ಕೋಮು ದ್ವೇಷ ಭಾಷಣ ಆರೋಪ: ಡಾ. ಪ್ರಭಾಕರ ಭಟ್‌ಗೆ ಜಾಮೀನು

KannadaprabhaNewsNetwork |  
Published : Dec 12, 2025, 03:15 AM IST
32 | Kannada Prabha

ಸಾರಾಂಶ

ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರುಗೊಳಿಸಿದೆ.

ಪುತ್ತೂರು: ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ಪ್ರಚೋದಕ, ಮಹಿಳೆಯರ ಘನತೆಗೆ ಧಕ್ಕೆ ತರುವ ಹಾಗೂ ಸಾರ್ವಜನಿಕ ಅಶಾಂತಿ ಉಂಟು ಮಾಡುವ ಭಾಷಣ ಮಾಡಿರುವ ಆರೋಪದಡಿ ಆರ್‌ಎಸ್‌ಎಸ್‌ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಬುಧವಾರ ಜಾಮೀನು ಮಂಜೂರುಗೊಳಿಸಿದೆ.

ಜಾಮೀನು ಕೋರಿ ಅವರು ಸಲ್ಲಿಸಿದ ಅರ್ಜಿ ವಿಚಾರಣೆಗೆ ಎತ್ತಿಕೊಂಡ ಪುತ್ತೂರಿನ ೫ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.

ಪುತ್ತೂರು ತಾಲೂಕಿನ ಉಪ್ಪಳಿಗೆ ಎಂಬಲ್ಲಿ ಅ.೨೨ರಂದು ನಡೆದ ದೀಪೋತ್ಸವ ಮತ್ತು ಗೋಪೂಜೆಯಲ್ಲಿ ಭಾಗವಹಿಸಿದ್ದ ಕಲ್ಲಡ್ಕ ಪ್ರಭಾಕರ ಭಟ್ ಕೋಮು ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ಈಶ್ವರಿ ಪದ್ಮುಂಜ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ವಿಚಾರಣೆಗೆಹಾಜರಾಗುವಂತೆ ಮನೆಗೆ ನೋಟೀಸ್ ಜಾರಿಗೊಳಿಸಿದ್ದರು. ಬಳಿಕದ ಬೆಳವಣಿಗೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಅ. ೨೭ರಂದು ನಡೆದ ವಿಚಾರಣೆಯಲ್ಲಿ ನ್ಯಾಯಾಲಯವು ಬಲವಂತದ ಕ್ರಮ ತೆಗೆದುಕೊಳ್ಳದಂತೆ ಮಧ್ಯಂತರ ಆದೇಶ ನೀಡಿ ಪೂರ್ಣ ವಿಚಾರಣೆ ಅ. ೨೯ಕ್ಕೆ ಮುಂದೂಡಿತ್ತು. ಅ.೨೯ರಂದು ದೂರುದಾರೆ ಈಶ್ವರಿ ಪದ್ಮುಂಜ ಪರ ವಕೀಲರು ಪುತ್ತೂರು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಲಯಕ್ಕೆ ಬಿಎನ್‌ಎಸ್‌ಎಸ್ ಸೆಕ್ಷನ್ ೩೩೮, ೩೩೯ ಅಡಿ ವಾದ ಮಂಡಿಸಲು ಅವಕಾಶ ಕೋರಿ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ಅರ್ಜಿಯ ವಿಚಾರಣೆ ಹಲವು ಬಾರಿ ಮುಂದೂಡಿತ್ತು. ಇದೀಗ ನ್ಯಾಯಾಲಯ ಜಾಮೀನು ನೀಡಿದೆ.

ಡಾ. ಪ್ರಭಾಕರ್ ಭಟ್ ಪರವಾಗಿ ನ್ಯಾಯವಾದಿ ಮಹೇಶ್ ಕಜೆ ವಾದಿಸಿದ್ದರು

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಡಾ.ಅಂಬೇಡ್ಕರ್‌ ಭವನ ಅವ್ಯವಸ್ಥೆ ಆಗರ !
ಕಬ್ಬಿಗೆ ಒಟ್ಟು ₹ 5500 ನೀಡಲು ರೈತರ ಬೇಡಿಕೆ