ಲೋಕೋಪಯೋಗಿ ಸಚಿವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ದೂರು: ಹರೀಶ್‌

KannadaprabhaNewsNetwork |  
Published : Nov 22, 2025, 02:00 AM IST
21 HRR. 02ಹರಿಹರದ ಶಿವಮೊಗ್ಗ ರಸ್ತೆಯಲ್ಲಿ ನಡೆಯುತ್ತಿರುವ ಟಾರ್ ರಸ್ತೆ ಕಾಮಗಾರಿಯನ್ನು ಶಾಸಕ ಬಿ.ಪಿ ಹರೀಶ್ ವೀಕ್ಷಿಸಿ ನಂತರ  ಸುದ್ದಿಗಾರೊಂದಿಗೆ ಮಾತನಾಡಿದರು. | Kannada Prabha

ಸಾರಾಂಶ

ಲೋಕೋಪಯೋಗಿ ಸಚಿವರ ವಿರುದ್ಧ ಸ್ಪೀಕರ್ ಅವರಿಗೆ ಹಕ್ಕುಚ್ಯುತಿ ಮಂಡನೆಗೆ ದೂರು ನೀಡಲಾಗಿದೆ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ್ ಹೇಳಿದ್ದಾರೆ.

ಹರಿಹರ: ಲೋಕೋಪಯೋಗಿ ಸಚಿವರ ವಿರುದ್ಧ ಸ್ಪೀಕರ್ ಅವರಿಗೆ ಹಕ್ಕುಚ್ಯುತಿ ಮಂಡನೆಗೆ ದೂರು ನೀಡಲಾಗಿದೆ ಎಂದು ಹರಿಹರ ಕ್ಷೇತ್ರ ಶಾಸಕ ಬಿ.ಪಿ.ಹರೀಶ್ ಹೇಳಿದರು.

ನಗರದ ಶಿವಮೊಗ್ಗ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಕಾಮಗಾರಿ ವೀಕ್ಷಿಸಿದ ನಂತರ ಅವರು ಸುದ್ದಿಗಾರೊಂದಿಗೆ ಮಾತನಾಡಿದರು. ಇತ್ತೀಚಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಾಲೂಕಿನ ರಾಜನಹಳ್ಳಿ ರಸ್ತೆಯ ₹5 ಕೋಟಿ ಸಿಸಿ ರಸ್ತೆ ಹಾಗೂ ಬೆಳ್ಳೂಡಿ ಗ್ರಾಮದ ₹5 ಕೋಟಿ ಸಿಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ್ದರು. ಈ ವೇಳೆ ಸ್ಥಳೀಯ ಶಾಸಕನಾದ ನನಗೆ ಯಾವುದೇ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡದೇ ಪ್ರೋಟೋಕಾಲ್ ಉಲ್ಲಂಘನೆ ಮಾಡಿದ್ದಾರೆ. ಈ ಕಾರಣ ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಲಿಖಿತವಾಗಿ ದೂರು ನೀಡಲಾಗಿದೆ ಎಂದು ಹೇಳಿದರು.

ನಗರದಲ್ಲಿ ದಾವಣಗೆರೆ- ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಹಲವು ಕಾಮಗಾರಿಗಳಿಗೆ ಕಾಂಗ್ರೆಸ್ ಮುಖಂಡರು ಗುದ್ದಲಿ ಪೂಜೆ ನೆರವೇರಿಸುತ್ತಿರುವ ಬಗ್ಗೆ ಮಾತನಾಡಿದ ಅವರು, ರಾಜಕೀಯ ಅನುಭವ ಕೊರತೆ ಹಾಗೂ ಪರಿಜ್ಞಾನ ಇಲ್ಲದವರು ಈ ತರದ ಕೆಲಸ ಮಾಡುತ್ತಾರೆ ಎಂದು ಪರೋಕ್ಷವಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀನಿವಾಸ್ ನಂದಿಗಾವಿ ಅವರೆಡೆ ಬೆರಳು ಮಾಡಿದರು.

ಈಗಾಗಲೇ ದೂಡಾ ಅಧಿಕಾರಿಗಳು ಹಕ್ಕುಚ್ಯುತಿ ಕೇಸಲ್ಲಿ ಬೆಂಗಳೂರಿಗೆ ಅಲೆದಾಡುತ್ತಿದ್ದಾರೆ. ಈಗ ಮತ್ತು ಅದೇ ತಪ್ಪುಗಳನ್ನು ಮಾಡಿ ಪ್ರೋಟೋಕಾಲನ್ನು ಉಲ್ಲಂಘನೆ ಮಾಡುತ್ತಿದ್ದಾರೆ. ಅವರಿಗೆ ಏನು ಹೇಳಬೇಕು ಹೇಗೆ ಹೇಳಬೇಕು ಎಂಬುದು ಗೊತ್ತಾಗುತ್ತಿಲ್ಲ ಎಂದು ಕಿಡಿಕಾರಿದರು.

- - -

-21HRR.02:

ಹರಿಹರದ ಶಿವಮೊಗ್ಗ ರಸ್ತೆಯಲ್ಲಿ ನಡೆಯುತ್ತಿರುವ ಟಾರ್ ರಸ್ತೆ ಕಾಮಗಾರಿಯನ್ನು ಶಾಸಕ ಬಿ.ಪಿ ಹರೀಶ್

ವೀಕ್ಷಿಸಿ ನಂತರ ಸುದ್ದಿಗಾರೊಂದಿಗೆ ಮಾತನಾಡಿದರು.

PREV

Recommended Stories

ಅಂಬೇಡ್ಕರ್ ಒಬ್ಬರೇ ಸಂವಿಧಾನ ಬರೆದಿದ್ದಾರೆ
ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗಲಿ: ರಮೇಶ ಬಂಡಿಸಿದ್ದೇಗೌಡ