ಕನಕಪುರ: ಕಮಲ್ ಹಾಸನ್ ವಿರುದ್ಧದ ಪ್ರಕರಣವನ್ನು ನ್ಯಾಯಾಲಯದಲ್ಲಿ ಹಿಂಪಡೆಯಲಾಗಿದೆ ಎಂದು ಜಿಲ್ಲಾ ಶ್ರೀ ರಾಮ ಸೇನೆ ಅಧ್ಯಕ್ಷ ನಾಗಾರ್ಜುನ್ ಗೌಡ ತಿಳಿಸಿದ್ದಾರೆ.
ನಟ ಕಮಲ್ ಹಾಸನ್ ಹೇಳಿಕೆ ವಿರೋಧಿಸಿ ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರದ 2 ನೇ ಅಪಾರ ಜೆಎಂಎಫ್‌ಸಿ ಅಂಡ್ ಸಿವಿಲ್ ನ್ಯಾಯಾಲಯದಲ್ಲಿ ಪಿಸಿಆರ್ ಪ್ರಕರಣವನ್ನು ದಾಖಲಿಸಲಾಗಿತ್ತು. ಜುಲೈ 25ರಂದು ಕಮಲ್ ಹಾಸನ್ ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ಕಾಯ್ದೆ ಪ್ರಕಾರ ಜನ ಪ್ರತಿನಿಧಿಗಳ ವಿರುದ್ಧ ದಾಖಲಾಗುವ ಕ್ರಿಮಿನಲ್ ಪ್ರಕರಣಗಳಿಗೆ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿರುವ ಹಿನ್ನೆಲೆಯಲ್ಲಿ ಸದರಿ ಪ್ರಕರಣವನ್ನು ಕನಕಪುರದ ಎರಡನೇ ಅಪಾರ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯದಿಂದ ಹಿಂಪಡೆದು ಬೆಂಗಳೂರಿನ ವಿಶೇಷ ಜನಪ್ರತಿನಿಧಿ ಗಳನ್ಯಾಯಾಲಯದಲ್ಲಿ ಪ್ರಕರಣವನ್ನು ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
ಕೆ ಕೆ ಪಿ ಸುದ್ದಿ 01: