ಕನಕ ಭವನ ಪೂರ್ಣಗೊಳಿಸಿ, ಶೀಘ್ರ ಲೋಕಾರ್ಪಣೆ ಮಾಡಿ

KannadaprabhaNewsNetwork |  
Published : Jul 07, 2024, 01:17 AM IST
ಕನಕ ಭವನ  ಪೂರ್ಣಗೊಳಿಸಿ, ಶೀಘ್ರ  ಲೋಕಾರ್ಪಣೆ ಮಾಡಲು ನಗರಾಭಿವೃದ್ದಿ  ಸಚಿವ ಬಿ.ಎಸ್.  ಸುರೇಶ್ ಸೂಚನೆ  | Kannada Prabha

ಸಾರಾಂಶ

ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನ ಕಾಮಗಾರಿ ಸ್ಥಳಕ್ಕೆ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಪೌರಾಡಳಿತ ಸಚಿವ ರಹೀಂ ಖಾನ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಎಸ್‌ಪಿಕೆ ಉಮೇಶ್ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲಾ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಕನಕ ಭವನವನ್ನು ಆದಷ್ಟು ಬೇಗ ಪೂರ್ಣಗೊಳಿಸಿ, ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಿಕೊಡುವುದಾಗಿ ನಗರಾಭಿವೃದ್ದಿ ಸಚಿವ ಭೈರತಿ ಬಿ.ಎಸ್. ಸುರೇಶ್ ತಿಳಿಸಿದರು.

ಚಾ.ನಗರದ ಸಂಘದ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಸ್‌ಪಿಕೆ ಉಮೇಶ್ ಮಾತನಾಡಿ, ಈಗಾಗಲೇ ಕನಕ ಭವನ ನಿರ್ಮಾಣ ಕಾಮಗಾರಿಗೆ 2 ಕೋಟಿ ರು. ಬಿಡುಗಡೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಕೆಲವು ತಿಂಗಳ ಹಿಂದೆ ಭೇಟಿ ನೀಡಿ, ಅನುದಾನ ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ಕೊಟ್ಟಿದ್ದರು. ಕನಕ ಭವನ ಜಿಲ್ಲಾ ಕೇಂದ್ರದಲ್ಲಿ ಸುಸಜ್ಜಿತವಾಗಿ ನಿರ್ಮಾಣ ಮಾಡಲು ೬.೫೦ ಕೋಟಿ ರು.ಗಳ ಅಂದಾಜು ಪಟ್ಟಿಯನ್ನು ತಯಾರಿಸಲಾಗಿದೆ. ಸಿಎಂ ಅವರು ಅನುದಾನ ಇತರೇ ಹಣವನ್ನು ಕ್ರೋಡೀಕರಿಸಿಕೊಂಡು ಕಟ್ಟಡ ನಿರ್ಮಾಣವಾಗುತ್ತಿದ್ದು, ಹೆಚ್ಚುವರಿ ಅನುದಾನದ ಅಗತ್ಯವಿದ್ದು, ತಾವು ಅನುದಾನ ಕೊಡಿಸಲು ಹೆಚ್ಚಿನ ಸಹಕಾರ ನೀಡಬೇಕು ಎಂದು ಮನವಿ ಮಾಡಿಕೊಂಡರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ಅವರ ಗಮನಕ್ಕೂ ತನ್ನಿ, ನಾನು ಸಿಎಂ ಜೊತೆ ಚರ್ಚಿಸಿ, ಅಗತ್ಯ ಅನುದಾನ ಬಿಡುಗಡೆಗೊಳಿಸುವ ಜೊತೆಗೆ ಶೀಘ್ರದಲ್ಲಿಯೇ ಕನಕ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಸ್ತುವಾರಿ ಸಚಿವ ವೆಂಕಟೇಶ್ ಅವರ ನೇತೃತ್ವದಲ್ಲಿ ಉದ್ಘಾಟನೆ ಮಾಡಿಸುವ ದಿಕ್ಕಿನಲ್ಲಿ ಚಿಂತನೆ ಮಾಡೋಣ. ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಎಂದು ಸಂಘದ ಅಧ್ಯಕ್ಷ ಹಾಗೂ ಪದಾಧಿಕಾರಿಗಳಿಗೆ ಸುರೇಶ್ ಸೂಚನೆ ನೀಡಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಪೌರಾಡಳಿತ ಸಚಿವ ರಹೀಂ ಖಾನ್, ಸಂಘದ ಉಪಾಧ್ಯಕ್ಷ ಜಿ. ಮಹೇಶ್, ಗೌರವ ಅಧ್ಯಕ್ಷ ಹಳೇಪುರ ಬೆಳ್ಳೇಗೌಡ, ಪ್ರಧಾನ ಕಾರ್ಯದರ್ಶಿ ಕೆ.ಪಿ. ನಾಗರಾಜು, ನಿರ್ದೇಶಕರಾದ ಮಹೇಶ, ಕುಮಾರ್, ಚಿಕ್ಕರಾಜು, ನಟರಾಜು, ಚನ್ನೇಗೌಡ, ಶಿವಕುಮಾರ್, ಬಸವಣ್ಣ, ಮಹದೇವ್, ಉಷಾ ಲೋಕೇಶ್, ಮಾಜಿ ಉಪಾಧ್ಯಕ್ಷ ಮಾದಾಪುರ ರವಿಕುಮಾರ್, ಹಾಗೂ ಸಮಾಜದ ಮುಖಂಡರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ