ಇಂದಿರಾ ಕ್ಯಾಂಟಿನ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

KannadaprabhaNewsNetwork |  
Published : Sep 30, 2024, 01:34 AM IST
ಲಕ್ಷ್ಮೇಶ್ವರದಲ್ಲಿ ನಡೆದ ಇಂದಿರಾ ಕ್ಯಾಂಟಿನ್‌ ನಿರ್ಮಾಣ ಕಾಮಗಾರಿಯನ್ನ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಕೆ.ಪಾಟೀಲ ವೀಕ್ಷಿಸಿದರು. | Kannada Prabha

ಸಾರಾಂಶ

ಇಂದಿರಾ ಕ್ಯಾಂಟಿನ್‌ಗೆ ಸಂಬಂಧಿಸಿದಂತೆ ಕಾಮಗಾರಿ ಶೇ.90 ರಷ್ಟು ಮುಗಿದಿದೆ. ನೆಲಕ್ಕೆ ಕಾಂಕ್ರೀಟ್‌ ಹಾಕುವುದು, ಸುತ್ತಲೂ ಗೋಡೆ ನಿರ್ಮಿಸುವುದು ಮುಗಿಸಿದ್ದೇವೆ

ಲಕ್ಷ್ಮೇಶ್ವರ: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಬಡವರ ಪರವಾಗಿರುವ ಈ ಇಂದಿರಾ ಕ್ಯಾಂಟಿನ್ ಕಾಮಗಾರಿ ಆದಷ್ಟು ಬೇಗ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಹೇಳಿದರು.

ಪಟ್ಟಣದಲ್ಲಿ ನಡೆದ ಇಂದಿರಾ ಕ್ಯಾಂಟಿನ್ ನಿರ್ಮಾಣ ಕಾಮಗಾರಿ ವೀಕ್ಷಿಸಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನಲ್ಲಿನ ಇಂದಿರಾ ಗಾಂಧಿ ಚಿತ್ರ ಸರಿಯಾಗಿ ಜನರಿಗೆ ಕಾಣುವಂತೆ ಸ್ಪಷ್ಟವಾಗಿ ಮೂಡಿಬರಬೇಕು. ಈ ಕ್ಯಾಂಟಿನ್ ಎಲ್ಲರಿಗೂ ಆಕರ್ಷಿಸುವಂತೆ ಇರಬೇಕು ಸರಿಯಾಗಿ ನಿರ್ವಹಣೆ ಮಾಡಬೇಕು. ಈ ಯೋಜನೆ ಎಲ್ಲರಿಗೂ ತಲಪುವಂತೆ ಮಾಡಬೇಕು ಎಂದು ಪುರಸಭೆಯ ಮುಖ್ಯಾಧಿಕಾರಿಗಳಿಗೆ ಸೂಚಿಸಿದರು.

ಪುರಸಭೆಯ ಮುಖ್ಯಾಧಿಕಾರಿ ಮಹೇಶ ಹಡಪದ ಕಾಮಗಾರಿಯ ಕುರಿತು ಮಾಹಿತಿ ನೀಡಿ, ಇಂದಿರಾ ಕ್ಯಾಂಟಿನ್‌ಗೆ ಸಂಬಂಧಿಸಿದಂತೆ ಕಾಮಗಾರಿ ಶೇ.90 ರಷ್ಟು ಮುಗಿದಿದೆ. ನೆಲಕ್ಕೆ ಕಾಂಕ್ರೀಟ್‌ ಹಾಕುವುದು, ಸುತ್ತಲೂ ಗೋಡೆ ನಿರ್ಮಿಸುವುದು ಮುಗಿಸಿದ್ದೇವೆ. ಉಳಿದ ಕೆಲಸ ಶೀಘ್ರ ಮಾಡುತ್ತೇವೆ ಎಂದು ತಿಳಿಸಿದರು.

ಪುರಸಭೆ ಸದಸ್ಯ ಮಹೇಶ ಹೊಗೆಸೊಪ್ಪಿನ ಮಾತನಾಡಿ, ಲಕ್ಷ್ಮೇಶ್ವರದಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ ಒದಗಿಸಬೇಕು ಎಂದು ಕೈ ಮುಗಿದು ಮನವಿ ಮಾಡಿ, ಅಮೃತ ಯೋಜನೆ ಕುಡಿಯುವ ನೀರಿಗೆ ಇಡಲಾಗಿರುವ ಹಣ ವಿನಿಯೋಗಿಸಿ ಆದಷ್ಟು ಶೀಘ್ರ ಕಾಮಗಾರಿ ಪ್ರಾರಂಭಿಸಿ ಸಂಬಂಧ ಪಟ್ಟವರಿಗೆ ನಿರ್ದೇಶಿಸಬೇಕು ಎಂದರು.

ಈ ವೇಳೆ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ಪುರಸಭೆ ಅಧ್ಯಕ್ಷೆ ಯಲ್ಲವ್ವ ದುರಗಣ್ಣನವರ, ಉಪಾಧ್ಯಕ್ಷ ಫಿರ್ದೋಷ ಅಡೂರ, ಸದಸ್ಯರಾದ ಬಸವರಾಜ ಓದುನವರ, ಪ್ರವೀಣ ಬಾಳಿಕಾಯಿ, ಮುಸ್ತಾಕ್ ಅಹ್ಮದ ಶಿರಹಟ್ಟಿ, ಸಿಕಂದರ್ ಕಣಕೆ, ಆರೋಗ್ಯ ನಿರೀಕ್ಷಕ ಮಂಜುನಾಥ ಮುದಗಲ್, ಗುರುನಾಥ ದಾನಪ್ಪನವರ, ಚೆನ್ನಪ್ಪ ಜಗಲಿ, ರಫೀಕ ಕಲಬುರ್ಗಿ, ದೀಪಕ್ ಲಮಾಣಿ, ಫಕ್ಕೀರೇಶ ನಂದೆಣ್ಣನವರ, ದಾದಪೀರ್‌ ಮುಚ್ಚಾಲೆ, ಅಣ್ಣಪ್ಪ ರಾಮಗೇರಿ, ತಿಪ್ಪಣ್ಣ ಸಂಶಿ, ಸಿದ್ದು ದುರಗಣ್ಣವರ ಸೇರಿದಂತೆ ಮುಂತಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಸ್ಲಿಮರು ಸೂರ್‍ಯನಮಸ್ಕಾರ ಮಾಡ್ಬೇಕು : ಹೊಸಬಾಳೆ ಕರೆ
ರೈಲ್ವೆ ಬಡ್ತಿ ಪರೀಕ್ಷೆ ಕನ್ನಡದಲ್ಲೂ ನಡೆಸಲು ಸೋಮಣ್ಣ ತಾಕೀತು