- ಜಿಲ್ಲೆಯಲ್ಲಿ ಒಟ್ಟು 2205 ಅಭ್ಯರ್ಥಿಗಳು: ಲೋಪಗಳಾಗದಂತೆ ಎಚ್ಚರ ವಹಿಸಬೇಕು: ಎಡಿಸಿ ಸೂಚನೆ - - -
ಕಲ್ಯಾಣ ಕರ್ನಾಟಕ ವೃಂದದ ವಿವಿಧ ಖಾಲಿ ಹುದ್ದೆಗಳಿಗೆ ಫೆ.22ರಂದು ನಡೆಯುವ ನಡೆಯುವ ಸ್ಪರ್ಧಾತ್ಮಕ ಪರೀಕ್ಷೆ ವೇಳೆ ಅಧಿಕಾರಿಗಳು ಪಾರದರ್ಶಕ ಮತ್ತು ಜವಾಬ್ದಾರಿಯುತವಾಗಿ ಕರ್ತವ್ಯ ನಿರ್ವಹಿಸಬೇಕು. ಪರೀಕ್ಷೆಯು ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30 (ಪತ್ರಿಕೆ 1), ಮಧ್ಯಾಹ್ನ 2.30 ರಿಂದ ಸಂ 4.30 (ಪತ್ರಿಕೆ 2) ನಡೆಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಸೂಚಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಬಿಡಿಎ, ಕೆಕೆಆರ್‌ಟಿಸಿ, ಕೆಎಸ್‌ಡಿಎಲ್, ತಾಂತ್ರಿಕ ಶಿಕ್ಷಣ ಇಲಾಖೆ, ಆರ್‌ಜಿಯುಹೆಚ್‌ಎಸ್, ಬಿಡಬ್ಲೂಎಸ್‌ಎಸ್‌ಬಿ, ಕೆಎಸ್‌ಎಸ್‌ಐಡಿಸಿ ಮುಂತಾದ ಇಲಾಖೆ, ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಯ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಒಟ್ಟು 2205 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದರು. ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಎಷ್ಟೇ ಎಚ್ಚರವಹಿಸಿದರೂ ಕೆಲ ತಪ್ಪುಗಳಾಗುತ್ತವೆ. ಹಾಗಾಗಿ ಪರೀಕ್ಷಾ ಕರ್ತವ್ಯ ನಿರ್ವಹಿಸುವ ಪ್ರತಿಯೊಬ್ಬರೂ ಪರೀಕ್ಷಾ ಮಾರ್ಗಸೂಚಿಗಳನ್ನು ಸರಿಯಾಗಿ ಓದಿಕೊಂಡು ಕರ್ತವ್ಯ ನಿರ್ವಹಿಸಬೇಕು. ತಾಂತ್ರಿಕತೆ ಬಹಳ ಮುಂದುವರಿದಿದ್ದು, ಪರೀಕ್ಷೆಗಳಲ್ಲಿ ತಾಂತ್ರಿಕತೆ ಬಳಸುವ ಅಪಾಯ ಇರುವುದರಿಂದ ಹೆಚ್ಚು ಜಾಗರೂಕರಾಗಿರಬೇಕು ಎಂದರು.ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್, ಸ್ಮಾರ್ಟ್ ಫೋನ್, ಸ್ಮಾರ್ಟ್ ವಾಚ್, ಬ್ಲೂ ಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ವಸ್ತುಗಳಿಗೆ ನಿರ್ಬಂಧವಿದೆ. ಆದಾಗ್ಯೂ ಯಾವುದೇ ವ್ಯಕ್ತಿಗಳು ಇವುಗಳನ್ನು ಕೇಂದ್ರದೊಳಗೆ ತಂದರೆ, ಅಂತಹವರ ಅಭ್ಯರ್ಥಿತನ ರದ್ದುಗೊಳಿಸಿ ಆಯೋಗ ನಡೆಸುವ ಎಲ್ಲ ಪರೀಕ್ಷೆಗಳಿಂದ ಡಿಬಾರ್ ಮಾಡಲಾಗುವುದು ಎಂದು ತಿಳಿಸಿದರು.
ಪರೀಕ್ಷಾ ಉಪ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಬೇಕು. ಕೊಠಡಿಗಳಿಗೆ ಜಾಮರ್ ಕ್ಯಾಮರಾ ಒದಗಿಸಬೇಕು. ಪ್ರವೇಶ ಪತ್ರ ಮತ್ತು ಮೂಲ ಗುರುತಿನ ಚೀಟಿ ಹೊಂದಿರಬೇಕು. ಅಭ್ಯರ್ಥಿಗಳು ತಮ್ಮ ನೋಂದಣಿ ಸಂಖ್ಯೆ ನಮೂದಿಸಿದ ಆಸನದಲ್ಲಿ ಕುಳಿತಿರುವುದನ್ನು ಖಚಿತಪಡಿಸಿಕೊಳ್ಳಬೇಕು. ನಾಮಿನಲ್ ರೋಲ್‌ನಲ್ಲಿರುವ ಫೋಟೋ ಮತ್ತು ಸಹಿ ಪರಾಮರ್ಶಿಸಿ ಅಭ್ಯರ್ಥಿಯ ಗುರುತನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.ಆಸೀನರಾಗಿರುವ ಅಭ್ಯರ್ಥಿಗಳಿಗೆ ಮಾತ್ರ ಅಂತಹವರದೇ ನೋಂದಣಿ ಸಂಖ್ಯೆಯುಳ್ಳ ಒ.ಎಂ.ಆರ್. ಹಾಳೆಗಳನ್ನು ನೀಡಿ, ಅದರಲ್ಲಿರುವ ಅಂಕಣಗಳನ್ನು ಸೂಕ್ತವಾಗಿ ಭರ್ತಿ ಮಾಡುವಂತೆ ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಸೂಚಿಸಬೇಕು. ಕೊಠಡಿ ವೀಕ್ಷಕರು ಆಭ್ಯರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಿ ಅದರಲ್ಲಿರುವ ಸೂಚನೆ ಓದಿಕೊಂಡ ನಂತರ ಉತ್ತರಿಸಲು ತಿಳಿಸಬೇಕು. ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಉತ್ತಮ ಡೆಸ್ಕ್ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ವ್ಯವಸ್ಥೆ ಮಾಡಬೇಕು, ಪರೀಕ್ಷಾ ಕೇಂದ್ರದಲ್ಲಿ ಆಸನಗಳ ವ್ಯವಸ್ಥೆ ಬಗ್ಗೆ ಸೂಚನಾ ಫಲಕದಲ್ಲಿ ಪ್ರಕಟಿಸಬೇಕು. ತುಂಬು ತೊಳಿನ ಶರ್ಟ್ ಧರಿಸಬಾರದು ಎಂದು ಅವರು ತಿಳಿಸಿದರು.
- - -(ಬಾಕ್ಸ್) * ಪರೀಕ್ಷಾ ಕೇಂದ್ರಗಳಿವು - ದಾವಣಗೆರೆಯ ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜು
- ರಾಜನಹಳ್ಳಿ ಸೀತಮ್ಮ ಸರ್ಕಾರಿ ಮಹಿಳಾ ಪಿಯು ಕಾಲೇಜು- ಬಾಲಕರ ಸರ್ಕಾರಿ ಪಿಯು ಕಾಲೇಜು
- ಡಾ. ಶಾಮನೂರು ಶಿವಶಂಕರಪ್ಪ ಪಿಯು ಕಾಲೇಜು- - -
-19ಕೆಡಿವಿಜಿ14.ಜೆಪಿಜಿ:ಸ್ಪರ್ಧಾತ್ಮಕ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.