ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಗೂಡೇಹೊಹಳ್ಳಿ ಬಳಿ ಹೇಮಾವತಿ ನದಿಯಿಂದ ನೀರೆತ್ತುವ ಏತ ನೀರಾವರಿ ಯೋಜನೆಯಿಂದ ಕೆ.ಆರ್.ಪೇಟೆ, ನಾಗಮಂಗಲ ಮತ್ತು ಚನ್ನರಾಯಪಟ್ಟಣ ತಾಲೂಕುಗಳಿಗೆ ಸೇರಿದಂತೆ ಬರಪೀಡಿತ ಪ್ರದೇಶದ 69 ಕೆರೆ-ಕಟ್ಟೆಗಳನ್ನು ತುಂಬಿಸಿ ಜನ ಜಾನುವಾರುಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವುದಾಗಿದೆ ಎಂದರು.
ಏತ ನೀರಾವರಿ ಮೂಲಕ ಕುಡಿಯವ ನೀರನ್ನು ಒದಗಿಸುವುದಕ್ಕೆ ಅನುಮೋದನೆಗೊಂಡು ಅಪೂರ್ಣವಾಗಿರುವ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವ ಜವಾಬ್ದಾರಿ ರಾಜ್ಯ ಜಲಸಂಪನ್ಮೂಲ ಇಲಾಖೆ ಮೇಲಿದೆ. ಮಳೆ ಅಭಾವದಿಂದ ಅಂತರ್ಜಲ ಮಟ್ಟವು ಕುಸಿದಿದೆ. ಸುಮಾರು 1500 ಅಡಿ ಆಳವಾಗಿ ಬೋರ್‌ವೆಲ್ ಕೊರೆಸಿದರೂ ನೀರು ಸಿಗುವುದು ದುಸ್ಥರವಾಗಿರುತ್ತದೆ ಎಂದರು.ಕೆಲವು ಹಳ್ಳಿಗಳ ಬೋರ್‌ವೆಲ್‌ಗಳ ನೀರಿನಲ್ಲಿ ನೈಟ್ರೆಟ್ ಅಂಶ ಪತ್ತೆಯಾಗಿದೆ. ಈ ನೀರು ಕುಡಿಯಲು ಯೋಗ್ಯವಾಗಿಲ್ಲ. ಇದರಿಂದಾಗಿ ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹೇಮಾವತಿ (ಗೂಡೆಹೊಸಹಳ್ಳಿ ಹತ್ತಿರ) ನದಿಯಿಂದ ಏತ ನೀರಾವರಿ ಮುಖಾಂತರ 69 ಟ್ಯಾಂಕ್‌ಗಳು ಮತ್ತು 23 ಕಟ್ಟೆಗಳಿಗೆ ನೀರನ್ನು ತುಂಬಿಸುವುದಕ್ಕೆ ಸಂಬಂಧಿಸಿದಂತೆ 2018ರಲ್ಲಿ ನಾನು ಕ್ಷೇತ್ರದ ಶಾಸಕನಾಗಿದ್ದ ಅವಧಿಯಲ್ಲಿ ಕಾಮಗಾರಿಗೆ ಅನುಮೋದನೆಯಾಗಿತ್ತು ಎಂದರು.
ಈ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸಿ ಕೆ.ಆರ್.ಪೇಟೆ, ನಾಗಮಂಗಲ ಮತ್ತು ಚನ್ನರಾಯಪಟ್ಟಣ ತಾಲೂಕುಗಳ 69 ಗ್ರಾಮಗಳಿಗೆ ಕುಡಿಯುವ ನೀರನ್ನು ಒದಗಿಸಿ ಜನರ ಕುಡಿಯುವ ನೀರಿನ ಬವಣೆ ನೀಗಿಸಬೇಕು ಎಂದು ಸಚಿವರಲ್ಲಿ ಕೋರಿದರು.