ಕಸಾಪ ರಾಜ್ಯಾಧ್ಯಕ್ಷ ಡಾ.ಮಹೇಶ್‌ ಜೋಶಿ ವಿರುದ್ಧ ಸಿಎಂ ಸಿದ್ದರಾಮಯ್ಯಗೆ ದೂರು

KannadaprabhaNewsNetwork |  
Published : Apr 24, 2025, 12:00 AM IST
೨೩ಕೆಎಂಎನ್‌ಡಿ-9ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ವಿವಿಧ ಸಂಘಟನೆಗಳ ಮುಖಂಡರು, ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷರು ರಾಜ್ಯಾಧ್ಯಕ್ಷರ ವಿರುದ್ಧ ಮೂರ್ನಾಲ್ಕು ಪುಟಗಳ ದೂರು ಸಲ್ಲಿಸಿದರು. | Kannada Prabha

ಸಾರಾಂಶ

ರಾಜ್ಯಾಧ್ಯಕ್ಷರು ಜಿಲ್ಲಾ ಕಸಾಪ ಸದಸ್ಯರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸದಸ್ಯರ ಸದಸ್ಯತ್ವವನ್ನು ಅಮಾನತುಗೊಳಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿದ್ದ ರವಿಕುಮಾರ್ ಮೃತಪಟ್ಟು ಒಂದು ವರ್ಷವಾದರೂ ಅಧ್ಯಕ್ಷರನ್ನು ನೇಮಕ ಮಾಡುತ್ತಿಲ್ಲ. ಕಾರ್ಯಕಾರಿ ಸಮಿತಿಯ ಸಭೆ ಕರೆದಿಲ್ಲ.

ಕನ್ನಡಪ್ರಭ ವಾರ್ತೆ ಮಂಡ್ಯ

ಕೇಂದ್ರ ಕಸಾಪ ರಾಜ್ಯಾಧ್ಯಕ್ಷರ ಸರ್ವಾಧಿಕಾರಿ ಧೋರಣೆ, ಕಸಾಪ ಬೈಲಾ ತಿದ್ದುಪಡಿ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕ ಕೊಡದಿರುವುದು, ದ್ವೇಷದಿಂದ ಕಸಾಪ ಸದಸ್ಯರ ಸದಸ್ಯತ್ವ ರದ್ದುಗೊಳಿಸುತ್ತಿರುವುದು, ಜಿಲ್ಲೆಯ ಜನತೆಗೆ ಕನಿಷ್ಠ ಕೃತಜ್ಞತೆ ಸಲ್ಲಿಸದಿರುವ ನಡೆಯನ್ನು ವಿರೋಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು, ಸಾಹಿತಿಗಳು, ರಾಜ್ಯ ರೈತ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಕನ್ನಡ ಪರ ಸಂಘಟನೆಗಳ ಮುಖ್ಯಸ್ಥರು, ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ದೂರು ಸಲ್ಲಿಸಿದರು.

ನಾಗಮಂಗಲ ತಾಲೂಕಿನ ದೊಡ್ಡಬಾಲ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜ್ಯಾಧ್ಯಕ್ಷರ ವಿರುದ್ಧ ಮೂರ್ನಾಲ್ಕು ಪುಟಗಳ ದೂರು ಸಲ್ಲಿಸಿದರು. ರಾಜ್ಯಾಧ್ಯಕ್ಷರು ಜಿಲ್ಲಾ ಕಸಾಪ ಸದಸ್ಯರ ವಿರುದ್ಧ ದ್ವೇಷ ಸಾಧಿಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ಸದಸ್ಯರ ಸದಸ್ಯತ್ವವನ್ನು ಅಮಾನತುಗೊಳಿಸುತ್ತಿದ್ದಾರೆ. ಜಿಲ್ಲಾಧ್ಯಕ್ಷರಾಗಿದ್ದ ರವಿಕುಮಾರ್ ಮೃತಪಟ್ಟು ಒಂದು ವರ್ಷವಾದರೂ ಅಧ್ಯಕ್ಷರನ್ನು ನೇಮಕ ಮಾಡುತ್ತಿಲ್ಲ. ಕಾರ್ಯಕಾರಿ ಸಮಿತಿಯ ಸಭೆ ಕರೆದಿಲ್ಲ. ಸದಸ್ಯರ ಅಭಿಪ್ರಾಯ ಸಂಗ್ರಹಿಸದೆ ಎಲ್ಲಾ ಅಧಿಕಾರವನ್ನು ತಮ್ಮ ವಶದಲ್ಲೇ ಇರಿಸಿಕೊಳ್ಳಲು ಬೈಲಾಗೆ ತಿದ್ದುಪಡಿ ತರಲು ಹೊರಟಿದ್ದಾರೆ ಎಂದು ಆರೋಪಿಸಿದರು.

ಡಾ.ಮಹೇಶ್ ಜೋಶಿ ರವರ ನಡೆಯಿಂದ ಜಿಲ್ಲಾಧ್ಯಕ್ಷರು ಮತ್ತು ವಿವಿಧ ಘಟಕಗಳಿಗೆ ಆಗುತ್ತಿರುವ ತೊಂದರೆ, ಸರ್ಕಾರ ಮತ್ತು ಜಿಲ್ಲಾಡಳಿತಕ್ಕೆ ಆಗುತ್ತಿರುವ ಮುಜುಗರ, ಸಮ್ಮೇಳನಕ್ಕೆ ಸಂಬಂಧಿಸಿದಂತೆ ೨.೫೦ ಕೋಟಿ ರು.ಗಳಿಗೆ ಇದುವರೆಗೂ ಲೆಕ್ಕ ಕೊಡದಿರುವುದು ಸೇರಿದಂತೆ ಹಲವಾರು ವಿಷಯಗಳನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಯಿತು.

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ವಿಷಯವಾಗಿ ನಾನು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಅವರು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಕ್ರಮ ವಹಿಸುತ್ತೇವೆ ಎಂದು ಭರವಸೆ ನೀಡಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ