ಕನ್ನಡಪ್ರಭ ವಾರ್ತೆ ಬೆಂಗಳೂರು
ನಗರದಲ್ಲಿ ರಸ್ತೆ ಬದಿ, ಸರ್ಕಾರಿ ಜಾಗಗಳಲ್ಲಿ ಒಣಗಿದ ಮರಗಳು ಹಾಗೂ ಒಣಗಿದ ರೆಂಬೆ ಕೊಂಬೆ ಬಿಬಿಎಂಪಿಯ ಅರಣ್ಯ ವಿಭಾಗದ ವತಿಯಿಂದ ತೆರವುಗೊಳಿಸಲಾಗುತ್ತಿದೆ.ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿದ ಮರಗಳು ಹಾಗೂ ಒಣಗಿದ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಬಿಬಿಎಂಪಿಯ ಅರಣ್ಯ ಅಧಿಕಾರಿಗಳ ದೂರುವಾಣಿಯ ವಾಟ್ಸ್ ಅಪ್‌ಗೆ ಜಿಪಿಎಸ್ ಸಹಿತ ಫೋಟೋ ಲಗತ್ತಿಸಿ ಮಾಹಿತಿ ನೀಡಬಹುದಾಗಿದೆ ಎಂದು ಬಿಬಿಎಂಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ.ಜಿ.ಎಲ್.ಸ್ವಾಮಿ ಸಾರ್ವಜನಿಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬಿಬಿಎಂಪಿಯ ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯದಲ್ಲಿ ಒಣಗಿರ ಮರ ಹಾಗೂ ರಂಬೆ ಕೊಂಬೆ ಕಂಡು ಬಂದರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಡಿ.ಪ್ರಕಾಶ್, (96630 35011, 94806 83886), ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ ಮತ್ತು ರಾಜರಾಜೇಶ್ವರಿನಗರ ವಲಯಕ್ಕೆ ಸಂಬಂಧಿಸಿದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, (70194 64699), ಪೂರ್ವ ವಲಯಕ್ಕೆ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ (93800 90027), ರವೀಂದ್ರನಾಥ್ (63619 03330) ಹಾಗೂ ಉಪ ವಲಯ ಅರಣ್ಯಾಧಿಕಾರಿ ಪಿ.ನಾಗೇಂದ್ರ (91135 30344), ಪಶ್ಚಿಮ ವಲಯದ ವಲಯ ಅರಣ್ಯಾಧಿಕಾರಿ ಶಿವರಾಮು (94806 83341) ದಕ್ಷಿಣ ವಲಯ ವಲಯ ಅರಣ್ಯಾಧಿಕಾರಿ ಎಸ್.ಆರ್.ಕೃಷ್ಣ (77605 53545) ಹಾಗೂ ಹರೀಶ್ (94806 85039), ದಾಸರಹಳ್ಳಿ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ಕೆ.ಎನ್.ರಾಜಪ್ಪ, (94482 34928), ಬೊಮ್ಮನಹಳ್ಳಿ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ನರೇಂದ್ರ ಬಾಬು (94806 85399), ಯಲಹಂಕ ವಲಯದ ಪ್ರಭಾರ ವಲಯ ಅರಣ್ಯಾಧಿಕಾರಿ ವಿ.ಚಂದ್ರಪ್ಪ(90640 42566), ರಾ.ರಾ.ನಗರ ವಲಯದ ವಲಯ ಅರಣ್ಯಾಧಿಕಾರಿ ಎಸ್.ಆರ್.ಕೃಷ್ಣ, (77605 53545), ಮಹದೇವಪುರ ವಲಯದ ವಲಯ ಅರಣ್ಯಾಧಿಕಾರಿ ಎಂ.ಪುಷ್ಪಾ (81472 76414) ಎ.ಸುದರ್ಶನ್ (78995 55182) ಅವರ ದೂರುವಾಣಿ ಸಂಖ್ಯೆಗೆ ದೂರು ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.