ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಹಬ್ಬ ಕಾರ್ಯಕ್ರಮ ವಿಚಾರದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಧ್ಯಮಗಳಿಗೆ ತಪ್ಪು ಮಾಹಿತಿ ನೀಡಿದ್ದಾರೆ. ಕನ್ನಡಪರ ಸಂಘಟನೆಗಳೊಂದಿಗೆ ಎಂಟು ಬಾರಿ ಸಭೆ ನಡೆಸಿದ್ದೇನೆ ಎಂದು ಸುಳ್ಳು ಹೇಳಿಕೆ ನೀಡಿರುವುದು ಖಂಡನೀಯ. ಕನ್ನಡಪರ ಸಂಘಟನೆಗಳೊಂದಿಗೆ ಸಂವಹನ ಕೊರತೆಯಾಗಿದೆ ಎಂದು ಜಿಲ್ಲಾಧಿಕಾರಿಯೇ ಒಪ್ಪಿಕೊಂಡಿರುವುದು ದ್ವಂದ್ವ ನಿಲುವು ತೋರಿಸುತ್ತದೆ ಎಂದು ಟೀಕಿಸಿದರು.
ಸರ್ಕಾರದ ಸುತ್ತೋಲೆಯಲ್ಲಿ ಕನ್ನಡಪರ ಸಂಘಟನೆಗಳ ಮೂಲಕವೇ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೆ, ಅದನ್ನು ಉಲ್ಲಂಘಿಸಿ ಏಕಪಕ್ಷೀಯವಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಸುಮಾರು ₹ 3 ಲಕ್ಷ ಸಂಘಟನೆಗಳ ಅನುಮತಿ ಇಲ್ಲದೆ ಬೇರೊಂದು ಕಾರ್ಯಕ್ರಮಕ್ಕೆ ನೀಡಿರುವುದು ಹಾಗೂ ನಾಡಹಬ್ಬ ರಸಮಂಜರಿ ಕಾರ್ಯಕ್ರಮವನ್ನು ಪೂರ್ವ ಮಾಹಿತಿ ಇಲ್ಲದೆ ಆಯೋಜಿಸಿರುವುದು ಅನುಮಾನಗಳಿಗೆ ಕಾರಣವಾಗಿದೆ ಎಂದು ಹೇಳಿದರು.ರಾಜ್ಯೋತ್ಸವದ ಅನುದಾನದಲ್ಲಿ ಅನೇಕ ಕಾರ್ಯಕ್ರಮ ನಡೆಸಬಹುದಾಗಿದ್ದರೂ, ಒಂದೇ ಕಾರ್ಯಕ್ರಮಕ್ಕೆ ಹೆಚ್ಚಿನ ಮೊತ್ತ ವ್ಯಯಿಸಿ ತರಾತುರಿಯಲ್ಲಿ ಆಚರಣೆ ಮಾಡುತ್ತಿರುವುದು ಸರಿಯಾದ ಕ್ರಮವಲ್ಲ. ಜಿಲ್ಲಾಧಿಕಾರಿ ಸರ್ವಾಧಿಕಾರಿ ಧೋರಣೆ ಕುರಿತು ಸಮಗ್ರ ಮಾಹಿತಿ ಸಂಗ್ರಹಿಸಿ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.