ಆರ್ಥಿಕ ಉನ್ನತಿ ಸಾಧಿಸಲು ಸಮುದಾಯದ ಅಭಿವೃದ್ಧಿ ಅವಶ್ಯ

KannadaprabhaNewsNetwork |  
Published : Oct 19, 2024, 12:27 AM IST
ಪೊಟೊ: 18ಎಸ್‌ಎಂಜಿಕೆಪಿ01ಶಿವಮೊಗ್ಗದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ವಿಚಾರ ಉಪನ್ಯಾಸ ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ.ಕುಮಾರಸ್ವಾಮಿ ಮಾತನಾಡಿದರು. | Kannada Prabha

ಸಾರಾಂಶ

ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳು ಸಾಮಾಜಿಕ ಒಗ್ಗಟ್ಟು ಹಾಗೂ ಆರ್ಥಿಕ ಉನ್ನತಿ ಸಾಧಿಸುತ್ತದೆ ಎಂದು ನಿವೃತ್ತ ಪ್ರಾಚಾರ್ಯ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಆರ್ಥಿಕ ಮತ್ತು ಸಮುದಾಯ ಅಭಿವೃದ್ಧಿ ವಿಚಾರ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿ, ಸಮುದಾಯದ ಮೂಲ ಅಂಶಗಳನ್ನು ಅರ್ಥ ಮಾಡಿಕೊಳ್ಳುವುದು ಬಹು ಮುಖ್ಯ. ಸಮುದಾಯದ ಅಭಿವೃದ್ಧಿಯು ಸಬಲೀಕರಣ, ಮಾನವ ಹಕ್ಕುಗಳು ಸೇರ್ಪಡೆ, ಸಾಮಾಜಿಕ ನ್ಯಾಯ, ಸ್ವನಿರ್ಣಯ ಮತ್ತು ಸಾಮೂಹಿಕ ಕ್ರಿಯೆಗಳ ತತ್ವಗಳನ್ನು ಆಧರಿಸಿದೆ ಎಂದು ತಿಳಿಸಿದರು.

ಸಹಾಯಕ ಗವರ್ನರ್ ಸುರೇಶ್ ಮಾತನಾಡಿ, ಸಮುದಾಯದಲ್ಲಿ ಬದಲಾವಣೆ ಮಾಡಲು ಅಗತ್ಯವಿರುವ ಕೌಶಲ್ಯಗಳೊಂದಿಗೆ ಸಬಲೀಕರಣಗೊಳಿಸಲು ಪ್ರಯತ್ನಿಸುವುದು ನಮ್ಮ ಮುಖ್ಯ ಉದ್ದೇಶ ಎಂದು ಹೇಳಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ಜಿ. ಮಾತನಾಡಿ, ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಸೇವಾ ಕಾರ್ಯಗಳನ್ನು ನಡೆಸುತ್ತಿದ್ದು, ಸಾಮಾಜಿಕ ಚಟುವಟಿಕೆಗಳ ಜತೆಯಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ ಎಂದು ತಿಳಿಸಿದರು.

ರೋಟರಿ ವಲಯ 11ರ ಸಹಾಯಕ ಗವರ್ನರ್, ಏಳು ಕ್ಲಬ್ ಅಧ್ಯಕ್ಷರು ಮತ್ತು ಕಾರ್ಯದರ್ಶಿ, ವಲಯ ಲೆಫ್ಟಿನೆಂಟ್, ವಲಯ ತರಬೇತುದಾರ, ವಲಯ ಸಂಯೋಜಕರು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಎಲ್ ಸ್ವಾಮಿ, ಮಂಜುನಾಥ್ ರಾವ್ ಕದಂ, ರಾಧಾಕೃಷ್ಣ, ಸಂತೋಷ್ ಹಾಗೂ ಈಶ್ವರ ಬಿವಿ, ರವಿ ಕೋಟೋಜಿ, ಚುಡಾಮಣಿ ಪವಾರ್, ಜಿಎನ್ ಪ್ರಕಾಶ್, ಜಿ. ವಿಜಯಕುಮಾರ್, ವಸಂತ ಹೋಬಳಿದಾರ್, ರೋಟರಿಯ ಎಲ್ಲ ಪದಾಧಿಕಾರಿಗಳು ಹಾಗೂ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

''ದ್ವೇಷ ಮಸೂದೆಯಿಂದ ಭಿನ್ನ ದನಿ ದಮನ ಆಗಲ್ಲ ''
3 ವರ್ಷ ಮೊಮ್ಮಗನಿಗೆ ಬಾರಲ್ಲಿ ಹೆಂಡ ಕುಡಿಸಿದ ಅಜ್ಜ: ಆಕ್ರೋಶ