ಎಸ್ಸಿಎಸ್‌ಪಿ, ಟಿಎಸ್‌ಪಿ ಯೋಜನೆ ಭೌತಿಕ ಗುರಿ ಪೂರ್ಣಗೊಳಿಸಿ: ಡಿಸಿ

KannadaprabhaNewsNetwork |  
Published : Feb 21, 2025, 11:47 PM IST
21ಕೆಪಿಎಲ್29 ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಇಲಾಖೆ ಪ್ರಗತಿ ಪರಿಶೀಲನಾ ಸಭೆ | Kannada Prabha

ಸಾರಾಂಶ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರವು ಅನುದಾನ ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಅದರಂತೆ ಪ್ರಸಕ್ತ ಸಾಲಿನ ತಮ್ಮ ಕಚೇರಿಗಳಿಗೆ ನಿಗದಿಪಡಿಸಿರುವ ಭೌತಿಕ ಗುರಿಯನ್ವಯ ಪ್ರಗತಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು.

ಕೊಪ್ಪಳ:

ಎಸ್ಸಿಎಸ್ಪಿ-ಟಿಎಸ್‌ಪಿ ಯೋಜನೆಯಡಿ ಪ್ರಸಕ್ತ ಸಾಲಿನ ಜಿಲ್ಲೆಯ ಭೌತಿಕ ಗುರಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಸಮಾಜ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಕರ್ನಾಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ ಅಧಿನಿಯಮ 2013ರನ್ವಯ ಅನುಸೂಚಿತ ಜಾತಿಗಳು ಉಪಯೋಜನೆ, ಬುಡಕಟ್ಟು ಉಪಯೋಜನೆ ಹಾಗೂ ಪರಿಶಿಷ್ಟ ಜಾತಿ, ವರ್ಗದ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆಯ ಜಿಲ್ಲಾ ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಎಲ್ಲ ಇಲಾಖೆ, ನಿಗಮಗಳಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ ಸರ್ಕಾರವು ಅನುದಾನ ಬಿಡುಗಡೆ ಮಾಡಿ, ಗುರಿ ನಿಗದಿಪಡಿಸಿದೆ. ಅದರಂತೆ ಪ್ರಸಕ್ತ ಸಾಲಿನ ತಮ್ಮ ಕಚೇರಿಗಳಿಗೆ ನಿಗದಿಪಡಿಸಿರುವ ಭೌತಿಕ ಗುರಿಯನ್ವಯ ಪ್ರಗತಿಯನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ನಿಗದಿತ ಗುರಿಗಿಂತ ಕಡಿಮೆ ಪ್ರಗತಿ ಅಥವಾ ಶೇ. 100ರಷ್ಟು ಪ್ರಗತಿ ಸಾಧನೆ ಅಸಾಧ್ಯವಿದ್ದರೆ, ಅಂತಹ ಸಂಬಂಧಪಟ್ಟ ಇಲಾಖೆಗಳು ಮಾಹಿತಿ ನೀಡಬೇಕು ಎಂದು ಸೂಚಿಸಿದರು.

ಕೃಷಿ, ತೋಟಗಾರಿಕೆ, ಪಶುಪಾಲನೆ, ರೇಷ್ಮೆ, ಪ್ರವಾಸೋದ್ಯಮ ಹಾಗೂ ವಿವಿಧ ಇಲಾಖೆಗಳು ನಿಯಮಗಳ ಮೂಲಕ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಫಲಾನುಭವಿಗಳಿಗೆ ನೀಡಲಾಗುವ ಸರ್ಕಾರದ ಸೌಲಭ್ಯ ನಿಗದಿತ ಅವಧಿಯೊಳಗೆ ನೀಡಬೇಕು. ಸರ್ಕಾರ ನೀಡುವ ಅನುದಾನ ಬಿಡುಗಡೆಯಾದ ದಿನಾಂಕ, ಫಲಾನುಭವಿಗಳಿಗೆ ತಲುಪಿಸಿದ ದಿನಾಂಕ, ಖರ್ಚಾದ ಮೊತ್ತ, ಬಾಕಿ ಉಳಿದಿರುವ ಅನುದಾನವನ್ನು ಕಾರಣ ಸಹಿತ ಮಾಹಿತಿ ನೀಡಿ ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ವಿವಿಧ ಅನುಷ್ಠಾನ ಏಜೆನ್ಸಿಗಳ ಮೂಲಕ ನಿರ್ಮಿಸುತ್ತಿರುವ ಕಟ್ಟಡ, ಭವನಗಳ ಕುರಿತು ಸಹ ಸೂಕ್ತ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಅಜ್ಜಪ್ಪ ಸೊಗಲದ ಮಾತನಾಡಿ, ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಪ್ರತಿ ತಿಂಗಳು ಇಲಾಖಾವಾರು ಪ್ರಗತಿ ಸಾಧಿಸಿದ ವರದಿಯನ್ನು ನಿಗದಿತ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಭರ್ತಿಮಾಡಿ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪಿ.ವೈ. ಶೆಟ್ಟಪ್ಪನವರ, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಶೈಲ್ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ಮರಬನಳ್ಳಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಇಒ ಮತ್ತು ಸಮಾಜ ಕಲ್ಯಾಣ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೌಡ ಸಾರಸ್ವತ ಬ್ರಾಹ್ಮಣ ಸೇವಾ ಸಂಘದ ವಾಗ್ದೇವಿ ಟವರ್ಸ್‌ಗೆ ಭೂಮಿ ಪೂಜೆ
ಆತ್ಮನಿರ್ಭರ ಭಾರತಕ್ಕೆ ಸ್ವದೇಶಿ ವಸ್ತು ಬಳಕೆ ಅಗತ್ಯ: ನಾರಾಯಣಸಾ ಭಾಂಡಗೆ