ಸೆಪ್ಟೆಂಬರ್‌ನೊಳಗೆ ಕಾಮಗಾರಿ ಪೂರ್ಣಗೊಳಿಸಿ: ಜಿಪಂ ಸಿಇಒ

KannadaprabhaNewsNetwork |  
Published : Aug 05, 2025, 12:30 AM IST
4ಕೆಎಂಎನ್ ಡಿ25 | Kannada Prabha

ಸಾರಾಂಶ

ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಮಂಡ್ಯ

ಲೆಕ್ಕಶೀರ್ಷಿಕೆ 3054, ಗ್ರಾಮ ವಿಕಾಸ ಮತ್ತು ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆಗಳು ಹಳೆಯ ಯೋಜನೆಗಳಾಗಿವೆ. ಈ ಯೋಜನೆಗಳನ್ನು ಸೆಪ್ಟೆಂಬರ್‌ 2025ರೊಳಗೆ ಪೂರ್ಣಗೊಳಿಸಬೇಕೆಂದು ಜಿಪಂ ಸಿಇಒ ಕೆ.ಆರ್.ನಂದಿನಿ ಕೆ.ಆರ್.ಐ.ಡಿ.ಎಲ್ ನ ಅಭಿಯಂತರರುಗಳಿಗೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯ್ತಿ ಮಿನಿ ಸಭಾಂಗಣದಲ್ಲಿ ನಡೆದ ಲೆಕ್ಕಶೀರ್ಷಿಕೆ 5054, 3054, ಗ್ರಾಮ ವಿಕಾಸ, ಮುಖ್ಯ ಮಂತ್ರಿ ಗ್ರಾಮ ವಿಕಾಸ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈ ಯೋಜನೆಗಳು ಅನುಮೋದನೆಗೊಂಡು ವರ್ಷಗಳೇ ಕಳೆದರೂ ಪೂರ್ಣಗೊಳಿಸಿಲ್ಲ. ಆದ್ದರಿಂದ, ಈ ಬಗ್ಗೆ ವಿಶೇಷ ಗಮನಹರಿಸಿ ಎಲ್ಲಾ ಕಾಮಗಾರಿಗಳನ್ನು ನಿಯಮಾನುಸಾರ ಪೂರ್ಣಗೊಳಿಸಿ ಹಸ್ತಾಂತರ ಮಾಡುವಂತೆ ಸೂಚಿಸಿದರು.

ಮುಖ್ಯ ಮಂತ್ರಿಗಳ ವಿಶೇಷ ಅನುದಾನ, ಮಳೆ, ಪ್ರವಾಹ ಹಾಗೂ ಎಸ್.ಸಿ.ಪಿ ಮತ್ತು ಟಿ.ಎಸ್.ಪಿ. ಯೋಜನೆಯ ಕಾಮಗಾರಿಗಳನ್ನು ಅವುಗಳ ಅನುದಾನ ಬಿಡುಗಡೆಯ ಆಧಾರದಲ್ಲಿ ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.

ಕೆಆರ್ ಐಡಿಎಲ್ ಸಂಸ್ಥೆಯಿಂದ ಅನುಷ್ಟಾನ ಮಾಡಲಾಗುತ್ತಿರುವ ಎಲ್ಲಾ ಕಾಮಗಾರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕು. ಈ ತಿಂಗಳಲ್ಲಿ ಕಾಮಗಾರಿಗಳ ಗುಣಮಟ್ಟ ಪರೀಕ್ಷಿಸಲು ಅನಿರೀಕ್ಷಿತ ಭೇಟಿ ನೀಡಲಾಗುವುದು ಎಂದರು.

ಸಂಸ್ಥೆಗೆ ವಹಿಸಲಾಗುವ ಕಾಮಗಾರಿಗಳನ್ನು ಯಾವುದೇ ವಿಳಂಬಕ್ಕೆ ಆಸ್ಪದವಿಲ್ಲದಂತೆ ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ವಹಿಸಬೇಕು, ವಿಳಂಬಕ್ಕೆ ಕಾರಣರಾಗುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಂಡು ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಪಂ ಉಪಕಾರ್ಯದರ್ಶಿ (ಅಭಿವೃದ್ಧಿ) ಪಿ.ಲಕ್ಷ್ಮಿ, ಜಿಪಂ ಸಹಾಯಕ ಕಾರ್ಯದರ್ಶಿ (ಅಭಿವೃದ್ಧಿ) ಚಂದ್ರು, ಕೆಆರ್‌ಐಡಿಎಲ್‌ನ ಕಾರ್ಯಪಾಲಕ ಅಭಿಯಂತರ ಸೋಮಶೇಖರ್ ಸೇರಿದಂತೆ ಇತರೆ ಅಧಿಕಾರಿ/ಸಿಬ್ಬಂದಿ ಹಾಜರಿದ್ದರು.

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪಾಂಡವಪುರ: ರಾಜ್ಯ ಮಡಿವಾಳರ ಸಂಘದಿಂದ ರಾಜ್ಯಾಧ್ಯಕ್ಷ ಸಿ.ನಂಜಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಬಿ.ಆರ್.ಪ್ರಕಾಶ್ ಸಮ್ಮುಖದಲ್ಲಿ ಆಗಸ್ಟ್ 17ರ ಭಾನುವಾರ ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಮಡಿವಾಳರ ಸಂಘದ ಅಧ್ಯಕ್ಷ ಎಚ್.ಎನ್.ರಾಮಚಂದ್ರ ತಿಳಿಸಿದರು.

ಸಮುದಾಯದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.70 ರಷ್ಟು ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.80ಕ್ಕಿಂತ ಅಧಿಕ ಅಂಕ ಪಡೆದು ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಆಗಸ್ಟ್ 5ರ ಒಳಗಾಗಿ ಅರ್ಜಿ ಸಲ್ಲಿಸಬೇಕು ಎಂದರು. ಈ ವೇಳೆ ಸಂಘದ ಪ್ರಧಾನ ಕಾರ್ಯದರ್ಶಿ ಮಹದೇವು, ಪದಾಧಿಕಾರಿಗಳಾದ ಕೊಡಾಲ ಯೋಗಶೆಟ್ಟಿ, ಶಿವಕುಮಾರ್, ಅಗಟಹಳ್ಳಿ ರಘು ಇತರರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ