ಕ್ರೀಡೆಯಲ್ಲಿ ಕನ್ನಡಿಗರೆಂಬ ಭಾವನೆಯಿಂದ ಸ್ಫರ್ಧಿಸಿ ಕೀರ್ತಿ ತನ್ನಿ: ಶಾಸಕ ಸಿ. ಪುಟ್ಟರಂಗಶೆಟ್ಟಿ ಸಲಹೆ

KannadaprabhaNewsNetwork |  
Published : Nov 20, 2025, 12:30 AM IST
ಯಾರೇ ಗೆದ್ದರೂ ಕನ್ನಡಿಗರು ಎಂಬ ಭಾವನೆಯಿಂದ ಸ್ಫರ್ಧಿಸಿ ರಾಜ್ಯಕ್ಕೆ ಕೀರ್ತಿ ತನ್ನಿ-ಸಿ. ಪುಟ್ಟರಂಗಶೆಟ | Kannada Prabha

ಸಾರಾಂಶ

ರಾಜ್ಯ ಮಟ್ಟದ ಪಂದ್ಯಾವಳಿ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಸಾಧನೆ ಮಾಡಬೇಕು. ಕ್ರೀಡೆ ಮತ್ತು ಪಠ್ಯಕ್ಕೆ ಅವಿನಾಭಾವ ಸಂಬಂಧ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಸರ್ಕಾರ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ.

ಕನ್ನಡಪ್ರಭ ವಾರ್ತೆ, ಚಾಮರಾಜನಗರ

ಇದು ರಾಜ್ಯ ಮಟ್ಟದ ಪಂದ್ಯಾವಳಿ. ಇಲ್ಲಿ ಯಾರೇ ಗೆದ್ದರೂ ಕನ್ನಡಿಗರು ಎಂಬ ಮನೋಭಾವನೆಯಿಂದ ಸ್ವರ್ಧೆಯಲ್ಲಿ ಭಾಗವಹಿಸಿ, ಗೆದ್ದವರು ರಾಷ್ಟ್ರಮಟ್ಟದಲ್ಲಿ ಭಾಗವಹಿಸಿ ರಾಜ್ಯಕ್ಕೆ ಕೀರ್ತಿ ತನ್ನಿ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ಹೇಳಿದರು.ನಗರದ ಜೆಎಸ್‌ಎಸ್ ಮಹಿಳಾ ಪದವಿಪೂರ್ವ ಕಾಲೇಜು ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳ ರಾಜ್ಯಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದು,

ವಿದ್ಯಾರ್ಥಿಗಳು ಓದಿನ ಜೊತೆಗೆ ಕ್ರೀಡೆ, ಸಂಗೀತ, ಕಲೆ ಸೇರಿ ಇತರೆ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಬೇಕು. ಕ್ರೀಡೆಗಳಿಂದ ಆರೋಗ್ಯ ವೃದ್ಧಿಯಾಗುವುದಲ್ಲದೇ ಮುಂದಿನ ಓದಿಗೂ ಸಹಕಾರಿಯಾಗಲಿದೆ ಎಂದರು.

ಜಿಲ್ಲೆಯಲ್ಲಿ ಪ್ರತಿ ವರ್ಷ ರಾಜ್ಯಮಟ್ಟದ ಕ್ರೀಡಾಕೂಟಗಳನ್ನು ಆಯೋಜಿಸಲಾಗುತ್ತದೆ. ಆದರೆ, ಇಲ್ಲಿರುವ ಕ್ರೀಡಾಂಗಣದಲ್ಲಿ ಮೂಲ ಸೌಕರ್ಯಗಳ ಕೊರತೆ ಇರುವುದರಿಂದ ಕ್ರೀಡಾಕೂಟಗಳನ್ನು ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಈಗಾಗಲೇ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ೧೫ ಕೋಟಿ ರು. ಬಿಡುಗಡೆ ಮಾಡಿದ್ದು ಮುಂದಿನ ದಿನಗಳಲ್ಲಿ ಕ್ರೀಡಾಂಗಣ ಅಭಿವೃದ್ಧಿಪಡಿಸಿ ಮೂಲಭೂತ ಸೌಕರ್ಯ ಕಲ್ಪಿಸಲಾಗುವುದು ಎಂದರು.

ಜಿಲ್ಲೆಯು ಕ್ರೀಡೆಯಲ್ಲಿ ಹೆಸರು ವಾಸಿಯಾಗಿದ್ದು ವಾಲಿಬಾಲ್ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದೆ. ರಾಜ್ಯಮಟ್ಟದ ಟೆನ್ನಿಸ್ ವಾಲಿಬಾಲ್ ಪಂದ್ಯಾವಳಿಗೆ ರಾಜ್ಯದ ವಿವಿಧೆಡೆಗಳಿಂದ ೪೯ ತಂಡಗಳು ಆಗಮಿಸಿದ್ದು ಉತ್ತಮ ಆಟವಾಡಿ ಜಯಶೀಲರಾಗಿ ಎಂದು ಶುಭ ಹಾರೈಸಿದರು.

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ ಸಮಾರಂಭ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಕ್ರೀಡೆಗಳಲ್ಲೂ ಭಾಗವಹಿಸಬೇಕು. ಶಿಕ್ಷಣ ಜ್ಞಾನಾರ್ಜನೆಗೆ ಸಹಕಾರಿಯಾದರೆ ಕ್ರೀಡೆ ಆರೋಗ್ಯ ವೃದ್ಧಿಗೆ ಸಹಕಾರಿ ಎಂದು ಹೇಳಿದರು.

ಇತ್ತೀಚೆಗೆ ಟೆನ್ನಿಸ್ ವಾಲಿಬಾಲ್ ಪ್ರಚಲಿತ ವಾಗಿದೆ. ನಮ್ಮ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಪಂದ್ಯಾವಳಿ ನಡೆಯುತ್ತಿರುವುದು ಹೆಮ್ಮೆಯ ವಿಷಯ, ಕ್ರೀಡೆಯಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿಗಳು ಉತ್ಸಾಹ ತೋರುತ್ತಿರುವುದು ಶ್ಲಾಘನೀಯ. ಕ್ರೀಡಾಪಟುಗಳು ಸೋಲು- ಗೆಲುವನ್ನು ಸಮಾನ ಸ್ವೀಕರಿಸಬೇಕು, ಸೋಲೇ ಮುಂದಿನ ಗೆಲವಿನ ಸೋಪಾನ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅಧ್ಯಕ್ಷ ಎಚ್.ವಿ. ಚಂದ್ರು ಮಾತನಾಡಿ, ರಾಜ್ಯ ಮಟ್ಟದ ಪಂದ್ಯಾವಳಿ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರೂ ಕ್ರೀಡೆಯಲ್ಲಿ ಸಾಧನೆ ಮಾಡಬೇಕು. ಕ್ರೀಡೆ ಮತ್ತು ಪಠ್ಯಕ್ಕೆ ಅವಿನಾಭಾವ ಸಂಬಂಧ, ಪ್ರತಿಯೊಬ್ಬರಲ್ಲೂ ಒಂದಲ್ಲ ಒಂದು ಪ್ರತಿಭೆ ಇದ್ದೆ ಇರುತ್ತದೆ. ಸರ್ಕಾರ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡುತ್ತಿದೆ. ಜಿಲ್ಲೆಯ ಆರ್ಚರಿ ಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಮಾತನಾಡಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕ್ರೀಡೆ ನಡೆಯುತ್ತಿರುವುದು ಹೆಮ್ಮೆಯ ವಿಚಾರ. ಸ್ಪರ್ಧೆಯಲ್ಲಿ ಭಾಗವಹಿಸಿರುವ ಮಕ್ಕಳಿಗೆ ನ್ಯಾಯಸಮ್ಮತ ತೀರ್ಪು ನೀಡುವಂತೆ ತೀರ್ಪುಗಾರಿಗೆ ತಿಳಿಸಿ. ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ ಭಾಗವಹಿಸುವುದು ಮುಖ್ಯ ಎಂದರು.

ಉಪನಿರ್ದೇಶಕಿ ಪುಟ್ಟಗೌರಮ್ಮ ಮಾತನಾಡಿ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಕ್ರೀಡೆಯು ಒಂದು ಅಂಗ. ವಿದ್ಯಾರ್ಥಿಗಳು ಪ್ರಾಥಮಿಕ ಹಂತದಿಂದ ತೊಡಿಗಿಸಿಕೊಂಡು ಕ್ರೀಡಾ ಸ್ಪೂರ್ತಿ ಮೆರೆಯುವಂತಾಗಬೇಕು ಎಂದು ತಿಳಿಸಿದರು.

ಜೆಎಸ್‌ಎಸ್ ಕಾಲೇಜಿನ ಸಾರ್ವಜನಿಕ ಸಂಪರ್ಕ ಅಧಿಕಾರಿ ಆರ್.ಎಂ. ಸ್ವಾಮಿ, ಪದವಿಪೂರ್ವ ಕಾಲೇಜು ಪ್ರಾಂಶುಪಾಲರ ಸಂಘದ ಅಧ್ಯಕ್ಷ ಪ್ರಿಯಾಶಂಕರ, ನಿವೃತ್ತ ಪ್ರಾಂಶುಪಾಲರಾದ ಎ.ಎಂ. ನಾಗಮಲ್ಲಪ್ಪ, ಸೋಮಣ್ಣ, ಕಲಾವಿದ ಸಿ.ಎಂ. ನರಸಿಂಹ ಮೂರ್ತಿ, ಪದವಿಪೂರ್ವ ಇಲಾಖೆ ಗೋಪಾಲ್, ಸತ್ಯಪ್ಪ ಸನ್ನಧಿ, ಪ್ರಾಂಶುಪಾಲ ದೇವರಾಜಮೂರ್ತಿ ಇತರರು ಇದ್ದರು.

ಇದೇ ಸಂದರ್ಭದಲ್ಲಿ ಡಿಸ್ಕಸ್ ಥ್ರೋನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುವ ಜಿಲ್ಲೆಯ ಅಭಿಜಿತ್ ನಾಯಕ್ ಮತ್ತು ಭೂಮಿಕಾ ಎಚ್.ಡಿ. ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

PREV

Recommended Stories

ಜೈಲೊಳಗಿನ ವಿಡಿಯೋ ಲೀಕ್‌ ಕೇಸಲ್ಲಿ ದರ್ಶನ್‌ ಪತ್ನಿಗೆ ಸಂಕಷ್ಟ?
ಬಡವರನ್ನು ಆರ್ಥಿಕವಾಗಿ ಮೇಲೆತ್ತುವ ಕೆಲಸ ಮಾಡಿದ ಇಂದಿರಾ ಗಾಂಧಿ: ಶಾಸಕ ಸಿ.ಪುಟ್ಟರಂಗಶೆಟ್ಟಿ