ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ

KannadaprabhaNewsNetwork |  
Published : Jul 19, 2025, 01:00 AM IST
ಜಿಪಂ ಸಿಇಒ ರಾಹುಲ ಶಿಂಧೆ ಅವರು ಬೆಳಗಾವಿ ಮತ್ತು ಚಿಕ್ಕೋಡಿ ವಿಭಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು | Kannada Prabha

ಸಾರಾಂಶ

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರಿಯ ಹಾಗೂ ಸ್ಥಳೀಯ ಕಾಮಗಾರಿಗಳು ಸೇರಿದಂತೆ ಒಟ್ಟು 1347 ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದ್ದು ಇದರಲ್ಲಿ ಪೂರ್ಣಗೊಂಡ ಕಾಮಗಾರಿಗಳು 760 ಮಾತ್ರ. ಜತೆಗೆ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಜಿಲ್ಲೆಯಲ್ಲಿ ವಿವಿಧ ಇಲಾಖೆಗಳ ಕೇಂದ್ರಿಯ ಹಾಗೂ ಸ್ಥಳೀಯ ಕಾಮಗಾರಿಗಳು ಸೇರಿದಂತೆ ಒಟ್ಟು 1347 ಕಾಮಗಾರಿಗಳನ್ನು ಅನುಷ್ಠಾನಗೊಳಿಸುತ್ತಿದ್ದು ಇದರಲ್ಲಿ ಪೂರ್ಣಗೊಂಡ ಕಾಮಗಾರಿಗಳು 760 ಮಾತ್ರ. ಜತೆಗೆ ಪ್ರಗತಿ ಹಂತದಲ್ಲಿರುವ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪ್ರಗತಿ ಸಾಧಿಸಬೇಕು ಎಂದು ಜಿಪಂ ಸಿಇಒ ರಾಹುಲ್‌ ಶಿಂಧೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಪಂ ಸಭಾ ಭವನದಲ್ಲಿ ಕರ್ನಾಟಕ ರೂರಲ್ ಇನ್‌ಫ್ರಾಸ್ಟ್ರಕ್ಷರ್ ಡೆವಲಪ್‌ಮೆಂಟ್ ಲಿಮಿಟೆಡ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಅ‍ವರು ಮಾತನಾಡಿದರು. ಅದೇ ರೀತಿ ವಿವಿಧ ಕಾಮಗಾರಿಗಳಿಗೆ ಅನುದಾನದ ಅವಶ್ಯಕತೆ ಇದ್ದಲ್ಲಿ ಅನುದಾನ ಬಿಡುಗಡೆಗಾಗಿ ಸರ್ಕಾರಕ್ಕೆ ಪತ್ರ ಬರೆಯಲು ಕಾರ್ಯನಿರ್ವಾಹಕ ಅಭಿಯಂತರರು ಕೆಆರ್‌ಐಡಿಎಲ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದವರಿಗೆ ಸೂಚಿಸಿದರು.ಕಾರ್ಯನಿರ್ವಾಹಕ ಅಭಿಯಂತರರು ಕೆಆರ್‌ಐಡಿಎಲ್ ಬೆಳಗಾವಿ ಮತ್ತು ಚಿಕ್ಕೋಡಿ ವಿಭಾಗದವರು ಎಲ್ಲ ಇಲಾಖೆಗಳ ಅನುಷ್ಠಾನಗೊಳಿಸುತ್ತಿರುವ ಕಾಮಗಾರಿಗಳ ಮೇಲುಸ್ತುವಾರಿ ವಹಿಸಿ ಗುಣಮಟ್ಟದ ಪ್ರಗತಿ ಸಾಧಿಸುವುದು ಹಾಗೂ ಪ್ರತಿ ತಿಂಗಳು ಪ್ರಗತಿಯ ವರದಿಯನ್ನು ಜಿಲ್ಲಾ ಪಂಚಾಯತಿಗೆ ಸಲ್ಲಿಸುವುದು. ಕಾಮಗಾರಿಗಳನ್ನು ಪ್ರಾರಂಭಿಸಲು ಸ್ಥಳದ ಸಮಸ್ಯೆ ಇರುವ ಕಾಮಗಾರಿಗಳ ಬಗ್ಗೆ ಸಂಬಂಧಿಸಿದ ಶಾಸಕರ ಗಮನಕ್ಕೆ ತಂದು ಅವರ ಸಹಕಾರದಿಂದ ಸ್ಥಳದ ಸಮಸ್ಯೆ ನಿವಾರಿಸಿ ಬೇಗನೆ ಕಾಮಗಾರಿಗಳನ್ನು ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು.ಕೆ.ಆರ್.ಐ.ಡಿ.ಎಲ್ ಬೆಳಗಾವಿ ಕಾರ್ಯನಿರ್ವಾಹಕ ಅಭಿಯಂತರ ಶಶಿಕಾಂತ ಬ. ಶೆಗುಣಸಿ ಮಾತನಾಡಿ, ಗ್ರಾಮ ವಿಕಾಸ ಯೋಜನೆ ಹಾಗೂ ಮುಖ್ಯಮಂತ್ರಿ ಗ್ರಾಮ ವಿಕಾಸ ಯೋಜನೆಯ ಕಾಮಗಾರಿಗಳು ಪ್ರಗತಿ ಹಂತದಲ್ಲಿವೆ ಎಂದು ವಿವರಿಸಿದರು. ಈ ಸಂದರ್ಭದಲ್ಲಿ ಉಪ ಕಾರ್ಯದರ್ಶಿಗಳು(ಅಭಿವೃದ್ಧಿ) ಬಸವರಾಜ್ ಅಡವಿಮಠ, ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಬೆಳಗಾವಿ ವಿಭಾಗ ಶಶಿಕಾಂತ ಬ. ಶೆಗುಣಸಿ, ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಚಿಕ್ಕೋಡಿ ವಿಭಾಗ ರೇಣು ಜ್ಯೋತಿ, ಪಿ. ನಾರಾಯಣಕರ್, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಕಿತ್ತೂರ ಕೆ.ರಾಮಣ್ಣ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಸವದತ್ತಿ ಎಚ್.ಎ.ಕದ್ರಾಪೂರಕರ, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಕೆ.ಆರ್.ಐ.ಡಿ.ಎಲ್ ಉಪ ವಿಭಾಗ ಅಥಣಿ ಶಂಕರ ಚವ್ಹಾಣ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

PREV

Latest Stories

ಪರೋಕ್ಷವಾಗಿ ಡಿಕೆ ಸಿಎಂ ಎಂದ ಶಾಸಕ : ಗೂಢಾರ್ಥದ ಹೇಳಿಕೆ
ಬಿ.ಸರೋಜಾದೇವಿ ಹೆಸರಲ್ಲಿ ಪ್ರಶಸ್ತಿ ಸ್ಥಾಪಿಸಲು ಸಿಎಂಗೆ ತಾರಾ ಮನವಿ
ಮುಡಾ ಕೇಸ್ ಒಂದು ಸುಳ್ಳು ಸೃಷ್ಟಿ : ಬೈರತಿ ಸುರೇಶ್