ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿ ನಗರಸಭೆ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳು ಶಿಬಿರದ ಯೋಜನೆಗೆ ಸಹಕರಿಸಿದವು.
ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಕ್ ಬಾಯಲ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ.ಪಿ. ಗಡಾದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರತ್ನ, ರೆಡ್ ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ, ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಮತ್ತು ನೋಡಲ್ ಅಧಿಕಾರಿ ಜಯಶ್ರೀ, ವಿವಿಧ ವಿವಿಧೊದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಅಲಿಂಕೋ ಸಂಸ್ಥೆಯ ಅಧಿಕಾರಿಗಳು ಮಾರ್ಗದರ್ಶನ ಮಾಡಿದರು.ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಜಿಲ್ಲಾಸ್ವತ್ರೆಯ ವೈದ್ಯಾಧಿಕಾರಿಗಳು ಶಿಬಿರದಲ್ಲಿ ಭಾಗವಹಿಸಿದ್ದಾರೆ ಎಂದು ರೆಡ್ ಕ್ರಾಸ್ ಪಾಯೋಜಿತ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಪ್ರಕಟನೆ ತಿಳಿಸಿದೆ.