ಕನ್ನಡಪ್ರಭ ವಾರ್ತೆ ರಾಯಚೂರು
ಜನರಿಗೆ ಉತ್ತಮ ಆರೋಗ್ಯ ಸೇರಿದಂತೆ ಇತರೆ ಸೌಲಭ್ಯಗಳನ್ನು ಒದಗಿಸುವ ಉದ್ದೇಶದೊಂದಿಗೆ ಸರ್ಕಾರವು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಯೋಜನೆಗಳನ್ನು ಸಮರ್ಪಕವಾಗಿ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಬೇಕು ಎಂದು ಭಾರತ ಸರ್ಕಾರದ ಜಲಶಕ್ತಿ ಸಚಿವಾಲಯ, ಜಲ ಸಂಪನ್ಮೂಲ, ನದಿ ಅಭಿವೃದ್ಧಿ ಮತ್ತು ಗಂಗಾ ಪುನರುಜ್ಜೀವನ ಇಲಾಖೆಯ ಅಪರ ಕಾರ್ಯದರ್ಶಿ ಸುಭೋದ್ ಯಾದವ್ ಹೇಳಿದರು.ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸಭಾ ಭವನದಲ್ಲಿ ಮಹಾತ್ವಕಾಂಕ್ಷಿ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆ ಉದ್ದೇಶಿಸಿ ಸೋಮವಾರ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರತಿ ಯೋಜನೆಯನ್ನು ಕಟ್ಟಕಡೆಯ ಫಲಾನುಭವಿಗಳಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನಕ್ಕೆ ಅಧಿಕಾರಿಗಳು ಮುಂದಾಗಬೇಕು. ಈ ವಿಷಯದಲ್ಲಿ ನಿರ್ಲಕ್ಷ್ಯತೋರುವುದು ಸರಿಯಲ್ಲ ಎಂದು ಹೇಳಿದರು.
ಮಹಾತ್ವಕಾಂಕ್ಷಿ ಜಿಲ್ಲೆಯ ಯೋಜನೆಯನ್ನು ಬ್ಲಾಕ್ ಮಟ್ಟದಲ್ಲಿ ಮಹಾತ್ವಕಾಂಕ್ಷಿ ಜಿಲ್ಲೆ ಯೋಜನೆ ಸ್ಥಾಪನೆ ಮಾಡಲಾಗಿದ್ದು, ಬ್ಲಾಕ್‌ಗಳ ಅಭಿವೃದ್ಧಿಯು ಅಂಕಿಸಂಖ್ಯೆಯಲ್ಲಿ ಉತ್ತಮವಾಗಿದ್ದು, ಕೇವಲ ಅಂಕಿ ಸಂಖ್ಯೆಯಲ್ಲಿ ಅಭಿವೃದ್ಧಿ ಮಾಡದೆ ನೈಜ್ಯ ರೂಪದಲ್ಲಿ ಅಭಿವೃದ್ಧಿ ಮಾಡಬೇಕು. ಅಲ್ಲದೆ ಮಹಾತ್ವಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಲ್ಲಿ ಸಂಪೂರ್ಣತಾ ಅಭಿಯಾನವನ್ನು ಕೈಗೊಳ್ಳಲಾಗಿದ್ದು, ಅಭಿಯಾನದ ಕಾರ್ಯಕ್ರಮವನ್ನು ಎಲ್ಲರಿಗೂ ತಲುಪುವಂತೆ ಮಾಡಬೇಕು ಎಂದರು.ಮೊದಲ ತ್ರೈಮಾಸಿಕದಲ್ಲಿ ನೋಂದಾಯಿಸಲಾದ ಎಎನ್‌ಸಿಯ ಶೇಕಡ ವಾರಿನಲ್ಲಿ ಜುಲೈನಲ್ಲಿ 99.50 ಹಾಗೂ ಆಗಸ್ಟ್‌ನಲ್ಲಿ 100 ಹೊಂದಲಾಗಿದೆ. ಸಂಪೂರ್ಣ ವ್ಯಾಕ್ಸಿನೇಷನ್ ಪಡೆದ ಮಕ್ಕಳ ಶೇಕಡವಾರು ಜುಲೈ ತಿಂಗಳಲ್ಲಿ ಶೇ.100 ಹಾಗೂ ಆಗಸ್ಟ್‌ನಲ್ಲಿ ಶೇ.100 ನೀಡಲಾಗಿದೆ. ಐಸಿಡಿಸಿ ಕಾರ್ಯಕ್ರಮದ ಅಡಿಯಲ್ಲಿ ನಿಯಮಿತವಾಗಿ ಪೂರಕ ಪೌಷ್ಠಿಕ ಅಂಶಗಳನ್ನು ತೆಗೆದುಕೊಳ್ಳವ ಗರ್ಭಿಣಿ ಮಹಿಳೆಯರ ಶೇಕವಾರು ಜುಲೈನಲ್ಲಿ 96.15 ಹಾಗೂ ಆಗಸ್ಟ್‌ನಲ್ಲಿ ಶೇ.100ರಷ್ಟು ನೀಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ನಿತೀಶ್ ಕೆ, ಜಿಪಂ ಕಾರ್ಯನಿರ್ವಹಕ ಅಧಿಕಾರಿ ಪಾಂಡ್ವೆ ರಾಹುಲ್ ತುಕರಾಮ್, ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಜಯಪ್ರಕಾಶ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕಾಳಪ್ಪ ಬಡಿಗೇರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಕೆಯ ಸರ್ವಕ್ಷಣಾಧಿಕಾರಿ ಡಾ.ಗಣೇಶ ಸೇ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.