿಚೆರಿ, ತಮಿಳುನಾಡು, ಹೈದರಬಾದ್ ಮತ್ತು ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಿಂದ ಸಂಘದ ಪ್ರತಿನಿಧಿಗಳು ಭಾಗವಹಿಸಿದ್ದರು. ತಾಲೂಕು ಸಂಘದ ಅಧ್ಯಕ್ಷ ಕೆ. ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಮಾವೇಶದಲ್ಲಿ ಬಿ.ವೈ ರಾಘವೇಂದ್ರರನ್ನು ಸನ್ಮಾನಿಸಲಾಯಿತು.

ಐಎಂಪಿಎ ಸಂಸ್ಥಾಪಕ ಚೆವಲಿಯಾರ್ ಡಾ. ಆರ್. ಅರುಣಾಚಲ, ಎಐಎಟಿವಿಎಸ್ ಕಾರ್ಯದರ್ಶಿ ಗೋಪಾಲಮಣಿ, ಎನ್. ಮಂಜುನಾಥ್, ಪ್ರಮುಖರಾದ ಉದ್ಯಮಿ ಬಿ.ಕೆ ಜಗನ್ನಾಥ್, ನಗರಸಭೆ ಮಾಜಿ ಅಧ್ಯಕ್ಷ ಆರ್. ಕರುಣಾಮೂರ್ತಿ, ತಾಲೂಕು ಸಂಘದ ಉಪಾಧ್ಯಕ್ಷ ಎ. ಸುಬ್ರಮಣಿ, ಕಾರ್ಯದರ್ಶಿ ವಿ. ಶಿವಕುಮಾರ್ (ಪೆಟ್ರೋಲ್ ಬಂಕ್), ಖಜಾಂಚಿ ಜಿ. ಸುರೇಶ್ ಕುಮಾರ್, ಸಹ ಕಾರ್ಯದರ್ಶಿ ಎನ್. ರವಿಚಂದ್ರನ್, ಇತರರು ಹಾಜರಿದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ