ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಕಾಮಗಾರಿಗಳ ಗುಣಮಟ್ಟ ಮತ್ತು ಕಾಲಮಿತಿಯನ್ನು ಖಚಿತಪಡಿಸಲು ಅಧಿಕಾರಿಗಳು ಮತ್ತು ಟೆಂಡರ್‌ದಾರರ ನಡುವೆ ಸಮನ್ವಯತೆ ಕಾಯ್ದುಕೊಳ್ಳುವ ಜೊತೆಗೆ ಮಹಾತ್ಮ ಗಾಂಧಿ ನಗರೋತ್ಥಾನ ಯೋಜನೆಗಳ ಟೆಂಡರ್‌ಗಳಿಗೆ ಸಂಬಂಧಿಸಿದ ಗೊಂದಲಗಳನ್ನು ನಿವಾರಿಸಬೇಕು ಎಂದು ಸೂಚನೆ ನೀಡಿದರು.
ವಿದ್ಯುತ್ ನಿಧಿಯನ್ನು ಸಮರ್ಥವಾಗಿ ಬಳಸಿಕೊಂಡು, ನಗರದಾದ್ಯಂತ ಹಾಳಾಗಿರುವ ಬೀದಿ ದೀಪಗಳನ್ನು ತ್ವರಿತವಾಗಿ ಸರಿಪಡಿಸಲು ನಿರ್ದೇಶಿಸಲಾಯಿತು. ಪ್ರತಿದಿನ ಸಂಜೆ 6 ಗಂಟೆಯ ನಂತರ ವಿದ್ಯುತ್ ಅಧಿಕಾರಿಗಳು ಕಡ್ಡಾಯವಾಗಿ ಸ್ವತಃ ಪರಿಶೀಲನೆ ನಡೆಸಿ, ವರದಿ ಸಲ್ಲಿಸಬೇಕು ಎಂದರು.ಸಾರ್ವಜನಿಕರಿಗೆ ಮಾರಣಾಂತಿಕವಾಗಿ ಪರಿಣಮಿಸಿರುವ ನಗರದ ರಸ್ತೆ ಗುಂಡಿಗಳನ್ನು ಮುಚ್ಚಲು ಆದ್ಯತೆ ನೀಡಬೇಕು. ಡಿಸೆಂಬರ್ ತಿಂಗಳಿನಲ್ಲಿ ‘ಶೂನ್ಯ ಗುಂಡಿ’ ಅಭಿಯಾನದ ಅಡಿಯಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಬೇಕು. ಪ್ರತೀ ಪಾಲಿಕೆ ಎಂಜಿನಿಯರ್ ತಮ್ಮ ವ್ಯಾಪ್ತಿಯ ರಸ್ತೆಗಳಲ್ಲಿನ ಗುಂಡಿಗಳ ಬಗ್ಗೆ ಕಡ್ಡಾಯವಾಗಿ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.
ನಗರದ ಸೌಂದರ್ಯ ಮತ್ತು ಸ್ಮಾರಕಗಳ ರಕ್ಷಣೆ ಮಹಾತ್ಮ ಗಾಂಧಿ ಪಾರ್ಕ್: ನಗರದ ಹೆಮ್ಮೆಯ ಮಹಾತ್ಮ ಗಾಂಧಿ ಪಾರ್ಕ್‌ನ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಕುರಿತು ವರದಿ ಸಲ್ಲಿಸಲು ಸೂಚಿಸಲಾಯಿತು. ವಿಶೇಷವಾಗಿ, ಪಾರ್ಕ್‌ನಲ್ಲಿರುವ ರೈಲು ಕಾರ್ಯಾಚರಣೆಯ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಸೇರಿದಂತೆ ಪಾಲಿಕೆ ಅಧಿಕಾರಿಗಳಿದ್ದರು.