ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ನಡೆಯುವ ಸ್ಪರ್ಧೆಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ಉಡುಪಿ ಜಿಲ್ಲಾ ಲಯನ್ಸ್ 317C ವಿಭಾಗದ ಗವರ್ನರ್ ಸಪ್ನಾ ಸುರೇಶ್ ಹೇಳಿದರು.
ಉಡುಪಿ: ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ನಡೆಯುವ ಸ್ಪರ್ಧೆಗಳು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ಉಡುಪಿ ಜಿಲ್ಲಾ ಲಯನ್ಸ್ 317C ವಿಭಾಗದ ಗವರ್ನರ್ ಸಪ್ನಾ ಸುರೇಶ್ ಹೇಳಿದರು.ಅವರು ನಗರದ ಶ್ರೀ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ ಆಯೋಜಿಸಲಾದ ಪೂರ್ಣಂ 2026ನ್ನು ಉದ್ಘಾಟಿಸಿ ಮಾತನಾಡಿದರು.
ಕಾಲೇಜಿನಲ್ಲಿ ನಡೆಯುವ ಸ್ಪರ್ಧೆಗಳು ವಿದ್ಯಾರ್ಥಿ ಶಕ್ತಿಯನ್ನು ಅರಿತುಕೊಳ್ಳುವಂತೆ ಮಾಡುವ ಬಹುದೊಡ್ಡ ಅವಕಾಶ. ಇಂಥ ಸಂದರ್ಭಗಳನ್ನು ಸರಿಯಾಗಿ ಬಳಸಿಕೊಳ್ಳುವ ಮೂಲಕ ಮುಂದಿನ ಬದುಕಿನ ಸುಂದರ ಸ್ಮರಣೀಯ ಕ್ಷಣಗಳನ್ನು ಸೃಷ್ಟಿಸಿಕೊಳ್ಳಬೇಕು, ಸಮಾಮುಖಿ ಸೇವೆಯಲ್ಲಿ ತೊಡಗಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಚಂದ್ರಕಾಂತ್ ಭಟ್ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿ ಗೌರವ ಕಾರ್ಯದರ್ಶಿ ಸಿಎ.ಟಿ ಪ್ರಶಾಂತ ಹೊಳ್ಳ, ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಘಟಕದ ಸಂಯೋಜಕ ಡಾ. ರಾಘವೇಂದ್ರ ಎಲ್., ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿಗಳಾದ ವಿನಾಯಕ ಪೈ ಬಿ., ಡಾ. ಪ್ರಜ್ಞಾ ಮಾರ್ಪಳ್ಳಿ, ವಿದ್ಯಾರ್ಥಿ ನಾಯಕ ಗಗನ್ ಜೆ. ಸುವರ್ಣ, ಪೂರ್ಣಂನ ವಿದ್ಯಾರ್ಥಿ ಸಂಯೋಜಕರಾದ ಅವನಿ ಆಚಾರ್ಯ, ವಿವೇಕ್ ಕೆ. ಎಂ., ಶ್ರೇಯಸ್ ನಾಯಕ್ ಉಪಸ್ಥಿತರಿದ್ದರು.
ರಾನಿಯ ಕಾರ್ಯಕ್ರಮ ನಿರೂಪಣೆ ಮಾಡಿದರು. ವಿದ್ಯಾರ್ಥಿ ನಾಯಕ ಗಗನ್ ಸುವರ್ಣ ಸ್ವಾಗತಿಸಿದರು. ಅವನಿ ಆಚಾರ್ಯ ವಂದಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.