ಜೆಜೆಎಂ ಕಾಮಗಾರಿ ಪೂರ್ಣಗೊಳಿಸಿ ಇಲ್ಲವೇ ಕ್ರಮ ಎದುರಿಸಿ

KannadaprabhaNewsNetwork |  
Published : Oct 18, 2026, 02:30 AM IST
೧೭ಬಿಹೆಚ್‌ಆರ್ ೩: ಬಾಳೆಹೊನ್ನೂರು ಸಮೀಪದ ಸಂಗಮೇಶ್ವರಪೇಟೆಯಲ್ಲಿ ಆಯೋಜಿಸಿದ್ದ ಖಾಂಡ್ಯ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಎ.ಎಸ್.ರೇಷ್ಮಾ, ವಿಜಯಕುಮಾರ್, ಮೋಹನ್‌ಕುಮಾರ್, ಚಂದ್ರೇಗೌಡ ಇದ್ದರು. | Kannada Prabha

ಸಾರಾಂಶ

ಬಾಳೆಹೊನ್ನೂರುಕೇಂದ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಕಾಮಗಾರಿಯನ್ನು ಅಧಿಕಾರಿಗಳು, ಗುತ್ತಿಗೆ ದಾರರು ಸಮರ್ಪಕವಾಗಿ ಪೂರ್ಣಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಬಾಳೆಹೊನ್ನೂರು

ಕೇಂದ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಜಲಜೀವನ್ ಮಿಷನ್ ಕಾಮಗಾರಿಯನ್ನು ಅಧಿಕಾರಿಗಳು, ಗುತ್ತಿಗೆ ದಾರರು ಸಮರ್ಪಕವಾಗಿ ಪೂರ್ಣಗೊಳಿಸದಿದ್ದಲ್ಲಿ ಶಿಸ್ತು ಕ್ರಮ ಎದುರಿಸಬೇಕಾಗುತ್ತದೆ ಎಂದು ಶಾಸಕ ಟಿ.ಡಿ.ರಾಜೇಗೌಡ ಎಚ್ಚರಿಸಿದರು.

ಸಂಗಮೇಶ್ವರಪೇಟೆ ಶ್ರೀ ವಿದ್ಯಾಗಣಪತಿ ಸಮುದಾಯ ಭವನದಲ್ಲಿ ಶನಿವಾರ ಆಯೋಜಿಸಿದ್ದ ಖಾಂಡ್ಯ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗಗಳಲ್ಲಿ ಹಲವು ಕಡೆಗಳಲ್ಲಿ ಜೆಜೆಎಂ ಕಾಮಗಾರಿಗಳನ್ನು ಆರಂಭಿಸಿ ಅರ್ಧಂಬರ್ಧ ಮಾಡಿದೆ. ಈ ಬಗ್ಗೆ ಸಾರ್ವಜನಿಕರಿಂದ ಹಲವು ದೂರು ಬಂದಿದ್ದು, ಹಲವಾರು ಬಾರಿ ಅಧಿಕಾರಿಗಳು, ಗುತ್ತಿಗೆದಾರರಿಗೆ ಎಚ್ಚರಿಸಿದ್ದರೂ ಸಮರ್ಪಕ ಕಾಮಗಾರಿ ನಡೆಯುತ್ತಿಲ್ಲ.

ಕಡೆಯದಾಗಿ ಗ್ರಾಮೀಣ ಕುಡಿಯುವ ನೀರು ಪೂರೈಕೆ ಇಲಾಖೆಗೆ ಎಚ್ಚರಿಸುತ್ತಿದ್ದು, ಮುಂದಿನ ಪ್ರಜಾ ಸೇವೆ ಆಂದೋಲನ ದರೊಳಗೆ ಕಾಮಗಾರಿ ಪೂರ್ಣಗೊಳಸಬೇಕು. ಇಲ್ಲದಿದ್ದಲ್ಲಿ ಸಂಬಂಧಿತ ಅಧಿಕಾರಿಗಳನ್ನು ಸೇವೆಯಿಂದ ಅಮಾನತ್ತು ಗೊಳಿಸಲು, ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಎಚ್ಚರಿಸಿದರು.

ಭೂ ಮಾಪನ ಇಲಾಖೆಯಲ್ಲಿ ಭ್ರಷ್ಟಾಚಾರ ಹೆಚ್ಚಾದ ಕುರಿತು ಹಲವು ದೂರು ಬರುತ್ತಿವೆ. ಅಧಿಕಾರಿಗಳು ಕೂಡಲೇ ಎಚ್ಚೆತ್ತುಕೊಂಡು ತಮ್ಮ ನಡವಳಿಕೆ ಸರಿಪಡಿಸಿಕೊಂಡರೆ ಸಾರ್ವಜನಿಕ ಸೇವೆಗೆ ಅವಕಾಶ ನೀಡಲಾಗುವುದು. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು. ಇಲಾಖೆ ಅಧಿಕಾರಿಗಳು ಗ್ರಾಮೀಣ ಭಾಗಗಳಲ್ಲಿ ನಿಗದಿತ ಸಮಯಕ್ಕೆ ಸರ್ವೆಗೆ ಬರುತ್ತಿಲ್ಲ ಎಂಬ ದೂರಿದೆ. ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು ಇದನ್ನುಸರಿಪಡಿಸಿಕೊಳ್ಳದಿದ್ದಲ್ಲಿ ಅಮಾನತ್ತಿಗೆ ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಕಿಡಿಕಾರಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜನರ ಬಳಿಗೆ ಸರ್ಕಾರ ಕರೆತರುವ ವ್ಯವಸ್ಥೆಯನ್ನು ಪ್ರಜಾಸೇವೆ ಆಂದೋಲನದ ಮೂಲಕ ಮಾಡಿದ್ದು, ಇದರಿಂದ ಎಲ್ಲಾ ಇಲಾಖೆ ಅಧಿಕಾರಿಗಳು ಜನರ ಬಳಿಗೆ ಬಂದು ಸಮಸ್ಯೆ ಆಲಿಸಲಿದ್ದಾರೆ. ಈ ಆಂದೋಲನದ ಮೂಲಕ ಸಾರ್ವಜನಿಕರಿಗೆ ಪರಿಹಾರಗಳು ದೊರೆಯಲಿದೆ. ಈಗಾಗಲೇ ಚಿಕ್ಕಮಗಳೂರು ತಾಲೂಕಿನ ಎಲ್ಲಾ ಇಲಾಖೆ ಅಧಿಕಾರಿಗಳು ಪ್ರಜಾಸೇವೆ ಆಂದೋಲನದಲ್ಲಿ ಹಾಜರಿದ್ದು ಸಮಸ್ಯೆಗಳ ಕುರಿತು ಮನವಿ ಸ್ವೀಕರಿಸಿದ್ದಾರೆ. ಅವುಗಳಿಗೆ ಸೂಕ್ತ ಪರಿಹಾರ ಒದಗಿಸಲಾಗುವುದು ಎಂದು ತಿಳಿಸಿದರು.

ಚಿಕ್ಕಮಗಳೂರು ತಹಸೀಲ್ದಾರ್ ಎ.ಎಸ್.ರೇಷ್ಮಾ, ತಾಪಂ ಇಓ ವಿಜಯಕುಮಾರ್, ಎಸಿಎಫ್ ಮೋಹನ್ ಕುಮಾರ್, ಪಿಎಸಿಎಸ್ ಅಧ್ಯಕ್ಷ ಕೆ.ಎಲ್.ಚಂದ್ರೇಗೌಡ, ಪಿಡಿಓಗಳಾದ ಲಕ್ಷ್ಮಣ್, ಸಹದೇವ್, ತಬರೀಜ್ ಆಹ್ಮದ್, ಪದ್ದಣ್ಣ ಗಾವಡೆ ಸೇರಿದಂತೆ ತಾಲೂಕು ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಮುಖಂಡರು ಮತ್ತಿತರರು ಹಾಜರಿದ್ದರು.೧೭ಬಿಹೆಚ್‌ಆರ್ ೩:

ಬಾಳೆಹೊನ್ನೂರು ಸಮೀಪದ ಸಂಗಮೇಶ್ವರಪೇಟೆಯಲ್ಲಿ ಆಯೋಜಿಸಿದ್ದ ಖಾಂಡ್ಯ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನವನ್ನು ಶಾಸಕ ಟಿ.ಡಿ.ರಾಜೇಗೌಡ ಉದ್ಘಾಟಿಸಿದರು. ಎ.ಎಸ್.ರೇಷ್ಮಾ, ವಿಜಯಕುಮಾರ್, ಮೋಹನ್‌ಕುಮಾರ್, ಚಂದ್ರೇಗೌಡ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಮೆರಿಕದ ಶಿಕ್ಷಣವನ್ನು ಮಕ್ಕಳಿಗೆ ಪರಿಚಯಿಸಲು ಯೋಜನೆ ರೂಪಿಸಿದ್ದೇನೆ: ಸಿ.ಎಸ್.ಪುಟ್ಟರಾಜು
ಮದ್ದೂರು ತಾಪಂ ಕಚೇರಿ ನೂತನ ಕಟ್ಟಡ ಹೈಟೆಕ್ ಮಾದರಿ ನಿರ್ಮಾಣ: ಕೆ.ಎಂ.ಉದಯ್