ಮಲೆ ಮಾದೇಶ್ವರ ಬೆಟ್ಟ ನಿಗದಿತ ಸಮಯದಲ್ಲಿ ಕಾಮಗಾರಿ ಮುಗಿಸಿ; ಡೀಸಿ ಶಿಲ್ಪಾನಾಗ್‌

KannadaprabhaNewsNetwork |  
Published : Jul 15, 2025, 11:45 PM IST
ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ  ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪನಾಗ್ | Kannada Prabha

ಸಾರಾಂಶ

ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

ಕನ್ನಡಪ್ರಭ ವಾರ್ತೆ, ಹನೂರು

ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ನಾಗಮಲೆ ಭವನದಲ್ಲಿ ನಡೆದ ಅಭಿವೃದ್ಧಿ ಕಾಮಗಾರಿಗಳ ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರನ ಬೆಟ್ಟದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಆವರಣ ಕುರಿತು ಹಾಗೂ ನೂತನ ದಾಸೋಹ ಭವನ ಕಾಂಪ್ಲೆಕ್ಸ್ ಸುರಂಗ ಮಾರ್ಗ ಸರತಿ ಸಾಲಿನ ಸಂಕೀರ್ಣ ಪಾರ್ಕಿಂಗ್, ಶೌಚಾಲಯ ಹಾಗೂ ಇನ್ನಿತರ ಕಾಮಗಾರಿಗಳು ನಡೆಯುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಸಭೆಯಲ್ಲಿ ಅಧಿಕಾರಿಯ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಶಾಸಕ ಎಂಆರ್ ಮಂಜುನಾಥ್ ಮಾತನಾಡಿ ತಾಲೂಕಿನಲ್ಲಿ ಮಳೆಯ ಕೊರತೆಯಿಂದ ಕುಡಿಯುವ ನೀರಿನ ಸಮಸ್ಯೆ ಉಲ್ಬಣಸಿದೆ. ಹೀಗಾಗಿ ಶ್ರೀ ಕ್ಷೇತ್ರದಲ್ಲಿ ನೀರಿನ ಸಮಸ್ಯೆ ತಲೆ ದೂರದಂತೆ ಕ್ರಮ ಕೈಗೊಳ್ಳಬೇಕು ನಡೆಯುತ್ತಿರುವ ಕಾಮಗಾರಿಗಳು ನಿಗದಿತ ಸಮಯದಲ್ಲಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಮುಂದಿನ ಜಾತ್ರಾ ವಿಶೇಷ ದಿನಗಳಲ್ಲಿ ಮಾದಪ್ಪನ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಸಕಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಹನೂರು ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣೆ ಅಧಿಕಾರಿ ಉಮೇಶ್ ಅವರಿಗೆ ಸೂಚನೆ ನೀಡಿ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮೋನರೊತ್, ಕಾರ್ಯದರ್ಶಿ ಎ. ಇ ರಘು, ಉಪಕಾರ್ಯದರ್ಶಿ ಚಂದ್ರಶೇಖರ್ ಇನ್ನಿತರ ಅಧಿಕಾರಿ ಸಿಬ್ಬಂದಿ ವರ್ಗದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ