ಅನಗತ್ಯ ವಿಳಂಬ ಮಾಡದೆ ಕೆಲಸ ಪೂರ್ಣಗೊಳಿಸಿ

KannadaprabhaNewsNetwork |  
Published : Apr 13, 2024, 01:05 AM IST
ತರೀಕೆರೆಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ | Kannada Prabha

ಸಾರಾಂಶ

ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಅನಗತ್ಯ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸ ಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜಿ.ತಿರುಮಲೇಶ್ ಸೂಚಿಸಿದ್ದಾರೆ.

ತರೀಕೆರೆ: ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕರ ಕೆಲಸಗಳನ್ನು ಅನಗತ್ಯ ವಿಳಂಬ ಮಾಡದೆ ತ್ವರಿತವಾಗಿ ಪೂರ್ಣಗೊಳಿಸ ಬೇಕು ಎಂದು ಲೋಕಾಯುಕ್ತ ಡಿವೈಎಸ್ಪಿ ಜೆ.ಜಿ.ತಿರುಮಲೇಶ್ ಸೂಚಿಸಿದ್ದಾರೆ.ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ಚಿಕ್ಕಮಗಳೂರು ಜಿಲ್ಲೆಯಿಂದ ಏರ್ಪಡಿಸಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡುತ್ತಿದ್ದರು. ಆಡಳಿತ ಯಂತ್ರ ಸುಧಾರಣೆ ಮತ್ತು ಬಲಪಡಿಸುವ ಉದ್ದೇಶಕ್ಕಾಗಿ ಲೋಕಾಯುಕ್ತ ಸಂಸ್ಥೆ ಮತ್ತು ಕಾಯಿದೆ ಇದೆ. ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ಆಧಾರಿತ ನೌಕರರು ಕೆಲಸ ಮಾಡಿಕೊಡಲು ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆ ಇಟ್ಟರೆ, ಆದಾಯಕ್ಕಿಂತ ಹೆಚ್ಚು ಆಸ್ತಿ ಸಂಪಾದನೆ ಮಾಡಿದರೆ ಪ್ರಕರಣ ದಾಖಲಿಸಿಕೊಳ್ಳಬಹುದಾಗಿದೆ. ಕಾನೂನು ಮೀರಿ ಮಾಡಿದ ಕೆಲಸಗಳಿಗೆ ಯಾರಿಂದಲೂ ರಕ್ಷಣೆ ಸಿಗುವುದಿಲ್ಲ ಎಂದು ಎಚ್ಚರಿಸಿದರು.ಮೂಲ ಸರ್ವೆ ಸ್ಕೆಚ್ ವ್ಯತ್ಯಾಸವಾಗಿದ್ದು ಸರಿಪಡಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಬೇಕೆಂದು ಬೆಟ್ಟದಹಳ್ಳಿ ಗ್ರಾಮದ ಜಯಪ್ಪ ದೂರು ನೀಡಿದರು. ಪುರಸಭೆನಿಯಮಗಳನ್ನು ಗಾಳಿಗೆ ತೂರಿ, ಷರತ್ತುಗಳನ್ನು ಉಲ್ಲಂಘಿಸಿ ಪಟ್ಟಣದ ಬೇಗೂರಯ್ಯನ ಬೀದಿಯಲ್ಲಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಪಟ್ಟಣದ ಟಿ.ಆರ್.ಸೋಮಶೇಖರಯ್ಯ ದೂರು ನೀಡಿದರು.

12ಕೆಟಿಆರ್.ಕೆ.8ಃ

ತರೀಕೆರೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಿದ್ದ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಡಿ.ವೈ.ಎಸ್.ಪಿ.ಜೆ.ಜೆ.ತಿರುಮಲೇಶ್ ಸಾರ್ವಜನಿಕರಿಂದ ದೂರು ಸ್ವೀಕರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುದಾನಿತ ಪಿಯು ಕಾಲೇಜು ನಿವೃತ್ತರ ಗಳಿಕೆ ರಜೆಗೆ 30 ಕೋಟಿ ರು.
ಮೇಲ್ಮನೆಗೆ ಪತ್ರಕರ್ತರ ಕರೆತರಲು ಎಂಎಲ್‌ಸಿ ಆಫರ್‌!