ತಾಯಿ, ಶಿಶು ಮರಣ ತಪ್ಪಿಸಲು ಸಮುದಾಯದ ಸಹಕಾರ ಅಗತ್ಯ

KannadaprabhaNewsNetwork |  
Published : Feb 12, 2026, 01:15 AM IST
ಚಿತ್ರದುರ್ಗ  ಆಶಾ ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ, ತಾಯಿ ಮತ್ತು ಮಕ್ಕಳ ಆರೋಗ್ಯ ಕುರಿತು ಏರ್ಪಡಿಸಲಾದ ಒಂದು ದಿನದ ಕಾರ್ಯಗಾರಕ್ಕೆ ವೈದ್ಯೆ ಸುಮನ್ ರಾವ್ ಚಾಲನೆ ನೀಡಿದರು | Kannada Prabha

ಸಾರಾಂಶ

ಆರೋಗ್ಯ ಕುರಿತ ಒಂದು ದಿನದ ಕಾರ್ಯಾಗಾರದಲ್ಲಿ ವೈದ್ಯೆ ಸುಮನ್ ರಾವ್ ಹೇಳಿಕೆ

ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡಿ, ಆರೋಗ್ಯವಂತ ಸಮಾಜ ನಿರ್ಮಿಸುವಲ್ಲಿ ಸಮುದಾಯ ಸಹಕಾರ ಅತ್ಯಂತ ಮಹತ್ವದ್ದಾಗಿದೆ ಎಂದು ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮುಖ್ಯಸ್ಥೆ ವೈದ್ಯೆ ಸಮನ್ ರಾವ್ ಹೇಳಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸೆಂಟ್ ಜಾನ್ಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ಸಹಯೋಗದಲ್ಲಿ ಬೆತೂರು ಪಾಳ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಡಿಯಲ್ಲಿ ಆಶಾ ಅಂಗನವಾಡಿ ಹಾಗೂ ಆರೋಗ್ಯ ಕಾರ್ಯಕರ್ತರಿಗೆ, ತಾಯಿ ಮತ್ತು ಮಕ್ಕಳ ಆರೋಗ್ಯ ಕುರಿತು ಏರ್ಪಡಿಸಲಾದ ಒಂದು ದಿನದ ಕಾರ್ಯಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ತಾಯಿ ಮತ್ತು ಶಿಶು ಮರಣ ಕಡಿಮೆ ಮಾಡುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಸಮುದಾಯ ಮಟ್ಟದಲ್ಲಿ ಕೈಜೋಡಿಸಿ ಕಾರ್ಯನಿರ್ವಹಿಸಬೇಕಾಗಿದೆ. ಗರ್ಭಿಣಿಯರಲ್ಲಿನ ರಕ್ತಹೀನತೆ ತಡೆಗಡುವುದು. ಹೆರಿಗೆ ಸಿದ್ಧತೆ, ಹೆರಿಗೆ ನಂತರ ಗರ್ಭಿಣಿ ಹಾಗೂ ನವಜಾತ ಶಿಶುವಿನ ಹಾರೈಕೆ, ಎದೆ ಹಾಲಿನ ಮಹತ್ವ ಪೌಷ್ಟಿಕ ಆಹಾರದ ಮಹತ್ವ ಕಡಿಮೆ ತೂಕದ ನವಜಾತ ಶಿಶುಗಳಿಗೆ ಕಾಂಗರು ಮನೆಮಟ್ಟದಲ್ಲಿ ಮದರ್ ಕೇರ್ ನೀಡುವ ಕುರಿತು ಜಾಗೃತಿ ಮೂಡಿಸಬೇಕು ಎಂದರು. ಈ ಕುರಿತು ಕಾರ್ಯಗಾರದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಬೇತುರು ಪಾಳ್ಯ ಪ್ರಾಥಮಿಕ ಅರೋಗ್ಯ ಕೇಂದ್ರದ ವೈದ್ಯಧಿಕಾರಿ ದಿವ್ಯ, ಗ್ರಾಪಂ ಅಧ್ಯಕ್ಷೆ ಮಂಜುಳಾ ಜೋಗಿಶ್, ಸದಸ್ಯ ಗೋವಿಂದರಾಜ್, ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ರಂಗಪ್ಪ, ತಾಲೂಕು ಸಂಯೋಜಕಿ ಮೇಘ ಗುರುಪ್ರಸಾದ್, ಹಿರಿಯೂರು ತಾಲೂಕು ಸಂಯೋಜಕ ಉಮೇಶ, ಎನ್.ಚಿತ್ರದುರ್ಗ ತಾಲೂಕು ಸಂಯೋಜಕ ಚಿಕ್ಕಣ್ಣ.ಜಿ.ಕೆ, ಶ್ರೂಶೂಷಕರ ಮೇಲಾಧಿಕಾರಿ ಅಬ್ಬಾಸ್ ಸೇರಿದಂತೆ ಮತ್ತಿರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಿಲ್ಲಾಸ್ಪತ್ರೆಯಲ್ಲಿ ಹೆಚ್ಚುವರಿ ಹಾಸಿಗೆಗಳ ತೀವ್ರ ನಿಗಾ ಘಟಕ ಲೋಕಾರ್ಪಣೆ
ಶಿವಶರಣದ ಆಶಯದಂತೆ ಸರ್ಕಾರದ ಆಡಳಿತ: ಸಚಿವ ಕೆ.ಜೆ. ಜಾರ್ಜ್‌