ಶೀಘ್ರದಲ್ಲೇ ನೈಟ್ ಲ್ಯಾಂಡಿಂಗ್ ಕಾಮಗಾರಿ ಪೂರ್ಣಗೊಳಿಸಿ: ನಂಜಯ್ಯ ಮಠ

KannadaprabhaNewsNetwork |  
Published : May 04, 2026, 02:00 AM IST
ಪೊಟೊ: 02ಎಸ್‌ಎಂಜಿಕೆಪಿ05 | Kannada Prabha

ಸಾರಾಂಶ

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷ ನಂಜಯ್ಯ ಮಠ ಅವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

ಶಿವಮೊಗ್ಗ: ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷ ನಂಜಯ್ಯ ಮಠ ಅವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

ಶನಿವಾರ ಶಿವಮೊಗ್ಗ ನಗರಕ್ಕೆ ಆಗಮಿಸಿ, ವಿಮಾನ ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದ ಅವರು, ಈ ತಿಂಗಳ 7 ಮತ್ತು 8 ರಂದು ನಾನು ಮತ್ತೊಮ್ಮೆ ಬರುತ್ತೇನೆ, ಅದರೊಳಗೆ ನೈಟ್ ಲ್ಯಾಂಡಿಂಗ್ ಕಾಮಗಾರಿ ಸಂಪೂರ್ಣಗೊಳಿಸಬೇಕು ಎಂದು ಕಾಮಗಾರಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರರಿಗೆ ಸೂಚಿಸಿದರು. ಜೂನ್ ತಿಂಗಳ ಮೊದಲನೇ ವಾರದಲ್ಲಿ ನೈಟ್ ಲ್ಯಾಂಡಿಂಗ್ ಕಾಮಗಾರಿ ಪೂರ್ಣಗೊಳ್ಳಲಿದೆ ಎಂಬ ಭರವಸೆಯನ್ನು ಅಧಿಕಾರಿಗಳು ನೀಡಿದರು.

ಇದರ ಜೊತೆಗೆ ಇಂಡಿಗೋ ವಿಮಾನ ಸಂಸ್ಥೆ ಪ್ರಯಾಣವನ್ನು ನಿಲ್ಲಿಸಿರುವುದು ಈ ನೈಟ್ ಲ್ಯಾಂಡಿಂಗ್ ವಿಚಾರಕ್ಕೂ ಯಾವುದೇ ರೀತಿಯ ಸಂಬಂಧ ಇಲ್ಲ. ನೈಟ್ ಲ್ಯಾಂಡಿಂಗ್ ಕಾಮಗಾರಿಗೆ ಸಂಪೂರ್ಣ ರಾಜ್ಯ ಸರ್ಕಾರವೇ ಹಣವನ್ನು ನೀಡಿದ್ದು, ಇಂಡಿಗೋ ವಿಮಾನವು ಕೇಂದ್ರ ಸರ್ಕಾರದ ಅಸ್ತಿತ್ವದಲ್ಲಿರುವುದರಿಂದ ಪೈಲೆಟ್‌ಗಳ ಕೊರತೆಯಿಂದ ಚಾಲನೆಯನ್ನು ನಿಲ್ಲಿಸಿದೆ ಎಂದು ಹೇಳಿದರು. ಶಿವಮೊಗ್ಗ ನಗರದಲ್ಲಿ ನೈಟ್ ಲ್ಯಾಂಡಿಂಗ್ ವಿಚಾರವಾಗಿ ಕಾಂಗ್ರೆಸ್ ಮುಖಂಡ ಎಚ್. ಸಿ. ಯೋಗೇಶ್ ಅವರು ಹಲವು ಬಾರಿ ಮನವಿ ನೀಡಿದ್ದರು. ಈ ಸಂಬಂಧ ನೈಟ್ ಲ್ಯಾಂಡಿಂಗ್ ಚಾಲನೆಗೆ ಇಂಡಿಗೋ ವಿಮಾನ ಸಂಸ್ಥೆ ಹಾಗೂ ಇನ್ನುಳಿದ ಅನೇಕ ವಿಮಾನ ಸಂಸ್ಥೆಗಳೊಂದಿಗೆ ಚರ್ಚಿಸಿ ಶಿವಮೊಗ್ಗ ನಗರಕ್ಕೆ ವಿಮಾನದ ಸೂಕ್ತ ವ್ಯವಸ್ಥೆ ಕಲ್ಪಿಸುವುದಾಗಿ ತಿಳಿಸಿದರು.-------

ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ) ಅಧ್ಯಕ್ಷ ನಂಜಯ್ಯ ಮಠ ಅವರು ಶಿವಮೊಗ್ಗ ನಗರ ವಿಮಾನ ನಿಲ್ದಾಣದಲ್ಲಿ ಕಾಮಗಾರಿಯನ್ನು ವೀಕ್ಷಣೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಗಿಲು ತೆರೆಯದ ಬಹು ನಿರೀಕ್ಷಿತ ಕ್ರೀಡಾ ಸಂಕೀರ್ಣ!
ಬಿಎಸ್‌ವೈ ಅಭಿಮಾನೋತ್ಸವಕ್ಕೆ ಜಿಲ್ಲೆಯಿಂದ ೫೦ ಸಾವಿರ ಅಭಿಮಾನಿಗಳು