ಆಶ್ರಯ ಮನೆ ನಿರ್ಮಾಣಕ್ಕೆ ಕಾಮಗಾರಿ ಶೀಘ್ರ ಆರಂಭಿಸಿ: ನವೀನ್‌ರಾಜ್ ಸಿಂಗ್

KannadaprabhaNewsNetwork |  
Published : Aug 03, 2024, 12:41 AM IST
ಪೊಟೊ: 2ಎಸ್ಎಂಜಿಕೆಪಿ04ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. | Kannada Prabha

ಸಾರಾಂಶ

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಶ್ರಯ ಮನೆ ನಿರ್ಮಾಣ ಯೋಜನೆ ಕುರಿತು ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್‌ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಾಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ ಜಿ+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ 4836 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್ ಅವರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರಾದ ಸುಶೀಲಮ್ಮ, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಮಹಾನಗರ ಪಾಲಿಕೆ ಆಯುಕ್ತೆ ಡಾ.ಕವಿತಾ ಹಾಗೂ ಆಶ್ರಯ ಯೋಜನೆಯ ಅಧಿಕಾರಿಗಳೊಂದಿಗೆ ನಡೆದ ಮಹತ್ವದ ಸಭೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದ ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರು ಭಾಗವಹಿಸಿ ಚರ್ಚಿಸಿದರು.

ಸ್ಥಳ ಪರಿಶೀಲನೆ ಬಳಿಕ ಮಹಾನಗರ ಪಾಲಿಕೆ, ಮೆಸ್ಕಾಂ. ನೀರು ಸರಬರಾಜು, ಸ್ಲಂ ಬೋರ್ಡ್ ಅಧಿಕಾರಿಗಳ ಉಪಸ್ಥಿತಿಯಲ್ಲಿ ಜಿಲ್ಲಾಧಿಕಾರಿಗಳು, ವಸತಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಸಿದರು.

ಗೋವಿಂದಾಪುರದಲ್ಲಿ ಈಗಾಗಲೇ ನಿರ್ಮಿಸಿ ಹಂಚಿಕೆ ಮಾಡಲಾಗಿರುವ 436 ಮನೆಗಳಿಗೆ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ಪ್ರತ್ಯೇಕ ವಿದ್ಯುತ್ ಸರಬರಾಜು ಯೋಜನೆ, ಕಸವಿಲೇವಾರಿ ವಾಹನ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಯಿತು, ಹಾಗೂ ಉಳಿದ ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕ್ರಮವಹಿ ಸಲು ಕಾಲಮಿತಿ ನಿಗದಿಗೆ ಸೂಚಿಸಿದರು.

ಇನ್ನು, ಗೋಪಶೆಟ್ಟಿಕೊಪ್ಪದಲ್ಲಿ 1836 ಮನೆಗಳ ನಿರ್ಮಾಣಕ್ಕೆ ತುರ್ತಾಗಿ ಕಾಮಗಾರಿ ಆರಂಭಿಸಲು ಸೂಚಿಸಿದರಲ್ಲದೆ, ಅತೀವೃಷ್ಠಿ ಹಾನಿಯಿಂದ ಮನೆಗಳು ಬಿದ್ದಿರುವ ಬಗ್ಗೆ ತುರ್ತಾಗಿ ಪರಿಹಾರ ನೀಡಲು ಮತ್ತು ಅನಧಿಕೃತ ಮನೆಗಳಿಗೆ ವಿಶೇಷ ಪರಿಹಾರ ಒದಗಿಸಲು ಸೂಚಿಸಿದರು. ಕೊಳಚೆ ಅಭಿವೃದ್ಧಿ ಮಂಡಳಿಯಿಂದ ಹಕ್ಕುಪತ್ರ ನೀಡಲು ಬಾಕಿಯಿರುವ ಪ್ರಕರಣಗಳನ್ನು ತುರ್ತಾಗಿ ಕ್ರಮವಹಿಸಲು ಸೂಚಿಸಿದರು.

PREV

Recommended Stories

ಬಾಗಲಕೋಟೆ ತೋಟಗಾರಿಕಾ ವಿಜ್ಞಾನ ವಿವಿಗೆ ಅನುದಾನ: ಸಚಿವ
ಸಂಭ್ರಮದ ಮೌನೇಶ್ವರ ಜಾತ್ರಾ ಮಹೋತ್ಸವ