ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸಿ-ಡಿಸಿ ನಳಿನ್ ಅತುಲ್

KannadaprabhaNewsNetwork |  
Published : Oct 28, 2023, 01:15 AM IST
27ಕೆಪಿಎಲ್24 ಪ್ರವಾಸೋಧ್ಯಮ ಇಲಾಖೆಯ ಅಭಿವೃದ್ಧಿಯ ಕುರಿತು ಜಿಲ್ಲಾಧಿಕಾರಿ  ಅವರ ಅಧ್ಯಕ್ಷತೆಯಲ್ಲಿ ಸಭೆ. | Kannada Prabha

ಸಾರಾಂಶ

ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲಾಖೆಯಿಂದ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿ ಹಾಗೂ ಯೋಜನೆಗಳನ್ನು ಇಲಾಖೆಯ ನಿಯಮಗಳನುಸಾರ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.

ಕೊಪ್ಪಳ: ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಇಲಾಖೆಯಿಂದ ಅನುಮೋದನೆಗೊಂಡಿರುವ ಎಲ್ಲ ಕಾಮಗಾರಿ ಹಾಗೂ ಯೋಜನೆಗಳನ್ನು ಇಲಾಖೆಯ ನಿಯಮಗಳನುಸಾರ ಅನುಷ್ಠಾನಗೊಳಿಸಿ ಎಂದು ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಜಿಲ್ಲಾಧಿಕಾರಿ ನಳಿನ್ ಅತುಲ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಪ್ರವಾಸೋದ್ಯಮ ಇಲಾಖೆಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇಲಾಖೆಯಿಂದ ಎಸ್‌ಸಿ-ಎಸ್‌ಟಿ ಸಮುದಾಯದವರಿಗೆ ನೀಡಲಾಗುವ ಪ್ರವಾಸಿ ಟ್ಯಾಕ್ಸಿ ಯೋಜನೆಯು ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ, ಯೋಜನೆಯ ಲಾಭ ಒದಗಿಸಬೇಕು. ನಿರ್ದಿಷ್ಟ ಸಮುದಾಯದ ಫಲಾನುಭವಿಗಳ ಪಟ್ಟಿಯು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಲಭ್ಯವಿದೆ. ಅವರೊಂದಿಗೆ ಸಮನ್ವಯ ಸಾಧಿಸಿ ಅರ್ಹ ಫಲಾನುಭವಿಗಳಿಗೆ ಟ್ಯಾಕ್ಸಿ ಯೋಜನೆಯ ಲಾಭ ಒದಗಿಸಿ ಎಂದು ಅವರು ಇಲಾಖೆಯ ಸಹಾಯಕ ನಿರ್ದೇಶಕರಿಗೆ ತಿಳಿಸಿದರು.

ಅದರಂತೆ ಇಲಾಖೆಯಿಂದ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಜಿಲ್ಲೆಯ ವಿವಿಧ ಪ್ರಮುಖ ದೇವಸ್ಥಾನ, ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಪಡಿಸಲು ಕಾಮಗಾರಿಗಳನ್ನು ಹಂಚಿಕೆ ಮಾಡಲಾಗಿದೆ. ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳಿಸಲು ಅನುಕೂಲವಾಗುವಂತೆ ಅನುಷ್ಠಾನ ಏಜೆನ್ಸಿಗಳನ್ನು ನಿಗದಿಪಡಿಸಲಾಗಿದೆ. ಅನುಷ್ಠಾನ ಏಜೆನ್ಸಿಗಳು ಇಲಾಖೆಯ ನಿಯಮದಂತೆ ನಿಗದಿತ ಕಾಲಮಿತಿಯೊಳಗೆ, ಕ್ರಿಯಾಯೋಜನೆಯಂತೆ ಕಾಮಗಾರಿ ಪೂರ್ಣಗೊಳಿಸಬೇಕು. ಅನಗತ್ಯ ವಿಳಂಬ ಅಥವಾ ಕ್ರಿಯಾಯೋಜನೆಯಲ್ಲಿ ಬದಲಾವಣೆ ಅಥವಾ ಮರು ಆಡಳಿತಾತ್ಮಕ ಅನುಮೋದನೆಗೆ ಅವಕಾಶವಿಲ್ಲ. ಇದರಿಂದ ಸರ್ಕಾರದ ಹಣ ಪೋಲಾಗುವುದರ ಜೊತೆಗೆ ಅಭಿವೃದ್ಧಿ ಕಾರ್ಯವು ಕುಂಠಿತಗೊಳ್ಳುತ್ತದೆ ಎಂದು ಜಿಲ್ಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಬಾಕಿ ಇರುವ ಇಲಾಖಾ ಕಾಮಗಾರಿಗಳನ್ನು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ಹಾಗೂ ಅನುಷ್ಠಾನ ಏಜೆನ್ಸಿಯ ಅಧಿಕಾರಿ ಜಂಟಿಯಾಗಿ ಪರಿಶೀಲನೆ ನಡೆಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು. ಆರಂಭವಾಗದೇ ಇರುವ ಕಾಮಗಾರಿಗಳನ್ನು ಒಂದು ತಿಂಗಳ ಅವಧಿಯೊಳಗೆ ಆರಂಭಗೊಳಿಸಬೇಕು. ಇಲಾಖಾ ಹಂತದಲ್ಲಿ ಪರಿಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಪರಿಹರಿಸಿಕೊಂಡು, ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು. ಅದರಂತೆ ಬ್ರ್ಯಾಂಡ್ ಕೊಪ್ಪಳ ನಿರ್ಮಿಸುವ ಕುರಿತಂತೆ ಕೈಗೊಳ್ಳಬೇಕಾದ ಕ್ರಮಗಳನ್ನು ಸರ್ಕಾರದ ನಿಯಮಾವಳಿ ಪ್ರಕಾರ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ, ಸಹಾಯಕ ಆಯುಕ್ತ ಕ್ಯಾ.ಮಹೇಶ ಮಾಲಗಿತ್ತಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ರಾಜು ತಳವಾರ ಸೇರಿದಂತೆ ಲೀಡ್ ಬ್ಯಾಂಕ್ ಅಧಿಕಾರಿಗಳು, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಅನುಷ್ಠಾನ ಏಜೆನ್ಸಿಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಾವಣಗೆರೆ, ಬಾಗಲಕೋಟೆ ಕ್ಷೇತ್ರ ನಮ್ದೆ : ಡಿ.ಕೆ.ಶಿವಕುಮಾರ್‌
ಟಿಬಿ ಡ್ಯಾಂ ಹಿನ್ನೀರಿನ ಕೈಗಾರಿಕೆ ಲೈಸೆನ್ಸ್‌ ರದ್ದತಿಗಾಗಿ ಹೋರಾಟ