ಕನ್ನಡಪ್ರಭ ವಾರ್ತೆ ಚಾಮರಾಜನಗರ
ಬೆಂಗಳೂರಿನ ವಿಕಾಸಸೌಧದ ಮೂರನೇ ಮಹಡಿಯ ಸಭಾಂಗಣದಲ್ಲಿ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಲೆ ಮಹದೇಶ್ವರಸ್ವಾಮಿ ದೇವಸ್ಥಾನದ ಮಾಸ್ಟರ್ ಪ್ಲಾನ್ ಆವರಣದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ಕೈಗೊಂಡಿರುವ ಆಭಿವೃದ್ಧಿ ಕಾಮಗಾರಿಗಳ ವಿವರ ಪಡೆದ ಜಿಲ್ಲಾ ಉಸ್ತುವಾರಿ ಸಚಿವರು 4,585 ಲಕ್ಷ ರು. ವೆಚ್ಚದಲ್ಲಿ ಮಹದೇಶ್ವರ ದೇವಸ್ಥಾನದ ಹಿಂಭಾಗದಲ್ಲಿ ಕೈಗೊಂಡಿರುವ ಸರತಿ ಸಾಲಿನ ಸಂಕಿರ್ಣ ನಿರ್ಮಾಣದ ಬಾಕಿ ಕೆಲಸವನ್ನು ಬೇಗನೆ ಮುಗಿಸಬೇಕು. ಕಟ್ಟಡಕ್ಕೆ ಬಣ್ಣ ಬಳಿಯುವ, ಕಾರಿಡಾರ್‌ಗಳಿಗೆ ಗ್ರಾನೈಟ್ ಫ್ಲೋರಿಂಗ್ ಇತರೆ ಬಾಕಿ ಕೆಲಸಗಳನ್ನು ವಿಳಂಬ ಮಾಡದೇ ಪೂರ್ಣಗೊಳಿಸಬೇಕು ಎಂದು ತಿಳಿಸಿದರು.ಕ್ಷೇತ್ರದ ಆವರಣದ ವ್ಯಾಪ್ತಿಯಲ್ಲಿ 935 ಲಕ್ಷ ರು. ವೆಚ್ಚದಲ್ಲಿ 6 ವಿವಿಧ ಕೂಡು ರಸ್ತೆಗಳನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಶೀಘ್ರವೇ ಪೂರ್ಣ ಮಾಡಬೇಕು. ದಾಸೋಹ ಭವನದ ಎದುರು ಭಾಗದಲ್ಲಿ ನಿರ್ಮಿಸಲಾಗುತ್ತಿರುವ ಶೌಚಾಲಯ ಹಾಗೂ ಸ್ನಾನ ಗೃಹ ಕಾಮಗಾರಿಯ ಪ್ರಗತಿಯು ವೇಗದಿಂದ ಆಗಬೇಕು. ಬಸ್ ನಿಲ್ದಾಣದ ಹತ್ತಿರದಲ್ಲಿ ಕೈಗೆತ್ತಿಕೊಂಡಿರುವ ಸ್ನಾನಗೃಹ, ಶೌಚಾಲಯ ನಿರ್ಮಾಣ ಕಾಮಗಾರಿಯನ್ನೂ ಸಹ ತ್ವರಿತವಾಗಿ ಮುಗಿಸಬೇಕು ಎಂದು ಸಚಿವರು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಡಾ.ಎಂ.ವಿ. ವೆಂಕಟೇಶ್ ಅವರು ಮಾತನಾಡಿ, ಉದ್ದೇಶಿತ ದಾಸೋಹ ಭವನದಲ್ಲಿ ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡುವ ಘಟಕವೂ ಇರಬೇಕು. ಅಡುಗೆಗೆ ಬಳಸಿದ ನಂತರ ಉಳಿಯುವ ತ್ಯಾಜ್ಯಗಳನ್ನು ಸೂಕ್ತವಾಗಿ ವಿಲೇವಾರಿ ಮಾಡಬೇಕು. ಜೈವಿಕ ಘಟಕವನ್ನು ನಿರ್ಮಾಣದಲ್ಲಿ ಸೇರ್ಪಡೆ ಮಾಡಿಕೊಳ್ಳಬೇಕು. ಈಗಾಗಲೇ ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ನಿರ್ವಹಿಸಬೇಕು ಎಂದು ಸೂಚಿಸಿದರು.ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಮಾತನಾಡಿ, ಕ್ಷೇತ್ರದಲ್ಲಿ ನಿರಾಶ್ರಿತರು ಸಹ ಇದ್ದಾರೆ. ಇವರಿಗೆ ಪುನರ್ವಸತಿ ಕೇಂದ್ರ ತೆರೆಯುವ ಅವಶ್ಯಕತೆ ಇದೆ. ಸಮಾಜ ಕಲ್ಯಾಣ ಇಲಾಖೆಯ ಅನುದಾನದ ನೆರವೂ ಸಹ ಪಡೆದುಕೊಂಡು ಪುನರ್ವಸತಿ ಕೇಂದ್ರವನ್ನು ನಿರ್ಮಾಣ ಮಾಡಬೇಕಿದೆ. ಉದ್ದೇಶಿತ ಸುಸಜ್ಜಿತ ದಾಸೋಹ ಭವನಕ್ಕೆ ಪ್ರತ್ಯೇಕ ವಿದ್ಯುತ್ ಹಾಗೂ ಜನರೇಟರ್ ವ್ಯವಸ್ಥೆ ಸಹ ಇರಬೇಕಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯದರ್ಶಿ ಸತ್ಯನಾರಾಯಣ, ಮಲೈಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಇಬ್ರಾಹಿಂ ಮೈಗೂರು, ಚಾಮರಾಜನಗರ ವಿಭಾಗೀಯ ನಿಯಂತ್ರಾಣಾಧಿಕಾರಿ ಅಶೋಕ್ ಕುಮಾರ್, ಲೋಕೋಪಯೋಗಿ ಇಲಾಖೆಯ ಅಧೀಕ್ಷಕ ಎಂಜಿನಿಯರ್ ಕೇಶವಪ್ರಸಾದ್ ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
12ಸಿಎಚ್‌ಎನ್51
-------------