ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ

KannadaprabhaNewsNetwork |  
Published : Apr 28, 2025, 11:46 PM IST
ಕುದುರೆಮುಖ | Kannada Prabha

ಸಾರಾಂಶ

ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಲಭ್ಯ ನೀರನ್ನು ಅಲ್ಲಿಯೇ ಕುಡಿಯಬಹುದಾಗಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಜಾಗತಿಕ ಮಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಕುದುರೆಮುಖ ವನ್ಯಜೀವಿ ವಿಭಾಗದ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ಬಾಟಲಿ ಮತ್ತಿತರ ಪ್ಲಾಸ್ಟಿಕ್ ವಸ್ತುಗಳ ಬಳಕೆಯನ್ನು ಮೇ 1ರಿಂದ ಜಾರಿಗೆ ಬರುವಂತೆ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಪ್ರವಾಸಿಗರ ಉಪಯೋಗಕ್ಕೆ ರಾಷ್ಟ್ರೀಯ ಉದ್ಯಾನವನದಲ್ಲಿ ಹಾದು ಹೋಗಿರುವ ರಸ್ತೆಗಳಲ್ಲಿ ಇರುವ ಮುಳ್ಳೂರು ತನಿಖಾ ಠಾಣೆ, ಬಸ್ರಿಕಲ್ಲು ತನಿಖಾ ಠಾಣೆ ಹಾಗೂ ತನಿಕೋಡು ತನಿಖಾ ಠಾಣೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದ್ದು, ಪ್ರವಾಸಿಗರು ಇದರ ಸಂಪೂರ್ಣ ಪ್ರಯೋಜನ ಪಡೆದುಕೊಂಡು ಲಭ್ಯ ನೀರನ್ನು ಅಲ್ಲಿಯೇ ಕುಡಿಯಬಹುದಾಗಿದೆ.

ಅದನ್ನು ಬಿಟ್ಟು ಪ್ರವಾಸಿಗರು ಯಾವುದೇ ಪ್ಲಾಸ್ಟಿಕ್ ಬಾಟಲಿ ತೆಗೆದುಕೊಂಡು ಹೋಗುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ವಾಹನದಲ್ಲಿ ಇರುವ ಯಾವುದೇ ಪ್ಲಾಸ್ಟಿಕ್ ಬಾಟಲಿಗಳನ್ನು ತನಿಖಾ ಠಾಣೆಯಲ್ಲಿ ನಿರ್ಮಿಸಲಾಗಿರುವ ಪ್ಯಾಸ್ಟಿಕ್ ತ್ಯಾಜ್ಯ ಸಂಗ್ರಹಣಾ ಘಟಕದಲ್ಲಿ ಹಾಕಿ ಪ್ರಯಾಣವನ್ನು ಮುಂದುವರಿಸಬಹುದಾಗಿದೆ ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ