ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಿ: ಶಾಸಕ ಮಂಜುನಾಥ

KannadaprabhaNewsNetwork |  
Published : Jan 14, 2024, 01:31 AM IST
ನಿಗದಿತ ಸಮಯದಲ್ಲಿ ಗುಣಮಟ್ಟದಿಂದ  ಕಾಮಗಾರಿ ಪೂರ್ಣಗೊಳಿಸುವಂತೆ ಶಾಸಕಮಂಜುನಾಥ್‌ ಸೂಚನೆ | Kannada Prabha

ಸಾರಾಂಶ

ಹನೂರುಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು .

ಶಾಸಕ ಮಂಜುನಾಥ್‌ ಸೂಚನೆ । ಮಲೆ ಮಹದೇಶ್ವರ ಬೆಟ್ಟ ಎಲ್ಲೇ ಮಾಳ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ

ಕನ್ನಡಪ್ರಭ ವಾರ್ತೆ ಹನೂರುಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಸೂಚನೆ ನೀಡಿದರು .ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಎಲ್ಲೇ ಮಾಳ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಹಾಗೂ ಕಿರು ಸೇತುವೆಗಳ ಅಭಿವೃದ್ಧಿ ಕಾಮಗಾರಿಯನ್ನು ಅಧಿಕಾರಿಗಳ ಜೊತೆ ತೆರಳಿ ಪರಿಶೀಲನೆ ನಡೆಸಿ ನಂತರ ಅವರು ಮಾತನಾಡಿದರು.ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲೇಮಾಳ ರಸ್ತೆಯಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿಯು ಗುತ್ತಿಗೆದಾರರು ಗುಣಮಟ್ಟದಿಂದ ಅಭಿವೃದ್ಧಿ ಪಡಿಸಬೇಕಾಗಿದೆ ಜೊತೆಗೆ ಈ ಮಾರ್ಗದಲ್ಲಿ ನಡೆಯುತ್ತಿರುವ ಕಿರು ಸೇತುವೆಗಳು ಸಹ ಕಾಮಗಾರಿಗಳು ಅಪೂರ್ಣವಾಗಿ ವಿಳಂಬವಾಗುತ್ತಿದೆ. ಸಂಬಂಧ ಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಈ ಮಾರ್ಗದಲ್ಲಿ ಸಂಚರಿಸುವ ಮಲೆ ಮಹದೇಶ್ವರ ಕ್ಷೇತ್ರಕ್ಕೆ ತೆರಳುವ ಭಕ್ತರಿಗೆ ರಸ್ತೆಯಲ್ಲಿ ಯಾವುದೇ ತೊಂದರೆಯಾಗದಂತೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು ಗರಿಕೆ ಕಿಂಡಿ ರಸ್ತೆ ಅಭಿವೃದ್ಧಿಗೆ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಟೆಂಡರ್ ಕರೆದು ಬಂದಿರುವ ಅನುದಾನವನ್ನು ಸದ್ಬಳಕೆ ಮಾಡಿಕೊಂಡು ಪ್ರಕ್ರಿಯೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.ಚರಂಡಿ ಕಳಪೆ ಕಾಮಗಾರಿ:

ತಾಲೂಕಿನ ಕೌದಳ್ಳಿಯಲ್ಲಿ ನಡೆಯುತ್ತಿರುವ ಚರಂಡಿಯ ಅಭಿವೃದ್ಧಿ ಗುಣಮಟ್ಟದಿಂದ ಕೂಡಿಲ್ಲ ಎಂದು ಎಚ್ಚರಿಕೆ ನೀಡಿದರು. ಅರಣ್ಯ ಅಧಿಕಾರಿಗಳು ರಸ್ತೆ ಅಭಿವೃದ್ಧಿಗೆ ಸಹಕಾರ ನೀಡಿ:

ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುವ ಸಂದರ್ಭಗಳಲ್ಲಿ ಅರಣ್ಯ ಪ್ರದೇಶದ ಮಾರ್ಗದಲ್ಲಿ ಕಾಮಗಾರಿಗಳಿಗೆ ಅಡಚಣೆ ಉಂಟಾಗುತ್ತಿತ್ತು ಅರಣ್ಯ ಅಧಿಕಾರಿಗಳು ಅಭಿವೃದ್ಧಿಗೆ ಸಹಕಾರ ನೀಡುವಂತೆ ಹಾಗೂ ಗರಿಕೆ ಕಿಂಡಿ ಮಾರ್ಗ ರಸ್ತೆ ಅಭಿವೃದ್ಧಿಗೂ ಸಹ ಅರಣ್ಯಾಧಿಕಾರಿಗಳು ಸಹಕಾರ ನೀಡುವಂತೆ ಪರಿಶೀಲನೆ ಸ್ಥಳದಲ್ಲಿ ಜಿಲ್ಲಾಧಿಕಾರಿಗಳ ಮುಂದೆ ಡಿಎಫ್ ಒ ಸಂತೋಷ್ ಕುಮಾರ್‌ಗೆ ಸೂಚನೆ ನೀಡಿದರು.

ಮಲೆ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಹೋಗುವ ಈ ಮಾರ್ಗದಲ್ಲಿ ನಡೆಯುತ್ತಿರುವ ಕಾಮಗಾರಿಗಳು ಉತ್ತಮ ಗುಣಮಟ್ಟ ಕೂಡಿರುವಂತೆ ಗುತ್ತಿಗೆದಾರರು ಕ್ರಮ ವಹಿಸಬೇಕಾಗಿದೆ ಎಂದು ತಿಳಿಸಿದರು. ಶಿಲ್ಪಾನಾಗ್‌ ಜಿಲ್ಲಾಧಿಕಾರಿ ಪರಿಶೀಲನೆ ವೇಳೆಯಲ್ಲಿ ಡಿಎಫ್‌ಒ ಸಂತೋಷ್ ಕುಮಾರ್ , ಲೋಕೋಪಯೋಗಿ ಕಾರ್ಯಪಾಲಕ ಎಂಜಿನಿಯರ್ ಮಹೇಶ್ ಹಾಗೂ ಚಿನ್ನಣ್ಣ , ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಂದಗಿ ಶಾಂತವೀರರ ಸಂದೇಶ ಸಾರ್ವಕಾಲಿಕ: ರೇವಣಸಿದ್ದಯ್ಯ ಹಿರೇಮಠ
ಒಳ ಮೀಸಲಾತಿಯಿಲ್ಲದೇ ಹುದ್ದೆ ಭರ್ತಿ ಮಾಡಿದರೆ ಉಗ್ರ ಹೋರಾಟ