ಮೃತ ಮೀನುಗಾರರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರ

KannadaprabhaNewsNetwork |  
Published : Oct 29, 2026, 01:45 AM IST
ಕ್ಯಾಪ್ಷನ28ಕೆಡಿವಿಜಿ39, 40  ಕುಮಟಾ ತಾ. ತದಡಿ ಮೀನುಗಾರಿಕೆ ಬಂದರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಸಚಿವ ಕೆ.ಎಸ್. ಬಸವಂತಪ್ಪ  ಸಾಂತ್ವನ ಹೇಳಿದರು. | Kannada Prabha

ಸಾರಾಂಶ

ಕಾರವಾರ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಮೀನುಗಾರಿಕೆ ಬಂದರಿನಲ್ಲಿ ಬೋಟ್ ಸ್ವಚ್ಛಗೊಳಿಸುವ ಹಾಗೂ ಮೀನುಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಮೃತಪಟ್ಟ ಮೂವರು ಮೀನುಗಾರರ ಕುಟುಂಬಗಳಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ತಲಾ ₹10 ಲಕ್ಷ ಪರಿಹಾರ ವಿತರಿಸಿದರು.

- ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣ: ಬಂದರು ಖಾತೆ ಸಚಿವ ಬಸವಂತಪ್ಪ ಭರವಸೆ

- - -

ಕನ್ನಡಪ್ರಭ ವಾರ್ತೆ ದಾವಣಗೆರೆ

ಕಾರವಾರ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಮೀನುಗಾರಿಕೆ ಬಂದರಿನಲ್ಲಿ ಬೋಟ್ ಸ್ವಚ್ಛಗೊಳಿಸುವ ಹಾಗೂ ಮೀನುಗಳನ್ನು ತೆರವುಗೊಳಿಸುವ ಸಂದರ್ಭದಲ್ಲಿ ಉಸಿರುಗಟ್ಟಿ ಮೃತಪಟ್ಟ ಮೂವರು ಮೀನುಗಾರರ ಕುಟುಂಬಗಳಿಗೆ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿ, ತಲಾ ₹10 ಲಕ್ಷ ಪರಿಹಾರ ವಿತರಿಸಿದರು.

ಬುಧವಾರ ಕುಮಟಾ ತಾಲೂಕಿನ ತದಡಿ ಬಂದರಿಗೆ ಭೇಟಿ ನೀಡಿದ ಸಚಿವರು, ಮೃತರಾದ ಕುಮಟಾ ತಾಲೂಕಿನ ಕಾಗಲ್ ಗ್ರಾಮದ ನೌಶಾದ್ ಅಲಿಶಾ ರಾಜಾ (35), ವನ್ನಳ್ಳಿ ಗ್ರಾಮದ ಅಮನ್ ಅಯೂಬ್ ಲಂಗೋ (20) ಹಾಗೂ ಹುಬ್ಬಣಗೇರಿ ಗ್ರಾಮದ ಅಮೀರ್ ಅಬ್ದುಲ್ ಉಂಚಳ್ಳಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ದುಃಖತಪ್ತ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮೃತ ಮೀನುಗಾರರ ಮಕ್ಕಳಿಗೆ ವಸತಿ ಶಾಲೆಗಳಲ್ಲಿ ಉಚಿತ ಶಿಕ್ಷಣದ ವ್ಯವಸ್ಥೆ ಮಾಡಲಾಗುವುದು. ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ದೊರಕಿಸಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಘಟನೆ ನಡೆದ ತದಡಿ ಮೀನುಗಾರಿಕೆ ಬಂದರಿಗೂ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವರು, ಮೀನುಗಾರರು ಸಮುದ್ರಕ್ಕೆ ತೆರಳುವಾಗ ಹಾಗೂ ಬೋಟ್‌ನಲ್ಲಿ ಕೆಲಸ ನಿರ್ವಹಿಸುವಾಗ ಅಗತ್ಯ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು. ಆ ಮೂಲಕ ದುರ್ಘಟನೆಗಳು ಮರುಕಳಿಸದಂತೆ ಬೋಟ್ ಮಾಲೀಕರು ಅಗತ್ಯ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಿ, ಮೂಲಸೌಕರ್ಯ ಹಾಗೂ ರಕ್ಷಣಾ ವ್ಯವಸ್ಥೆಗಳನ್ನು ಒದಗಿಸಬೇಕು ಎಂದರು.

ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ಸಂಭವಿಸಿದರೆ ನಿರ್ಲಕ್ಷ್ಯ ವಹಿಸಿದ ಬೋಟ್ ಮಾಲೀಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಮೀನುಗಾರರ ಜೀವ ರಕ್ಷಣೆ, ಅವರ ಕುಟುಂಬಗಳ ಭದ್ರತೆ ಹಾಗೂ ಬಂದರುಗಳಲ್ಲಿ ಸುರಕ್ಷಿತ ಕೆಲಸದ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಂಬಂಧಪಟ್ಟವರಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಮೀನುಗಾರಿಕೆ ಇಲಾಖೆ ಅಧಿಕಾರಿಗಳು, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳು, ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಹಾಗೂ ಗ್ರಾಮಸ್ಥರು, ಮೀನುಗಾರರು ಹಾಜರಿದ್ದರು.

- - -

-28ಕೆಡಿವಿಜಿ39, 40:

ಕುಮಟಾ ತಾ. ತದಡಿ ಮೀನುಗಾರಿಕೆ ಬಂದರಿನಲ್ಲಿ ನಡೆದ ಘಟನೆಯಲ್ಲಿ ಮೃತರ ಕುಟುಂಬಗಳಿಗೆ ಸಚಿವ ಕೆ.ಎಸ್. ಬಸವಂತಪ್ಪ ಸಾಂತ್ವನ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಲ ನೀಡದ್ದಕ್ಕೆ ಬೇಕರಿ ಮಾಲೀಕರಿಗೆಧಮ್ಕಿ ಹಾಕಿ ದಾಂಧಲೆ: ಇಬ್ಬರ ಬಂಧನ
ಮೆಟ್ರೋದಲ್ಲಿ ಮಹಿಳೆಯ ವಿಡಿಯೋ ಮಾಡಿದ ಕಿಡಿಗೇಡಿ ವಿರುದ್ಧ ಕೇಸ್