ಮಕ್ಕಳ ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆ ಅವಶ್ಯ: ಪರಶುರಾಮ ಶೆಟ್ಟೆಪ್ಪನವರ

KannadaprabhaNewsNetwork |  
Published : Jan 12, 2025, 01:15 AM IST
ಪೋಟೊ11.1: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ ಜಾನಪದ ನೃತ್ಯ ಕಾರ್ಯಕ್ರಮ ಉದ್ಘಾಟಿಸಿದರು. | Kannada Prabha

ಸಾರಾಂಶ

ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯ.

ವಿವಿಧ ಸ್ಪರ್ಧೆಗಳ ಕಾರ್ಯಕ್ರಮ 2025ರ ಅಂಗವಾಗಿ ನಡೆದ ಜಾನಪದ ನೃತ್ಯ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ

ಕನ್ನಡಪ್ರಭ ವಾರ್ತೆ ಕೊಪ್ಪಳ

ಪ್ರತಿಭೆ ಹೊರಹಾಕಲು ಜಾನಪದ ನೃತ್ಯದಂತಹ ಸ್ಪರ್ಧೆಗಳು ಮಕ್ಕಳಿಗೆ ಅವಶ್ಯ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟೆಪ್ಪನವರ ಹೇಳಿದರು.

ನಗರದ ರೈಲ್ವೆ ಸ್ಟೇಷನ್ ಎದುರುಗಡೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಪ್ಪಳ ಸಂಯೋಗದಲ್ಲಿ ವಿವಿಧ ಸ್ಪರ್ಧೆಗಳ ಕಾರ್ಯಕ್ರಮ 2025ರ ಅಂಗವಾಗಿ ನಡೆದ ಜಾನಪದ ನೃತ್ಯ ಉದ್ಘಾಟಿಸಿ ಮಾತನಾಡಿದರು.

ಮಕ್ಕಳು ಗುರಿ ಇಟ್ಟುಕೊಂಡು ಅದನ್ನು ಸಾಧಿಸುವಂತಹ ಸಾಧನೆ ಮಾಡಬೇಕು. ಯಾವುದೇ ಅವಕಾಶ ಕಳೆದುಕೊಳ್ಳಬಾರದು. ಇಂತಹ ಕಾರ್ಯಕ್ರಮದಲ್ಲಿ ಹೆಚ್ಚು ಹೆಚ್ಚು ಭಾಗವಹಿಸಬೇಕು ಎಂದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿ ಗಂಗಪ್ಪ ಮಾತನಾಡಿ, ಮಕ್ಕಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಲು ಇಂತಹ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹೇಳಿದರು.

ಸಿ.ಆರ್.ಪಿ. ರೇವಣಸಿದ್ದಪ್ಪ ಮಾತನಾಡಿ, ಇಂತಹ ಸ್ಪರ್ಧೆಗಳು ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿವೆ ಎಂದು ಹೇಳಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಅನ್ನಪೂರ್ಣಾ ಕುಬಕಡ್ಡಿ ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಪ್ರಶಸ್ತಿ ವಿತರಿಸಿದರು.

ಶಾಲಾ ಮುಖ್ಯೋಪಾಧ್ಯಾಯ ನಾಗರತ್ನಾ ಹವಳೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಬಾಲ ಭವನ ಕಾರ್ಯಕ್ರಮ ಸಂಯೋಜಕ ಮೆಹಬೂಬ ಸಾಬ್ ಇಲಾಹಿ ಕಾರ್ಯಕ್ರಮ ನಿರೂಪಿಸಿದರು.

ಶಾಲೆಯ ಸಹ ಶಿಕ್ಷಕಿ ಜಲಜಾಕ್ಷಿ ಸ್ವಾಗತಿಸಿದರು. ಮಾರುತಿ ಕಂಪ್ಲಿ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರ ವೃಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಬ್ಬಂದಿ ಹಾಗೂ ಶಾಲೆಯ ಎಲ್ಲ ಮಕ್ಕಳು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಸಿದ್ದುಗೆ ಇದು ಕೊನೆ ಅಧಿವೇಶನ: ವಿಜಯೇಂದ್ರ
ಬಿವೈವಿ ಕಲೆಕ್ಷನ್‌ ಕಿಂಗ್‌, ಕಲೆಕ್ಷನ್‌ ಬಿಚ್ಚಿಡ್ಲಾ? : ಡಿಕೆ