ಕನ್ನಡಪ್ರಭ ವಾರ್ತೆ ಶಿವಮೊಗ್ಗ
ತಾಲೂಕಿನ ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು.ಈ ಸಂದರ್ಭ ಕಾಮಗಾರಿ ಪೂರ್ಣಗೊಳಿಸಲು ಬೇಕಾದ ಅನುದಾವನ್ನು ಶೀಘ್ರದಲ್ಲೇ ಮಂಜೂರು ಮಾಡಲಾಗುವುದು ಭರವಸೆ ನೀಡಿದ ಅವರು, ಬಾರೇಹಳ್ಳ ಸೇತುವೆ ನಿರ್ಮಾಣದ ಕೊನೆ ಹಂತದ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದರು.
ಇದಕ್ಕೂ ಮೊದಲು ಗ್ರಾಮದ ಶ್ರೀ ಉದ್ಭವ ಬಸವೇಶ್ವರ ದೇವಸ್ಥಾನಕ್ಕೆ ಭೇಟಿ ಪೂಜೆ ಸಲ್ಲಿಸಿದರು. ದೇವಸ್ಥಾನ ಸೇವಾ ಸಮಿತಿ ವತಿಯಿಂದ ಸಚಿವ ಮಧುಬಂಗಾರಪ್ಪ ಹಾಗೂ ಶಾಸಕಿ ಶಾರದಾ ಪೂರ್‍ಯನಾಯ್ಕ್ ಅವರಿಗೆ ಸನ್ಮಾನಿಸಲಾಯಿತು.ದೇವಸ್ಥಾನ ಆಡಳಿತ ಮಂಡಳಿ ವತಿಯಿಂದ ಕಲ್ಯಾಣ ಮಂಟಪ ಮಂಜೂರು ಮಾಡುವಂತೆ ಹಾಗೂ ಅಗತ್ಯ ಅನುದಾನವನ್ನು ಬಿಡುಗಡೆ ಮಾಡುವಂತೆ ಮನವಿ ಮಾಡಲಾಯಿತು. ಇದಕ್ಕೆ ಸಕಾರತ್ಮಾಕವಾಗಿ ಪ್ರತಿಕ್ರಿಯಿಸಿದ ಸಚಿವರು, ತಂದೆ ಬಂಗಾರಪ್ಪ ಅವರಿಗೆ ಪುರದಾಳು ಗ್ರಾಮದ ಬಗ್ಗೆ ವಿಶೇಷ ಅಭಿಮಾನವಿತ್ತು. ರಸ್ತೆ, ತುಂಗಾ ಏತನೀರಾವರಿ, ಗೋದಾಮು ನಿರ್ಮಾಣಕ್ಕೆ ಅನುದಾನ ನೀಡಿದ್ದಾರೆ. ನಾನು ಕೂಡ ಕಲ್ಯಾಣ ಮಂಟಪವನ್ನು ಮಂಜೂರು ಮಾಡಿ ಅಗತ್ಯ ಅನುದಾನ ಒದಗಿಸುತ್ತೇನೆ ಎಂದು ಹೇಳಿದರು.
ಪುರದಾಳು ಗ್ರಾಪಂ ವತಿಯಿಂದ ಸಚಿವರಿಗೆ ಸನ್ಮಾನಿಸಲಾಯಿತು. ಕಡ್ಲೆಒಡ್ಡು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಪುರದಾಳು ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಭೇಟಿ ನೀಡಿದರು. ಶಾಸಕಿ ಶಾರದಾ ಪೂರ್‍ಯನಾಯ್ಕ್, ಕಾಂಗ್ರೆಸ್ ಮುಖಂಡರಾದ ಆರ್.ಪ್ರಸನ್ನಕುಮಾರ್, ಕಲಗೋಡು ರತ್ನಾಕರ್, ಜಿ.ಡಿ ಮಂಜುನಾಥ್ ಮತ್ತಿತರರು ಇದ್ದರು.- - - -9ಎಸ್‌ಎಂಜಿಕೆಪಿ06:
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಬಾರೇಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು.