ಹೋಬಳಿ ಮಟ್ಟದಲ್ಲಿ ಜರುಗಿದ ಪ್ರಜಾ ಸೇವಾ ಆಂದೋಲನದಲ್ಲಿ ನಾಗರಾಜ ಕೆ.
ಸಾರ್ವಜನಿಕರ ಬೇಡಿಕೆ, ದೂರುಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲು ಯೋಜಿಸಿದ್ದು, ರೋಣ ತಾಲೂಕು ಆಡಳಿತ ಸರ್ಕಾರದ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಯಶಸ್ವಿಗೊಳಿಸಲು ಬದ್ಧವಾಗಿದೆ ಎಂದು ರೋಣ ತಹಶೀಲ್ದಾರ್ ನಾಗರಾಜ ಕೆ. ಹೇಳಿದರು.
ತಾಲೂಕಿನ ಕೊತಬಾಳ ಗ್ರಾಮದ ಅಂಕಲಗಿ ಅಡವಿಸಿದ್ದೇಶ್ವರ ಮಠದ ಆವರಣದಲ್ಲಿ ತಾಲೂಕು ಆಡಳಿತ, ತಾಪಂ, ಗ್ರಾಪಂ ಕೊತಬಾಳ ಹಾಗೂ ಜಿಪಂ ಎಂಜಿನಿಯರಿಂಗ್ ಉಪ ವಿಭಾಗಗಳ ಸಹಯೋಗದಲ್ಲಿ ನಡೆದ ಹೋಬಳಿ ಮಟ್ಟದಲ್ಲಿ ಜರುಗಿದ ಪ್ರಜಾ ಸೇವಾ ಆಂದೋಲನದಲ್ಲಿ ಮಾತನಾಡಿದರು.ಸಾರ್ವಜನಿಕರಿಗೆ, ರೈತರ ಸಮಸ್ಯೆಗಳಿಗೆ ಸೂಕ್ತ ಪರಿಹಾರ, ತ್ವರಿತಗತಿಯಲ್ಲಿ ಸೇಗೆ ಕಲ್ಪಿಸುವ ಗುರಿಯೊಂದಿಗೆ ರಾಜ್ಯ ಸರ್ಕಾರ ಪ್ರಜಾ ಸೇವಾ ಆಂದೋಲನವನ್ನು ಹಮ್ಮಿಕೊಂಡಿದ್ದು ತಾಲೂಕಿನ ಎಲ್ಲಾ ಇಲಾಖೆಗಳ ಪ್ರಮುಖ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಅವರ ಇಲಾಖೆಗಳಿಗೆ ಸಂಬಂಧಿಸಿದ ದೂರುಗಳಿಗೆ ಸ್ಪಂದಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ, ಲೋಕೋಪಯೋಗಿ ಇಲಾಖೆಯ ಎಇಇ ಗುರಣಗೌಡ ಪಾಟೀಲ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ಹೊಸೂರ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಬಸವರಾಜ ಮಾಳೇದ, ಅಕ್ಷರ ದಾಸೋಹ ಅಧಿಕಾರಿ ಆರ್.ಎಲ್. ನಾಯ್ಕರ, ತಾಪಂ ಯೋಜನಾಧಿಕಾರಿ ಸಿ.ಎಸ್. ನೀಲಗುಂದ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ ಆಲೂರ, ಗ್ರಾಮ ಪಂಚಾಯಿತಿ ಪಿಡಿಒ ಬೋದ್ಲೇಖಾನ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.