ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ: ದೂರು ದಾಖಲು

KannadaprabhaNewsNetwork |  
Published : Sep 09, 2026, 01:15 AM IST
  ಸಿಕೆಬಿ-2 ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ವೇದಮೂರ್ತಿ ವಿರುದ್ಧ ಕ್ರಮಕ್ಕೆ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು | Kannada Prabha

ಸಾರಾಂಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಜಾತಿ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎನ್ನಲಾದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸಮತಾ ಸೈನಿಕ ದಳ ಆಕ್ರೋಶ । ಮಂಡ್ಯ ವೇದಮೂರ್ತಿ ಎಂಬಾತನ ವಿರುದ್ಧ ಪ್ರಕರಣ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಸಂವಿಧಾನ ಶಿಲ್ಪಿ ಹಾಗೂ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಕುರಿತು ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವ ಆರೋಪದ ಹಿನ್ನೆಲೆಯಲ್ಲಿ ವೇದಮೂರ್ತಿ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಬೂಕನಕೆರೆ ಹೋಬಳಿಯ ದೊಡ್ಡಯಾಚೆನಹಳ್ಳಿ ಗ್ರಾಮದ ವೇದಮೂರ್ತಿ ಎಂಬಾತ ಡಾ.ಬಿ.ಆರ್.ಅಂಬೇಡ್ಕರ್ ಅವರ ವ್ಯಕ್ತಿತ್ವ, ಜಾತಿ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎನ್ನಲಾದ ವಿಡಿಯೋ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೀಸಲಾತಿ ಸೇರಿದಂತೆ ಸಂವಿಧಾನಾತ್ಮಕ ವಿಚಾರಗಳ ಬಗ್ಗೆಯೂ ಆಕ್ಷೇಪಾರ್ಹ ರೀತಿಯಲ್ಲಿ ಹೇಳಿಕೆ ನೀಡಿರುವುದು ಕಂಡುಬಂದಿದೆ. ಇಂತಹ ಹೇಳಿಕೆಗಳು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ಉಂಟುಮಾಡುವುದಲ್ಲದೆ, ಸಮಾಜದಲ್ಲಿ ಅಶಾಂತಿ ಹಾಗೂ ಸಾಮಾಜಿಕ ಸೌಹಾರ್ದತೆಗೆ ಧಕ್ಕೆ ಯಾಗುವ ಸಾಧ್ಯತೆಯಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಹಾಗೂ ಸಂಬಂಧಿತ ಡಿಜಿಟಲ್ ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿತ ವ್ಯಕ್ತಿಯ ವಿರುದ್ಧ ಅನ್ವಯಿಸುವ ಕಾನೂನುಗಳ ಅಡಿಯಲ್ಲಿ ತಕ್ಷಣ ಪ್ರಕರಣ ದಾಖಲಿಸಿ ಸೂಕ್ತ ತನಿಖೆ ನಡೆಸಬೇಕು. ಅಂಬೇಡ್ಕರ್ ಹಾಗೂ ದಲಿತ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇಂತಹ ಹೇಳಿಕೆಗಳಿಂದ ಸಾರ್ವಜನಿಕ ಶಾಂತಿ, ಸಾಮಾಜಿಕ ಸೌಹಾರ್ದತೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ, ಆರೋಪಿತ ವ್ಯಕ್ತಿಯನ್ನು ಭಾರತದಿಂದ ಗಡಿಪಾರು ಮಾಡುವ ಕುರಿತು ಸಂಬಂಧಪಟ್ಟ ಸಕ್ಷಮ ಪ್ರಾಧಿಕಾರದ ಮುಂದೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆಗಳನ್ನು ನೀಡದಂತೆ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ದೂರಿನೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಲಭ್ಯವಿರುವ ವಿಡಿಯೋ ಸೇರಿದಂತೆ ಸಂಬಂಧಿತ ಸಾಕ್ಷ್ಯಗಳನ್ನು ಪರಿಶೀಲಿಸಿ, ಆರೋಪಿತ ವ್ಯಕ್ತಿಯ ವಿರುದ್ಧ ಕಾನೂನುಬದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಾಂತರ ಪೊಲೀಸರಿಗೆ ಮನವಿ ಮಾಡಲಾಗಿದೆ.

ಸಿಕೆಬಿ-2 ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ವೇದಮೂರ್ತಿ ವಿರುದ್ಧ ಕ್ರಮಕ್ಕೆ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ಜಿ.ಸಿ. ವೆಂಕಟರಮಣಪ್ಪ ಅವರು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆ; ಜಾಗೃತಿ
ಬಗರ್‌ಹುಕುಂ ಜಮೀನು ವಶ ವಿರೋಧಿಸಿ ರೈತರ ಪ್ರತಿರೋಧ ಸಮಾವೇಶ