ಕೈ ಕಾಯಕರ್ತೆ ಬಿಂದು ಸಿರಿ ವಿರುದ್ಧ ಕ್ರಮ ವಹಿಸುವಂತೆ ಬಿಜೆಪಿ ಮಹಿಳಾ ಕಾರ್ಯಕರ್ತೆಯಿಂದ ದೂರು

KannadaprabhaNewsNetwork |  
Published : Mar 01, 2026, 01:30 AM IST
ಪೋಟೋ 2 : ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ದ ಪೋಸ್ಟ್ ಮಾಡಿರುವ ಕಾಂಗ್ರೇಸ್ ಕಾರ್ಯಕರ್ತೆ ಬಿಂದು ಸಿರಿ ವಿರುದ್ಧ ಕ್ರಮವಹಿಸುವಂತೆ ಆಗ್ರಹಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವುದು | Kannada Prabha

ಸಾರಾಂಶ

ದೇಶ ಹಾಗೂ ದೇಶದ ಮಹಿಳೆಯರಿಗೆ ಅಪಾರ ಗೌರವ ನೀಡುವ ಪ್ರಧಾನಿ ಅವರನ್ನು ಕೆಟ್ಟದಾಗಿ ಬಿಂಬಿಸಿರುವುದನ್ನು ಬಿಜೆಪಿ ಮಹಿಳಾ ಮೋರ್ಚಾ ಖಂಡಿಸುತ್ತದೆ. ಕ್ರಮ ವಹಿಸದಿದ್ದರೆ ಉಗ್ರ ಹೋರಾಟವನ್ನು ಮಹಿಳಾ ಮೋರ್ಚಾದಿಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕನ್ನಡಪ್ರಭ ವಾರ್ತೆ ದಾಬಸ್‍ಪೇಟೆ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಭಾವಚಿತ್ರವನ್ನು ವಿಕೃತಗೊಳಿಸಿ, ಅಶ್ಲೀಲ, ಸುಳ್ಳು ಮಾಹಿತಿ ಪೋಸ್ಟ್ ಮಾಡಿದ್ದ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಸಿರಿ ಎಂಬುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನೆಲಮಂಗಲ ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿಗಳು ನೆಲಮಂಗಲ ಉಪವಿಭಾಗ, ನೆಲಮಂಗಲ ಗ್ರಾಮಾಂತರ, ನೆಲಮಂಗಲ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ಸಲ್ಲಿಸಿ ಆಗ್ರಹಿಸಿದರು.

ಪೊಲೀಸ್ ಇಲಾಖೆಗೆ ದೂರು ಸಲ್ಲಿಸಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷೆ ಮಂಜುಳ ಸುರೇಶ್, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರಮೋದಿ ಅವರ ಭಾವಚಿತ್ರವನ್ನು ವಿಕೃತಗೊಳಿಸಿ, ಅಶ್ಲೀಲ ಪೋಸ್ಟರ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕಾಂಗ್ರೆಸ್ ಕಾರ್ಯಕರ್ತೆ ಬಿಂದು ಸಿರಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪೋಸ್ಟರ್ ಡಿಲೀಟ್ ಮಾಡಿ ಕ್ಷಮೆಯಾಚಿಸಬೇಕು ಎಂದು ನಮ್ಮ ತಾಲೂಕಿನ ವಿವಿಧ ಪೊಲೀಸ್ ಠಾಣೆಗಳಲ್ಲಿ ದೂರು ಸಲ್ಲಿಸಿದ್ದೇವೆ ಎಂದರು.

ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶೀಲಾ ಮಾತನಾಡಿ, ದೇಶ ಹಾಗೂ ದೇಶದ ಮಹಿಳೆಯರಿಗೆ ಅಪಾರ ಗೌರವ ನೀಡುವ ಪ್ರಧಾನಿ ಅವರನ್ನು ಕೆಟ್ಟದಾಗಿ ಬಿಂಬಿಸಿರುವುದನ್ನು ಬಿಜೆಪಿ ಮಹಿಳಾ ಮೋರ್ಚಾ ಖಂಡಿಸುತ್ತದೆ. ಕ್ರಮ ವಹಿಸದಿದ್ದರೆ ಉಗ್ರ ಹೋರಾಟವನ್ನು ಮಹಿಳಾ ಮೋರ್ಚಾದಿಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಮುಖಂಡರಾದ ಬೃಂಗೀಶ್, ರಾಜಶೇಖರ್, ಸತೀಶ್, ಗಿರೀಶ್, ರವಿ, ಅರುಣಕುಮಾರ್, ಜಗದೀಶ್, ಮಹಿಳಾ ಪದಾಧಿಕಾರಿಗಳಾದ ಲತಾ, ಶೈಲಜಾ, ಶಾರದ, ಸುಮಲತಾ, ಗೀತಾರಾಧ, ನೀಲಮ್ಮ, ತೇಜು, ಮಂಜುಳ, ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿಸಾನ್‌ ಸನ್ಮಾನ್‌ ಇ - ಕೆವೈಸಿಗೆ ಸರ್ವರ್‌ ಅಡ್ಡಿ!
ವರ್ಷಕ್ಕೆ ಲಕ್ಷ ಮಂದಿಗೆ ರೋಗ- 40 ಸಾವಿರ ಸಾವು : ಆತಂಕಕಾರಿ ಮಾಹಿತಿ ನೀಡಿದ ಡಾ.ಸಿಎನ್ ಮಂಜುನಾಥ್