ಕೆ.ಆರ್.ಪೇಟೆ ಮಿನಿ ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಯಿಂದ ಸಾರ್ವಜನಿಕರ ದೂರು ಸ್ವೀಕಾರ

KannadaprabhaNewsNetwork |  
Published : Feb 14, 2025, 12:32 AM IST
13ಕೆಎಂಎನ್ ಡಿ23 | Kannada Prabha

ಸಾರಾಂಶ

ಕೆ.ಆರ್.ಪೇಟೆ ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಡೀಸಿ ಡಾ.ಕುಮಾರ್ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ಹರೀಶ್ ಅವರು ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಟ್ಟಣದ ಮಿನಿ ವಿಧಾನಸೌಧಕ್ಕೆ ಜಿಲ್ಲಾಧಿಕಾರಿ ಡಾ.ಕುಮಾರ ಭೇಟಿ ನೀಡಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ, ದೂರುಗಳನ್ನು ಪರಿಶೀಲಿಸಿ ಕ್ರಮ ಬದ್ಧವಾಗಿ ಪರಿಹರಿಸುವಂತೆ ತಹಸೀಲ್ದಾರ್ ಹಾಗೂ ಸಿಬ್ಬಂದಿಗೆ ಸೂಚನೆ ನೀಡಿದರು.

ತಾಲೂಕು ಕಚೇರಿಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಭೆ ನಡೆಸಿ, ಕಡತ ವಿಲೇವಾರಿ ಕುರಿತು ಮಾಹಿತಿ ಪಡೆದುಕೊಂದ ಜಿಲ್ಲಾಧಿಕಾರಿ ನಂತರ ಕಂದಾಯ ಇಲಾಖೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಕೆಲಸಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.

ಸಾರ್ವಜನಿಕರನ್ನು ಅನಗತ್ಯವಾಗಿ ಅಲೆದಾಡಿಸುವುದು ಕಂಡುಬಂದಲ್ಲಿ ಕ್ರಮ ವಹಿಸುವುದಾಗಿ ಎಚ್ಚರಿಕೆ ನೀಡಿದರು. ತಾಲೂಕಿನ ಅಂಬಿಗರಹಳ್ಳಿ ಹಾಗೂ ಕಟ್ಟಹಳ್ಳಿ ಗ್ರಾಮಗಳಿಗೂ ಭೇಟಿ ನೀಡಿದರು. ಗಡಿ ಗ್ರಾಮಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ಪ್ರತಿಭಟಕರ ಮನವಿ ಆಲಿಕೆ:

ಪಟ್ಟಣದ ತಾಲೂಕು ಕಚೇರಿ ಆವರಣದಲ್ಲಿ ಗ್ರಾಮ ಆಡಳಿತಾಧಿಕಾರಿಗಳು ನಡೆಸುತ್ತಿರುವ ಮುಷ್ಕರ ಸ್ಥಳಕ್ಕೆ ಡೀಸಿ ಡಾ.ಕುಮಾರ್ ಭೇಟಿ ನೀಡಿ ಪ್ರತಿಭಟನಾಕಾರರ ಸಮಸ್ಯೆ ಆಲಿಸಿದರು. ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಡಿ.ಪಿ.ಹರೀಶ್ ಅವರು ಗ್ರಾಮ ಆಡಳಿತಾಧಿಕಾರಿಗಳ ಬೇಡಿಕೆಗಳನ್ನು ಜಿಲ್ಲಾಧಿಕಾರಿಗಳಿಗೆ ಸಂಕ್ಷಿಪ್ತವಾಗಿ ವಿವರಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಡೀಸಿ, ಗ್ರಾಮ ಆಡಳಿತಾಧಿಕಾರಿಗಳ ಸಮಸ್ಯೆಯುಳ್ಳ ಮನವಿ ಪತ್ರವನ್ನು ಸರ್ಕಾರಕ್ಕೆ ಯಥಾವತ್ ವರದಿ ಸಲ್ಲಿಸಲಾಗುವುದು ಎಂದರು.

ಸಂಘದ ತಾಲೂಕು ಘಟಕದ ಅಧ್ಯಕ್ಷ ದಶರಥ ಪೂಜಾರಿ, ತಾಲೂಕು ಘಟಕದ ಗೌರವ ಸಲಹೆಗಾರ ಸುಧಾಕರ್, ಉಪಾಧ್ಯಕ್ಷ ರಾಘವೇಂದ್ರ, ಜಿಲ್ಲಾ ಉಪಾಧ್ಯಕ್ಷ ಕೆ.ಎಸ್.ಸೋಮಾಚಾರಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸುನಿಲ್ ಗಾಣೀಗೇರ್, ಮಹಿಳಾ ಘಟಕದ ಉಪಾಧ್ಯಕ್ಷೆ ಕೆ.ಸಾವಿತ್ರಿ, ಕಾರ್ಯದರ್ಶಿ ಬಿ.ಹೊನ್ನೇಶ್, ಖಜಾಂಚಿ ಕಾವ್ಯಗೌಡ, ನಿರ್ದೇಶಕರಾದ ಮಧು, ಶ್ವೇತ, ಪೂಜಾ, ಕಾಂತೇಶ್, ಅಗ್ರಹಾರಬಾಚಹಳ್ಳಿ ಸುನಿಲ್, ಮಮತಾ ಜಯರಾಮೇಗೌಡ ಸೇರಿದಂತೆ ತಾಲೂಕಿನ ಎಲ್ಲಾ ವೃತ್ತಗಳ ಗ್ರಾಮ ಆಡಳಿತಾಧಿಕಾರಿಗಳು ಇದ್ದರು.

PREV

Recommended Stories

79 ವರ್ಷಗಳ ನಂತ್ರ ಅಥಣಿಗೆ ಸರ್ಕಾರಿ ಪ್ರೌಢಶಾಲೆ!
ಪ್ರಜಾಪ್ರಭುತ್ವ ಉಳಿವಿಗೆ ಹೋರಾಟ ಅನಿವಾರ್ಯ