ಕ್ರೀಡಾಕೂಟದಲ್ಲಿ ಸ್ಪರ್ಧಿಸುವ ಮನೋಭಾವ ಮುಖ್ಯ: ನರ್ಗಿಸ್‌ಭಾನು

KannadaprabhaNewsNetwork | Published : Dec 27, 2024 12:46 AM

ಸಾರಾಂಶ

ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವ ಮನೋಭಾವ ಮುಖ್ಯ ಎಂದು ಚಾಮರಾಜನಗರ ನೆಟ್‌ಬಾಲ್ ಅಸೋಸಿಯೇಷನ್ ಜಿಲ್ಲಾ ಗೌರವಾಧ್ಯಕ್ಷೆ ನರ್ಗಿಸ್ ಭಾನು ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ನೆಟ್‌ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಕ್ರೀಡಾಕೂಟದಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವ ಮನೋಭಾವ ಮುಖ್ಯ ಎಂದು ಚಾಮರಾಜನಗರ ನೆಟ್‌ಬಾಲ್ ಅಸೋಸಿಯೇಷನ್ ಜಿಲ್ಲಾ ಗೌರವಾಧ್ಯಕ್ಷೆ ನರ್ಗಿಸ್ ಭಾನು ಅಭಿಪ್ರಾಯಪಟ್ಟರು.

ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಚಾಮರಾಜನಗರ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ವತಿಯಿಂದ ನಡೆದ’ ೬ನೇ ರಾಜ್ಯಮಟ್ಟದ ೧೯ವರ್ಷದೊಳಗಿನ ನೆಟ್‌ಬಾಲ್ ಚಾಂಪಿಯನ್ ಶಿಪ್ ಪಂದ್ಯಾವಳಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕ್ರೀಡಾಕೂಟಗಳಲ್ಲಿ ಭಾಗವಹಿಸುವುದರಿಂದ ಕ್ರೀಡಾಳುಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗುತ್ತಾರೆ. ಇಂದು ಆಟವಾಡಿ ಹೋಗುವುದಲ್ಲ. ಇದನ್ನು ನಿರಂತರವಾಗಿ ಆಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

ಭಾರತ ಸೇವಾದಳ ಜಿಲ್ಲಾಧ್ಯಕ್ಷ, ಸಮಾಜಸೇ ವಕ ಬಿ.ಎಸ್.ವೆಂಕಟನಾಗಪ್ಪಶೆಟ್ಟಿ ಬಾಬು ಮಾತನಾಡಿ, ಚಾಮರಾಜನಗರದಲ್ಲಿ ರಾಜ್ಯಮಟ್ಟದ ನೆಟ್‌ಬಾಲ್ ಪಂದ್ಯಾವಳಿ ಆಯೋಜಿಸಿರುವುದು ಪ್ರಶಂಸನೀಯ, ಇದರ ಆಯೋಜನೆಗೆ ಶ್ರಮಿಸಿದ ಪದಾಧಿಕಾರಿಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.

ಜಿಲ್ಲಾ ಯುವಜನಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸುರೇಶ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮಗಳಂತೆ ಕ್ರೀಡಾಕೂಟಗಳು ಕೂಡಾ, ವಿದ್ಯಾರ್ಥಿಗಳ ಓದಿಗೆ ಸಹಕಾರಿಯಾಗಿವೆ. ಚಾಮರಾಜನಗರ ಜಾನಪದ ಕಲೆಗಳ ತವರೂರು, ಅದರ ಜತೆಗೆ ಕ್ರೀಡೆಗಳಿಗೂ ಪ್ರಸಿದ್ದವಾಗಿದೆ. ಚಾಮರಾಜನಗರ ಜಿಲ್ಲಾ ಕ್ರೀಡಾಂಗಣದ ಉಳಿದ ಮುಂದುವರಿದ ಕಾಮಗಾರಿಗಳಿಗೆ ಅನುದಾನ ಮಂಜೂರಾತಿಗೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಗ್ರೀನ್‌ ಅಗ್ರಿಟೆಕ್ ಗ್ರಾಮೀಣಾಭಿವೃದ್ದಿ ಸಂಸ್ಥೆ ನಿರ್ದೇಶಕ ಡಾ.ಕೆ.ಶ್ರೀಕಂಠಸ್ವಾಮಿ ಮಾತನಾಡಿ, ಕ್ರೀಡೆಗಳು ಆರೋಗ್ಯದ ಒಂದು ಭಾಗವಾಗಿದೆ. ಚಾಮರಾಜನಗರ ಕ್ರೀಡಾಪಟುಗಳು ಜಿಲ್ಲಾಮಟ್ಟದಿಂದ ರಾಜ್ಯಮಟ್ಟಕ್ಕೂ ಆಯ್ಕೆಯಾಗಿ ಪ್ರತಿಭೆ ಮರೆದಿದ್ದಾರೆ. ರಾಷ್ಟ್ರಮಟ್ಟಕ್ಕೂ ಆಯ್ಕೆಯಾಗಬೇಕು ಎಂಬುದು ನಮ್ಮ ಆಶಯ ಎಂದರು.

ಚಾಮರಾಜನಗರ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ಅಧ್ಯಕ್ಷ ವಿ.ಶ್ರೀನಿವಾಸಪ್ರಸಾದ್ ಮಾತನಾಡಿ, ಚಾಮರಾಜನಗರ ಜಿಲ್ಲೆ ಕ್ರೀಡಾಕೂಟಗಳ ತವರೂರಾಗಿದೆ. ಜಿಲ್ಲೆಯ ಜನತೆ ನೆಟ್ ಬಾಲ್ ಕ್ರೀಡಾಕೂಟಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಮನವಿ ಮಾಡಿದರು.

ಅಮೆಚೂರ್‌ ನೆಟ್ ಬಾಲ್ ಅಸೋಸಿಯೇಷನ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಗಿರೀಶ್, ಜಿಲ್ಲಾಪ್ರಧಾನಕಾರ್ಯದರ್ಶಿ ಬಿ.ಮಹದೇವಪ್ರಸಾದ್, ರಾಷ್ಟ್ರೀಯ ಕ್ರೀಡಾಪಟು ಸುರಭಿ, ಸ್ವಾಗತಟ್ರೇಡರ್ ನ ರಮೇಶ್, ಹಿರಿಯ ಕ್ರೀಡಾಪಟುಶ್ರೀನಿವಾಸ್, ರಾಜ್ಯ ಉಪಾಧ್ಯಕ್ಷ ಅನಿಲ್ ಕುಮಾರ್, ಖಜಾಂಚಿ ಮಹದೇವಸ್ವಾಮಿ, ಸಂಘಟನಾಕಾರ್ಯದರ್ಶಿ ಮಧುಕುಮಾರ್, ಸಹಕಾರ್ಯದರ್ಶಿ ಸುರೇಶ್‌ಕುಮಾರ್, ಚಾಮರಾಜನಗರ ಸೇರಿದಂತೆ ೧೨ ಜಿಲ್ಲೆಗಳ ಕ್ರೀಡಾಪಟುಗಳು ಹಾಜರಿದ್ದರು.

Share this article